ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

Date:

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ನಗರದ ಸೂಡಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ನೂರಾರು ಮಂದಿ ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, “ರಾಜ್ಯ ಸರ್ಕಾರ ಮತ್ತು ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ಧಕ್ಕೆಯಾಗದಂತೆ ಅವಳಿನಗರಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ತಮ್ಮ ರಾಜಕೀಯ ಹಾದಿಯನ್ನು ಮೆಲುಕು ಹಾಕಿದ ಮಧುಸೂದನ್, ಚಿಕ್ಕ ವಯಸ್ಸಿನಲ್ಲೇ ಎನ್‌ಎಸ್‌ಯುಐ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾಗಿ ತಿಳಿಸಿದರು. ತಾವು ಸರ್ಕಾರಿ ಹುದ್ದೆಗೆ ಹೋಗಬೇಕೆಂಬುದು ತಂದೆ-ತಾಯಿಯ ಆಸೆಯಾಗಿತ್ತು. ಆದರೆ ವಿದ್ಯಾರ್ಥಿ ಸಂಘಟನೆಯಲ್ಲಿ ತೊಡಗಿ, ಪ್ರಕರಣಗಳ ಕಾರಣಕ್ಕೆ ಓಡಾಡುವಾಗ ಅವರು ಬೇಸರ ಪಟ್ಟಿದ್ದರು. “ಇಂದು ಅವರಲ್ಲಿ ಕಂಡ ಸಂತಸ ನನ್ನ ಬದುಕಿಗೆ ಸಮಾಧಾನ ತಂದಿದೆ” ಎಂದು ಭಾವುಕರಾದರು.

“ಈ ಹುದ್ದೆ ನನಗೆ ಸುಲಭವಾಗಿ ದೊರೆತಿದೆ ಎಂದೆನಿಸಬಹುದು, ಆದರೆ ಇದರ ಹಿಂದೆ ದೊಡ್ಡ ಶ್ರಮವಿದೆ. ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ, ಪಕ್ಷ ಸಂಘಟನೆಗೆ ದುಡಿದವರಿಗೆ ಪ್ರತಿಫಲ ಇದ್ದೇ ಇದೆ ಎನ್ನುವುದಕ್ಕೆ ನಾನೇ ಸಾಕ್ಷಿ” ಎಂದ ಅವರು, ಈ ಹುದ್ದೆಯನ್ನು ಜನಮುಖಿಯಾಗಿ ಮತ್ತು ಪಕ್ಷದ ಯುವಕರಿಗೆ ಸ್ಫೂರ್ತಿಯಾಗುವಂತೆ ಬಳಸಿಕೊಳ್ಳುವುದಾಗಿ ಹೇಳಿದರು.

501842

ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಮಾತನಾಡಿ, ತಾವು ಎನ್‌ಎಸ್‌ಯುಐ ಮೂಲಕ ಸಾರ್ವಜನಿಕ ಕ್ಷೇತ್ರಕ್ಕೆ ಬರಲು ಮಧುಸೂದನ್ ಅವರೇ ಕಾರಣ ಎಂದರು. ಅವರಿಗೆ ಹುದ್ದೆ ಸಿಗಲಿಲ್ಲವಲ್ಲ ಎಂಬ ಕೊರಗು ಕಾಡುತ್ತಿತ್ತು, ಈಗ ಅದು ನೀಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್ ಅವರು, ಪಕ್ಷ ಸಂಘಟನೆಯಲ್ಲಿ ಯುವಕರಿಗೆ ಆದ್ಯತೆ ಸಿಗಬೇಕು ಎಂಬುದು ರಾಹುಲ್ ಗಾಂಧಿ ಅವರ ಆಶಯ, ಅದು ಶಿವಮೊಗ್ಗದಿಂದಲೇ ಪ್ರಾರಂಭವಾಗಿದೆ ಎಂದರು. ಚೇತನ್ ಗೌಡ, ಹೆಚ್.ಸಿ. ಯೋಗೇಶ್ ಅವರ ನಂತರ ಮಧುಸೂದನ್ ಅವರಿಗೂ ಪ್ರಮುಖ ಹುದ್ದೆ ದೊರೆತಿದ್ದು, ಯುವಕರಿಗೆ ದೊಡ್ಡ ಸಂದೇಶ ರವಾನೆಯಾಗಿದೆ ಎಂದು ಹೇಳಿದರು.

ಮಾಜಿ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಖಾನ್ ಅವರು, ಯುವಶಕ್ತಿಯೇ ಪಕ್ಷದ ದೊಡ್ಡ ಆಸ್ತಿ, ಅದನ್ನು ಪಕ್ಷ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಭದ್ರಾವತಿ ತಾಲೂಕು ಕಾಂಗ್ರೆಸ್ ಮುಖಂಡ ಹಾಗೂ ಜಿಪಂ ಮಾಜಿ ಸದಸ್ಯ ಸಿ.ಎಂ. ಖಾದರ್ ಮಾತನಾಡಿ, ಪಕ್ಷಕ್ಕಾಗಿ ದುಡಿದವರನ್ನು ಕಾಂಗ್ರೆಸ್ ಎಂದಿಗೂ ಕೈಬಿಡುವುದಿಲ್ಲ ಎಂಬುದಕ್ಕೆ ಈ ನೇಮಕವೇ ಸಾಕ್ಷಿ ಎಂದರು. ಇದರ ಹಿಂದೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್, ಯುವ ನಾಯಕರಾದ ಬಸವೇಶ್ ಮತ್ತು ಗಣೇಶ್ ಅವರ ಶ್ರಮವಿದೆ ಎಂದು ಅಭಿನಂದಿಸಿದರು.

ಅಧಿಕಾರ ಸ್ವೀಕಾರದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಿಂದ ಸೂಡಾ ಕಚೇರಿವರೆಗೆ ಬೈಕ್ ರ‍್ಯಾಲಿ ಮೂಲಕ ಮಧುಸೂದನ್ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಎನ್‌ಎಸ್‌ಯುಐ ಕಾರ್ಯಕರ್ತರು ಬಾವುಟ ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಸೂಡಾ ಕಚೇರಿ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಭದ್ರಾವತಿ | ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮ ಸಭೆಯಲ್ಲಿ ʻಬಾಲ್ಯ ವಿವಾಹ ಮುಕ್ತ ಅರಳಿಹಳ್ಳಿʼ ಶಪಥ

ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ದಿನಾಚರಣೆಯ...

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...