ಶಿವಮೊಗ್ಗ ಜಿಲ್ಲೆಯ ಹುಣಸೇಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ತರಗತಿಗೆ ವಿದ್ಯಾರ್ಥಿನಿಯನ್ನು ದಾಖಲಿಸಿಕೊಳ್ಳಲು 20,000 ರೂಪಾಯಿ ಲಂಚ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
- Advertisement -
ಶಾಲೆಗೆ ಡ್ರಮ್ ಸೆಟ್ ಬೇಕೆಂಬ ನೆಪ ಮುಂದಿಟ್ಟು ಲಂಚ ಬೇಡಿದ ಪ್ರಿನ್ಸಿಪಾಲ್ ವಿರುದ್ಧ ವಿದ್ಯಾರ್ಥಿಯ ಪೋಷಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಭದ್ರಾವತಿ ತಾಲೂಕಿನ ಹುಣಸೇಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು 7ನೇ ತರಗತಿ ವಿದ್ಯಾರ್ಥಿಯನ್ನು ಶಾಲೆಗೆ ದಾಖಲಿಸಿಕೊಳ್ಳಲು ಪೋಷಕರ ಬಳಿ 20 ಸಾವಿರ ರೂಪಾಯಿ ಲಂಚ ಕೇಳಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.






