ಶಿವಮೊಗ್ಗ | ಕುವೆಂಪು ವಿವಿಯಲ್ಲಿ ಭಗವದ್ಗೀತೆ ಕುರಿತ ವಿಚಾರ ಸಂಕಿರಣ; ದಸಂಸ ಆಕ್ಷೇಪ

Date:

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ಶೀರ್ಷಿಕೆಯಡಿ ವಿಚಾರ ಸಂಕಿರಣ ಆಯೋಜಿಸಿರುವುದರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸದಸ್ಯರು ವಿಶ್ವವಿದ್ಯಾಲಯದ ಹೊರಗೆ ಪ್ರತಿಭಟನೆ ನಡೆಸಿದರು.

- Advertisement -

ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ, ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿವಿಯ ಬಸವ ಮಂಟಪದಲ್ಲಿ ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದಸಂಸ ರಾಜ್ಯ ಸಂಚಾಲಕ ಎಂ ಗುರುಮೂರ್ತಿ, “ಈ ವಿಚಾರ ಸಂಕಿರಣವು ಬಲಪಂಥೀಯ ಸೈದ್ಧಾಂತಿಕ ಕಾರ್ಯಸೂಚಿಯನ್ನು ಉತ್ತೇಜಿಸುತ್ತದೆ ಮತ್ತು ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳು ಮತ್ತು ಡಾ. ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಐತಿಹಾಸಿಕವಾಗಿ ಚಾತುರ್ವರ್ಣ ವ್ಯವಸ್ಥೆ ಮತ್ತು ಜಾತಿ ಶ್ರೇಣಿಯನ್ನು ಸಮರ್ಥಿಸಲು ಭಗವದ್ಗೀತೆಯನ್ನು ಬಳಸಲಾಗುತ್ತಿದೆ. ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳನ್ನು ಒಂದು ಸೈದ್ಧಾಂತಿಕ ಚೌಕಟ್ಟಿಗೆ ತಳ್ಳಲು ಮತ್ತು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜಿಸಿವೆ. ಇದೊಂದು ದಬ್ಬಾಳಿಕೆ ಆಚರಿಸುವ ಪ್ರಯತ್ನ” ಎಂದು ಆರೋಪಿಸಿದರು.

ವಿವಿ ಕುಲಪತಿಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವುದು ಕುವೆಂಪು ಅವರ ಸಾರ್ವತ್ರಿಕ ಮಾನವತಾವಾದಿ ಮೌಲ್ಯಗಳಿಗೆ ಮಾಡಿದ ಅವಮಾನ ಎಂದಿರುವ ದಸಂಸ, ಆಹ್ವಾನಿತ ಭಾಷಣಕಾರರು ಗಾಂಧಿ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ಅಭಿಪ್ರಾಯಗಳನ್ನು ವಿರೋಧಿಸುವ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಕುವೆಂಪು ವಿವಿಯಲ್ಲಿ ಭಗವದ್ಗೀತೆ ಅಭಿಯಾನಕ್ಕೆ ವಿರೋಧ; ಉಪಕುಲಪತಿಗಳಿಗೆ ಬಹಿರಂಗ ಪತ್ರ

ಆಹ್ವಾನ ಪತ್ರಿಕೆಯನ್ನು ಕಾರ್ಯಕ್ರಮಕ್ಕೆ ಕೇವಲ ಎರಡು ದಿನಗಳ ಮೊದಲು ಬಿಡುಗಡೆ ಮಾಡಲಾಗಿದೆ. ತಡವಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿರುವುದು ಕಳವಳ ಹುಟ್ಟುಹಾಕಿದೆ. ವಿಶ್ವವಿದ್ಯಾಲಯವು ವಿಚಾರ ಸಂಕಿರಣವನ್ನು ಕೂಡಲೇ ರದ್ದುಗೊಳಿಸಬೇಕು ಎಂದು ದಸಂಸ ಒತ್ತಾಯಿಸಿದೆ.

ನಿನ್ನೆ (ನ.17) ಪತ್ರಕರ್ತ ಹರ್ಷಮುಮಾರ್ ಕುಗ್ವೆ ಅವರು ಕುಲಪತಿ ಪ್ರೊ ಶರತ್‌ ಅನಂತಮೂರ್ತಿ ಅವರಿಗೆ ಬಹಿರಂಗ ಪತ್ರ ಬರೆದು, ಬಲಪಂಥೀಯರ ಷಡ್ಯಂತ್ರದ ಬಗ್ಗೆ ವಿವರವಾಗಿ ತಿಳಿಸಿದ್ದರು. ಸಿಂಡಿಕೇಟ್‌ ಸದಸ್ಯ ಶ್ರೀಪಾಲ್‌ ಅವರು ಖುದ್ದು ಪತ್ರ ಬರೆದು ಕಾರ್ಯಕ್ರಮ ನಡೆಸದಂತೆ ಒತ್ತಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...

ಸ್ಟಿಂಗ್ ಪ್ರಕರಣ: ಸ್ವಪಕ್ಷೀಯರು ಭಾಗಿ – ಸಚಿವ ಯತೀಂದ್ರ; ಪಾರದರ್ಶಕ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...