ಶಿವಮೊಗ್ಗ | ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ; ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

Date:

ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಂದು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು.

- Advertisement -

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ವಿಡಿಯೋ ಕರೆ ಮಾಡಿ, ಕಾಗೋಡು ತಿಮ್ಮಪ್ಪ ಅವರೊಂದಿಗೆ ಮಾತನಾಡಿಸಿದರು. ಹಿರಿಯ ನಾಯಕನಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದಕ್ಕೆ ಮುಖ್ಯಮಂತ್ರಿ ಶುಭಾಶಯ ತಿಳಿಸಿ, ರಾಜಕೀಯ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರ ಸೇವೆ ಅನುಕರಣೀಯವಾಗಿದೆ. ಭಗವಂತ ನಿಮಗೆ ಉತ್ತಮ ಆರೋಗ್ಯ ನೀಡಲಿ. ನಿಮ್ಮ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಆಗಮಿಸುವುದು ಕಷ್ಟವಾಗಬಹುದೆಂಬ ಹಿನ್ನೆಲೆಯಲ್ಲಿ, ಹೆಲಿಕಾಪ್ಟರ್ ವ್ಯವಸ್ಥೆ ಮಾಡಬೇಕೇ ಎಂದು ಮುಖ್ಯಮಂತ್ರಿ ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ ಅವರು, “ಬೇಡ, ನಾನು ಹೇಗೋ ಬರುವೆ” ಎಂದು ತಮ್ಮ ಸರಳ ಸ್ವಭಾವವನ್ನು ಮತ್ತೊಮ್ಮೆ ಮೆರೆದರು.

Advertisements

ಕಾಗೋಡು ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ:

ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗೆ ಬಂದು ಪ್ರಶಸ್ತಿ ಸ್ವೀಕರಿಸಲು ಅವರಿಗೆ ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ಸರ್ಕಾರವೇ ಅವರ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.ಈ ಸಂದರ್ಭದಲ್ಲಿ ಕಾಗೋಡು ತಿಮ್ಮಪ್ಪ ಅವರು ಸಚಿವ ಮಧು ಬಂಗಾರಪ್ಪ ಅವರ ಕೈಗೆ ಮುತ್ತಿಟ್ಟು ಪ್ರೀತಿಯಿಂದ ಮಾತನಾಡಿ, “ಸಣ್ಣ ವಯಸ್ಸಿನಲ್ಲೇ ಸಚಿವರಾಗಿದ್ದೀರಿ. ಒಳ್ಳೆಯ ಕೆಲಸ ಮಾಡಿ, ರಾಜಕೀಯದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಿರಿ” ಎಂದು ಹಾರೈಸಿದರು.

ಹಿರಿಯ ನಾಯಕನ ಈ ಪ್ರೀತಿ ಮತ್ತು ಆಶೀರ್ವಾದದ ಕ್ಷಣ ಎಲ್ಲರ ಗಮನ ಸೆಳೆಯಿತು.ಕಾಗೋಡು ತಿಮ್ಮಪ್ಪರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು, ʻʻಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಸಂಬಂಧ ಸಮಗ್ರವಾಗಿ ಪರಿಶೀಲನೆ ನಡೆಸಿ ಪ್ರಸ್ತಾವನೆ ಸಿದ್ಧಪಡಿಸಿದ್ದೇವೆ. ಸದ್ಯವೇ ಇದಕ್ಕೆ ಸಚಿವ ಸಂಪುಟದ ಒಪ್ಪಿಗೆ ಪಡೆದು, ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ. ಶೀಘ್ರದಲ್ಲೇ ಅವರಿಗೆಲ್ಲಾ ಹಕ್ಕು ಪತ್ರ ದೊರೆಯುವಂತೆ ಮಾಡಿ, ನಿಮ್ಮ ಬಹುದಿನಗಳ ಕನಸು ಈಡೇರುವಂತೆ ಮಾಡುತ್ತೇವೆʼʼ ಎಂದು ತಿಳಿಸಿದರು.

ಇದನ್ನೂ ಓದಿ: ಶಿವಮೊಗ್ಗ | ಗ್ರಾ.ಪಂ ಕೆರೆಗಳ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಖಡಕ್ ಸೂಚನೆ

ಕರ್ನಾಟಕ ರಾಜ್ಯ ಸರ್ಕಾರ ಪ್ರತಿ ವರ್ಷ ನವೆಂಬರ್ 1ರಂದು ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದೆ. ಈ ವರ್ಷದ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಸಮಾಜಸೇವೆ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ಸಮಾಜವಾದಿ ಚಿಂತಕ, ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಮಾಜಿ ಸಚಿವ ಡಾ. ಕಾಗೋಡು ತಿಮ್ಮಪ್ಪ ಅವರ ಹೆಸರೂ ಸೇರಿದೆ.

ಸಮಾಜದ ಕಟ್ಟಕಡೆಯ ವ್ಯಕ್ತಿಯ ಹಕ್ಕುಗಳಿಗಾಗಿ ಹೋರಾಡಿದ ಕಾಗೋಡು ತಿಮ್ಮಪ್ಪ ಅವರು, ಜನಪರ ಚಿಂತನೆ, ಸಾಮಾಜಿಕ ನ್ಯಾಯದ ಬದ್ಧತೆ ಹಾಗೂ ಸರಳ ಜೀವನದ ಮೂಲಕ ರಾಜಕೀಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಅವರ ದೀರ್ಘಕಾಲದ ಸಾರ್ವಜನಿಕ ಸೇವೆ ಮತ್ತು ಹೋರಾಟದ ಬದುಕಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | 71ನೇ ಕನ್ನಡ ರಾಜೋತ್ಸವ: ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

71ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆ ಸಚಿವರೂ...

ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’ ಬೃಹತ್ ರ‍್ಯಾಲಿ, ದೆಹಲಿಯತ್ತ ಹರಿದುಬಂದ ಜನಸಾಗರ

ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಇಂಡಿಯಾ' ಒಕ್ಕೂಟವು ಭಾನುವಾರ ಹಮ್ಮಿಕೊಂಡಿರುವ 'ಮತ ಉಳಿಸಿ,...

ನಾಡಧ್ವಜ ಅಧಿಕೃತಗೊಳಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ಕನ್ನಡಿಗರ ಭಾವನೆಯ ಹೆಗ್ಗುರುತಾಗಿರುವ ಹಳದಿ-ಕೆಂಪು ಬಾವುಟ. ಈ ನಾಡಧ್ವಜಕ್ಕೆ ಅಧಿಕೃತ ಮಾನ್ಯತೆ...

‘ಇಂಡಿಯಾ’ ಒಕ್ಕೂಟದ ರ‍್ಯಾಲಿಯಿಂದ ಸಿಜೆಪಿ ಅಂತರ: ನಾವು ತಟಸ್ಥ ಎಂದ ದೀಪ್ಕೆ

​'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತೃಣಮೂಲ...