ಶಿವಮೊಗ್ಗ | ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ಶೀಘ್ರ ನಿರ್ಧಾರ ಆರೋಗ್ಯ ಸಚಿವ ಖಾದರ್ ಹೇಳಿಕೆ

Date:

ಹಿಂದಿನ ಜಿಲ್ಲಾ ಆಸ್ಪತ್ರೆಯ ಸ್ಥಳವನ್ನು ವೈದ್ಯಕೀಯ ಶಿಕ್ಷಣದ ಉದ್ದೇಶಕ್ಕಾಗಿ ವೈದ್ಯಕೀಯ ಕಾಲೇಜಿಗೆ ನೀಡಲಾಗಿದೆ. ಇದೀಗ ಶಿವಮೊಗ್ಗಕ್ಕೆ ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ನಿರ್ಮಿಸುವ ಉದ್ದೇಶ ಸರ್ಕಾರದ ಮುಂದಿದ್ದು, ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ , ಹಜ್‌ ಮತ್ತು ವಕ್ಫ್‌ ಖಾತೆ ಸಚಿವ ಯು.ಟಿ. ಖಾದರ್‌ ತಿಳಿಸಿದರು.

- Advertisement -

ಅವರು ಶುಕ್ರವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ವೈದ್ಯಕೀಯ ಕಾಲೇಜು ಇರುವ ತಾಲೂಕಿನಲ್ಲಿ ಆಸ್ಪತ್ರೆ ನಿರ್ಮಿಸಬೇಕೇ ಅಥವಾ ಜಿಲ್ಲೆಯ ಎಲ್ಲ ಭಾಗದ ಜನರಿಗೆ ಅನುಕೂಲವಾಗುವ ಸ್ಥಳ ಆಯ್ಕೆ ಮಾಡಬೇಕೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ,...

ಕಾಡು ಎಂದರೆ ಕೇವಲ ಮರಗಳು, ಪ್ರಾಣಿಗಳು ಮತ್ತು ಭೌಗೋಳಿಕ ಪ್ರದೇಶವಲ್ಲ. ಅದು ಸಾವಿರಾರು ವರ್ಷಗಳಿಂದ ಮನುಷ್ಯ ಮತ್ತು ಪ್ರಕೃತಿ ಪರಸ್ಪರ ಅವಲಂಬನೆಯೊಂದಿಗೆ ಬದುಕಿಕೊಂಡು ಬಂದಿರುವ ಜೀವಂತ ಪರಿಸರ ವ್ಯವಸ್ಥೆ. ಈ ವ್ಯವಸ್ಥೆಯೊಂದಿಗೆ ಅತ್ಯಂತ...

ಹೆಬ್ಬೆರಳು ಕತ್ತರಿಸಿದ ಆಕ್ರಮಣಕಾರರು, ಗುಮಾಸ್ತರನ್ನು ಸೃಷ್ಟಿಸಿದ ಮೆಕಾಲೆ- ಇದು...

ಇತಿಹಾಸದ ಹೆಸರಿನಲ್ಲಿ ಆಯ್ದ ನಿರೂಪಣೆ; ಜಾತಿ ಪ್ರಾಬಲ್ಯ, ಶಿಕ್ಷಣದ ಹಕ್ಕು ಮತ್ತು ಆಧುನಿಕ ಅಭಿವೃದ್ಧಿಯ ವಾಸ್ತವಗಳು ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸದ ಹೆಸರಿನಲ್ಲಿ ಮುಂದಿಟ್ಟಿರುವ ಹೆಬ್ಬೆರಳು ಕತ್ತರಿಸಿದ ಆಕ್ರಮಣಕಾರರು ಮತ್ತು ಗುಮಾಸ್ತರನ್ನು ಸೃಷ್ಟಿಸಿದ...

ಖಾಸಗಿ ಆಸ್ಪತ್ರೆಗಳು ತಾವು ಒದಗಿಸುವ ಪ್ರತಿಯೊಂದು ಚಿಕಿತ್ಸೆಯ ದರವನ್ನು ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರಕಟಿಸಬೇಕು. ಈ ನಿಯಮ ಪಾಲಿಸದ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಚಿಕಿತ್ಸಾ ದರಪಟ್ಟಿ ಪ್ರಕಟಿಸಿರುವ ಆಸ್ಪತ್ರೆಗಳ ಮಾಹಿತಿ ಪಡೆದು, ಅವುಗಳ ಮಾದರಿಯನ್ನು ಪರಿಶೀಲಿಸಲಾಗುವುದು. ಅದರಂತೆ, ಉಳಿದ ಆಸ್ಪತ್ರೆಗಳಲ್ಲೂ ದರಪಟ್ಟಿ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗುವುದು. ಕೆಲವು ಔಷಧಿಗಳ ಖರೀದಿ ಟೆಂಡರ್ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗಿದೆ. ಔಷಧ ತಯಾರಿಕೆ, ಪೂರೈಕೆ ಹಾಗೂ ಗುಣಮಟ್ಟ ಪರಿಶೀಲನೆಗೆ ಸಮಯ ಬೇಕಾಗಿರುವುದರಿಂದ ವಿಳಂಬವಾಗಿದೆ. ರೋಗಿಗಳಿಗೆ ತೊಂದರೆಯಾಗದಂತೆ ಅಗತ್ಯ ಔಷಧಗಳನ್ನು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಖರೀದಿಸಿ ಒದಗಿಸಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕೊರತೆಯಾಗದಂತೆ ಇಲಾಖೆಯಿಂದ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ನಿಯಂತ್ರಿಸಲು ಆರೋಗ್ಯ ಇಲಾಖೆ ಕಾರ್ಯತಂತ್ರ ರೂಪಿಸುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಅರ್ಹತೆ ಇಲ್ಲದೆ ವೈದ್ಯಕೀಯ ಸೇವೆ ನೀಡುವವರು ರಾಜ್ಯ ತೊರೆಯಬೇಕು; ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಯುರ್ವೇದ ವೈದ್ಯರು ಮತ್ತು ನಕಲಿ ವೈದ್ಯರನ್ನು ಒಂದೇ ರೀತಿಯಲ್ಲಿ ಪರಿಗಣಿಸಬಾರದು. ಆಯುರ್ವೇದ ವೈದ್ಯರು ನಿಯಮಾನುಸಾರ ಅನುಮತಿಸಲಾದ ಔಷಧಗಳನ್ನು ಮಾತ್ರ ನೀಡಬೇಕು. ತಮ್ಮ ಕಾನೂನುಬದ್ಧ ವ್ಯಾಪ್ತಿಯನ್ನು ಮೀರಿ ಇಂಜೆಕ್ಷನ್ ಸೇರಿದಂತೆ ಇತರೆ ಚಿಕಿತ್ಸಾ ವಿಧಾನಗಳನ್ನು ಅನುಸರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಆನೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು; ಅನಿಲ್ ಹೊಸಕೊಪ್ಪ ಆಗ್ರಹ

ಕಾಡಿನಲ್ಲಿ ಆಹಾರ ಮತ್ತು ನೀರಿನ ವ್ಯವಸ್ಥೆ ಕಲ್ಪಿಸದ ಪರಿಣಾಮ ರೈತರ ತೋಟಗಳೇ...

ಇರಾನ್ ಮೇಲೆ ಮತ್ತೆ ಟ್ರಂಪ್ ಕಣ್ಣು: ಆರ್ಥಿಕ ನಷ್ಟದ ನಡುವೆಯೂ ಮರುದಾಳಿಗೆ ಸಜ್ಜಾದ ಅಮೆರಿಕ!

ಇರಾನ್ ವಿರುದ್ಧದ ದಾಳಿಯಿಂದಾಗಿ ಅಮೆರಿಕದ ರಕ್ಷಣಾ ಇಲಾಖೆ ಈಗಾಗಲೇ ಬರೋಬ್ಬರಿ 48.3...

ಶಿವಮೊಗ್ಗ| ದಿನಪತ್ರಿಕೆ ಸಾಗಿಸುತ್ತಿದ್ದ ಕಾರು ಪಲ್ಟಿ ; ಓರ್ವ ಸಾವು

ಶಿವಮೊಗ್ಗದಿಂದ ದಿನಪತ್ರಿಕೆಗಳನ್ನು ಸಾಗಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ...

ತೀರ್ಥಹಳ್ಳಿ | ಅಕ್ರಮವಾಗಿ ಸಾಗಿಸುತ್ತಿದ್ದ ಮೊಬೈಲ್‌ಗಳನ್ನು ವಶಕ್ಕೆ ಪಡೆದ ಪೊಲೀಸರು

ಭದ್ರಾವತಿಯಿಂದ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ತೀರ್ಥಹಳ್ಳಿಯಲ್ಲಿ...