ಶಿವಮೊಗ್ಗ | ಮಹಜರಿಗೆ ಕರೆದೊಯ್ದ ವೇಳೆ ತಪ್ಪಿಸಿಕೊಳ್ಳಲು ಯತ್ನ: ಕೊಲೆ ಆರೋಪಿ ಕಾಲಿಗೆ ಗುಂಡೇಟು

Date:

ಮಹಜರಿಗೆ ಕರೆದೊಯ್ದ ವೇಳೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದ ಹೊಳೆ ಬೆನವಳ್ಳಿಯ ರಿಂಗ್ ರೋಡ್​​ನಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

- Advertisement -

ಜೂನ್ 12ರಂದು ರೌಡಿಶೀಟರ್ ನರಸಿಂಹ ಎಂಬುವವನ ಕೊಲೆ‌ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಮಧು ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರಕರಣ ಸಂಬಂಧ ಕೋಟೆ ಪೊಲೀಸರು, ಆರೋಪಿ ಮಧು ಎಂಬುವನನ್ನು ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿ ಮಧು ಶೌಚಕ್ಕೆ ಹೋಗಬೇಕು ಎಂದಿದ್ದ. ಆಗ ಪೊಲೀಸರು ಹೊಳೆ ಬೆನವಳ್ಳಿಯ ರಿಂಗ್ ರೋಡ್​​ ಬಳಿ ಜೀಪ್​ನಿಂದ ಕೆಳಗೆ ಇಳಿಸಿದ್ದರು. ಈ ವೇಳೆ ಕೋಟೆ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ.

ಕೋಟೆ ಠಾಣೆಯ ಪಿಐ ಹರೀಶ್ ಪಟೇಲ್ ಅವರು ಶರಣಾಗುವಂತೆ ಸೂಚಿಸಿದರೂ ಕೂಡ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ‌. ಈ ವೇಳೆ ಪಿಎಸ್​ಐ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.‌ ಆದರೂ ಶರಣಾಗದಿದ್ದಾಗ ಆತ್ಮ ರಕ್ಷಣೆಗೆ ಆರೋಪಿ ಮಧು ಕಾಲಿಗೆ ಪಿಎಸ್​ಐ ಗುಂಡು ಹಾರಿಸಿದ್ದಾರೆ. ಪರಿಣಾಮ ಗಾಯಗೊಂಡ ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಎಸ್​​ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೌಡಿಶೀಟರ್ ನರಸಿಂಹನ ಕೊಲೆ ಪ್ರಕರಣ: ಜೂನ್ 12 ರಂದು ಗಾಂಧಿ ಬಜಾರ್​​ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್​ ನರಸಿಂಹನ ಕೊಲೆಯಾಗಿತ್ತು. ಇಸ್ಪಿಟ್ ಆಡುತ್ತಿದ್ದಾಗ ನರಸಿಂಹನ ಮೇಲೆ ವಿರೋಧಿ ಗ್ಯಾಂಗ್ ಅನಿಲ್ ಅಲಿಯಾಸ್ ಅಂಬು ಹಾಗೂ ಆತನ ಸಹಚರರಾದ ಮಧು, ರವಿ, ಕಾರ್ತಿಕ್‌ ಅಲಿಯಾಸ್ ಕತ್ತೆ ಕಾರ್ತಿಕ್, ಶಬರೀಶ್ ಎಂಬುವರು ಬೈಕ್​​ನಲ್ಲಿ ಬಂದು ಮಾರಕಾಸ್ತ್ರಗಳಿಂದ‌ ಕೊಚ್ಚಿ ಕೊಲೆ ಮಾಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಕೋಟೆ ಪೊಲೀಸರು ಆರೋಪಿಗಳನ್ನು ಭದ್ರಾವತಿಯಲ್ಲಿ ಬಂಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮನೆಗೆ ಬೀಗ ಹಾಕಿ ಹೋಗಿದ್ದ ವೇಳೆ ಕಳ್ಳತನ: 30 ಗ್ರಾಂ ಚಿನ್ನಾಭರಣ ಕಳವು

ಕೊಲೆಯಾದ ನರಸಿಂಹನ ಪತ್ನಿ ಸ್ನೇಹ ಅವರು ಅಂಬು ಮತ್ತು ಅವರ ತಂಡ ಕೊಲೆ ಮಾಡಿದೆ ಎಂದು ದೂರು ನೀಡಿದ್ದರು. ಆ ಬಳಿಕ ಪೊಲೀಸರು ಮೂರು ತಂಡಗಳನ್ನು ರಚಿಸಿ ತನಿಖೆ ಪ್ರಾರಂಭಿಸಿದ್ದರು. ಪರಾರಿಯಾಗಿದ್ದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಕೊನೆಗೆ ಭದ್ರಾವತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ಸ್ಥಳ ಮಹಜರಿಗೆ ಕರೆದೊಯ್ಯುವ ವೇಳೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಮಧು ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಇನ್ನು ಕೊಲೆಯಾದ ನರಸಿಂಹ ವಿರುದ್ಧವೂ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆಯ ಇಬ್ಬರು ಕಲಾ ಸಾಧಕರಿಗೆ ರಾಜೋತ್ಸವ ಪ್ರಶಸ್ತಿ

ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...