ಶಿವಮೊಗ್ಗ | ಲಾರಿ ಚಾಲಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ!

Date:

ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಎದುರು ಶನಿವಾರ ಮಧ್ಯಾಹ್ನ ಸಣ್ಣ ವಿಚಾರಕ್ಕೆ ಗಲಾಟೆ ನಡೆದು, 25 ವರ್ಷದ ಮಹಮ್ಮದ್ ಅಪ್ನಾನ್‌ ಹೆಸರಿನ ಲಾರಿ ಚಾಲಕನಿಗೆ ಚಾಕುವಿನಿಂದ ಇರಿದು, ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ಬೆಳಿಗ್ಗೆ ಸುಮಾರು 10:30 ರ ಸುಮಾರಿಗೆ ಮಹಮ್ಮದ್ ಅಪ್ಪಾನ್ ಮತ್ತು ಅವರ ಸಹೋದರ ಮಹಮ್ಮದ್ ರೋಶನ್ ತಮ್ಮ ಲಾರಿ ಆಫೀಸ್ ಹತ್ತಿರದ ವೆಲ್ಡಿಂಗ್ ಶಾಪ್‌ನಲ್ಲಿ ಕೆಲಸ ಮಾಡಿಸುತ್ತಿದ್ದರು. ಈ ವೇಳೆ ರೋಶನ್‌ಗೆ ಸ್ಪಾನರ್ ತರಲು ಹೇಳಿದ್ದಕ್ಕೆ ರೋಶನ್ ಸ್ಕೂಟಿ ತೆಗೆಯಲು ಹೋದಾಗ, ಬುಲೆಟ್ ಬೈಕ್‌ನಲ್ಲಿ ಬಂದ ಮಹಮ್ಮದ್ ಶಾಹಿದ್ ಎಂಬಾತ ವೇಗವಾಗಿ ಬಂದು ಆತನನ್ನು ಅಸಭ್ಯವಾಗಿ ನಿಂದಿಸಿದ್ದಾನೆ. ಇದನ್ನು ಪ್ರಶ್ನಿಸಿದ ಅಪ್ನಾನ್‌ಗೆ, ಶಾಹಿದ್ ಬೆದರಿಕೆ ಹಾಕಿ ಅಲ್ಲಿಂದ ಇಲಿಯಾಸ್ ನಗರದ ಕಡೆಗೆ ತೆರಳಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ನಂತರ ಬೆಳಿಗ್ಗೆ 11:00 ಗಂಟೆಗೆ ಶಾಹಿದ್ ತನ್ನ ಸಹಚರರೊಂದಿಗೆ ಚಾಕು ಹಿಡಿದುಕೊಂಡು ಬಂದು ಮತ್ತೊಮ್ಮೆ ಬೆದರಿಕೆ ಹಾಕಿದ್ದಾನೆ. ಬಳಿಕ ಮಧ್ಯಾಹ್ನ ಸುಮಾರು 12:45 ರಿಂದ 1:00 ಗಂಟೆಯ ಅವಧಿಯಲ್ಲಿ ಶಾಹಿದ್ ಮತ್ತು ಆತನ ನಾಲ್ಕು ಜನ ಸಹಚರರು ಎರಡು ಬೈಕ್‌ಗಳಲ್ಲಿ ಬಂದು, ಅಪ್ನಾನ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಾಹಿದ್ ತನ್ನಲ್ಲಿದ್ದ ಚಾಕುವಿನಿಂದ ಅಪ್ನಾನ್‌ ಅವರ ಎದೆಯ ಎಡಭಾಗ ಹಾಗೂ ಕೆಳಭಾಗಕ್ಕೆ ಕೊಲೆ ಮಾಡುವ ಉದ್ದೇಶದಿಂದ ಇರಿದಿದ್ದಾನೆ. ತಡೆಯಲು ಹೋದಾಗ ಅವರ ಎಡಗೈಗೂ ಗಾಯವಾಗಿದೆ ಎನ್ನಲಾಗಿದೆ.

ಸ್ಥಳದಲ್ಲಿದ್ದ ಮುಬಾರಕ್ ಎಂಬುವವರು ಬಿಡಿಸಲು ಬಂದಾಗ ಆರೋಪಿಗಳು ಬೈಕ್‌ಗಳಲ್ಲಿ ಪರಾರಿಯಾಗಿದ್ದಾರೆ. ಗಾಯಾಳು ಅಪ್ನಾನ್‌ನನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಎನ್.ಹೆಚ್ (ನಾರಾಯಣ ಹೃದಯಾಲಯ) ಆಸ್ಪತ್ರೆಗೆ ಸೇರಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರು ಮಹಮ್ಮದ್ ಶಾಹಿದ್ ಮತ್ತು ಇತರರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 109(1) (ಕೊಲೆ ಯತ್ನ), 118(1) (ಮಾರಕಾಸ್ತ್ರಗಳಿಂದ ಹಲ್ಲೆ), 351(2) (ಬೆದರಿಕೆ) ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ (FIR No. 331/2026) ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಜನರ ಕೆಲಸಕ್ಕೆ ಅಲೆದಾಡಿಸುವ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ: ಉಪಲೋಕಾಯುಕ್ತ ಫಣೀಂದ್ರ ಎಚ್ಚರಿಕೆ

ಸಾರ್ವಜನಿಕರ ಅಗತ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸದೇ, ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡಿದರೆ...

ರಾಯಚೂರು | ಹದಗೆಟ್ಟ ರಸ್ತೆ, ಕೆಟ್ಟ ಬಸ್‌ಗಳಿಂದ ಪ್ರಯಾಣಿಕರಿಗೆ ತೊಂದರೆ: ರಸ್ತೆ ದುರಸ್ತಿ, 50 ಹೊಸ ಬಸ್‌ಗಳಿಗಾಗಿ ಸಿಪಿಐಎಂ ಆಗ್ರಹ

ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸುಗಮ ಸಾರಿಗೆ...

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್‌ಗೆ ಸಿರಾಜ್ ಅವರನ್ನು ಕೈಬಿಟ್ಟಿದ್ದಕ್ಕೆ ವ್ಯಾಪಕ ಅಸಮಾಧಾನ

ನಿಮ್ಮ ಅಗ್ರ ನಾಲ್ವರು ಬೌಲರ್‌ಗಳಲ್ಲಿ ಸಿರಾಜ್‌ಗೆ ಸ್ಥಾನವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳುವುದು ನನಗೆ...

ಉಡುಪಿ | ನಂಬಿಕೆ, ವಿಶ್ವಾಸದಿಂದ ಸಹಕಾರ ರಂಗ ಸುದೃಢ: ಕಾರ್ತಿಕ್ ಕುಮಾರ್

ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಸ್ಪರ್ಧೆ ನೀಡುತ್ತಿರುವ ಸಹಕಾರಿ ರಂಗವು ಜನರ ನಂಬಿಕೆ ಮತ್ತು...