ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

Date:

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.ಸೊರಬದ ಪ್ರವಾಸಿ ಮಂದಿರದಲ್ಲಿ ಇಂದು ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆ ಕುರಿತು ಅಧಿಕಾರಿಗಳೊಂದಿಗೆ ಅಂತಿಮ ಹಂತದ ಸಭೆ ನಡೆಸಿ ಸಚಿವರು ಮಾತನಾಡಿದರು.

- Advertisement -

ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪ್ರಸ್ತಾವನೆಗೆ ಅಗತ್ಯವಿರುವ ಎಲ್ಲ ದಾಖಲೆಗಳು ಹಾಗೂ ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸಿ, ನಿಯಮಾನುಸಾರ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ಪ್ರಕ್ರಿಯೆ, ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಬೇಕಾದ ಅಂಶಗಳು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಯಲ್ಲಿ ಒಳಗೊಂಡಿರಬೇಕಾದ ಅಗತ್ಯ ದಾಖಲೆಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...
501853

ಸಂತ್ರಸ್ತರ ಬಹುದಿನಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಪಡಿಸುವಾಗ ಯಾವುದೇ ಪ್ರಮುಖ ಅಂಶಗಳು ಅಥವಾ ದಾಖಲೆಗಳು ಬಾಕಿ ಉಳಿಯದಂತೆ ಎಚ್ಚರಿಕೆ ವಹಿಸುವಂತೆ ಸಚಿವರು ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಡಿಎಫ್‌ಒ ಅಜ್ಜಯ್ಯ, ಎಡಿಸಿ ಅಭಿಷೇಕ್, ವಕೀಲ ರಮೇಶ್ ಹೆಗ್ಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮಹಿಳೆಯರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರೆತರೆ ಆರ್ಥಿಕ ಸಬಲತೆ: ಶಾಸಕ ಶ್ರೀನಿವಾಸ ಮಾನೆ

"ಉದ್ಯಮಶೀಲತೆಯ ಮೊದಲ ಹೆಜ್ಜೆ ಮನೆಯಿಂದಲೇ ಆರಂಭವಾಗಬೇಕು. ಸಣ್ಣ ಪ್ರಮಾಣದಲ್ಲಿ, ಕೇವಲ ನೂರು...

ವಿಜಯಪುರ |ಜಿಲ್ಲೆಯಲ್ಲಿ 7.57 ಲಕ್ಷ ಪಡಿತರ ಸದಸ್ಯರ ಇ-ಕೆವೈಸಿ ಬಾಕಿ!

ಸರ್ಕಾರದ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ...

ಸುಳ್ಯ | ಗ್ರೀನ್ ವೀವ್ ಶಾಲೆಯಲ್ಲಿ ʼಬ್ಯಾರಿ ಸಾಹಿತ್ಯ ಕಮ್ಮಟʼ

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ರಚನೆಯ ಹವ್ಯಾಸ ಬೆಳೆಸಿಕೊಂಡ ಮಕ್ಕಳಿಗೆ ಭವಿಷ್ಯದಲ್ಲಿ ಉತ್ತಮ...