ಶಿವಮೊಗ್ಗ | 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆ: ಪರಿಶೀಲನೆಗೆ ಆಗ್ರಹ

Date:

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸಂಬಂಧಪಟ್ಟ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ ರಾಜಪ್ಪ ಅವರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬರೋಬ್ಬರಿ 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆಯಾಗಿರುವುದು ಗಮನಕ್ಕೆ ಬಂದಿದೆ ಎನ್ನಲಾಗಿದೆ. ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಆಹಾರ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

- Advertisement -

ಸರ್ಕಾರದ ಆದೇಶದಂತೆ ಪ್ರತಿಯೊಬ್ಬ ಪಡಿತರ ಚೀಟಿದಾರರಿಗೂ ಸಮರ್ಪಕವಾಗಿ ಹಾಗೂ ನಿಗದಿತ ಪ್ರಮಾಣದಲ್ಲಿ ಪಡಿತರ ವಿತರಣೆ ಮಾಡಬೇಕು. ಆದರೆ ಈ ಆದೇಶಗಳನ್ನು ಕೆಲವರು ಗಾಳಿಗೆ ತೂರಿ ಪಡಿತರ ವ್ಯವಸ್ಥೆಯಲ್ಲಿ ಲೋಪವೆಸಗುತ್ತಿದ್ದಾರೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.ಇನ್ನೊಂದೆಡೆ, ಸಹಾಯಕ ನಿರ್ದೇಶಕರು ಹಾಗೂ ಆಹಾರ ನಿರೀಕ್ಷಕರ ವ್ಯಾಪ್ತಿಗೆ ಒಳಪಡುವ 66 ನ್ಯಾಯಬೆಲೆ ಅಂಗಡಿಗಳ ಕಾರ್ಯವೈಖರಿಯ ಬಗ್ಗೆಯೂ ಗಂಭೀರ ಆರೋಪಗಳು ಕೇಳಿಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದ್ದರೂ, ಈವರೆಗೆ ಸಮರ್ಪಕ ತಪಾಸಣೆ ನಡೆದಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಅಕ್ಕಿಯನ್ನು ಫಲಾನುಭವಿಗಳಿಂದ ಖರೀದಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದರೂ, ಅಂತಹ ಪ್ರಕರಣಗಳ ವಿರುದ್ಧ ಇದುವರೆಗೆ ಎಷ್ಟು ಕ್ರಮ ಕೈಗೊಳ್ಳಲಾಗಿದೆ? ಎಷ್ಟು ನ್ಯಾಯಬೆಲೆ ಅಂಗಡಿಗಳ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ (EC Act) ಪ್ರಕರಣ ದಾಖಲಿಸಲಾಗಿದೆ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಪಡಿತರ ಅಕ್ಕಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆಹಾರ ಭದ್ರತೆಗೆ ಸಂಬಂಧಿಸಿದ ಪ್ರಮುಖ ವ್ಯವಸ್ಥೆಯಾಗಿದೆ. ಇಂತಹ ವ್ಯವಸ್ಥೆಯಲ್ಲಿ ಅಕ್ರಮಗಳು ನಡೆಯುತ್ತಿದ್ದರೆ ಅದನ್ನು ತಡೆಯಬೇಕಾದ ಜವಾಬ್ದಾರಿ ಆಹಾರ ಇಲಾಖೆಯ ಅಧಿಕಾರಿಗಳ ಮೇಲಿದೆ. ಆದರೆ ನಿರಂತರ ದೂರುಗಳ ನಡುವೆಯೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಮೇಲ್ವಿಚಾರಣೆಯ ಬಗ್ಗೆ ಅನುಮಾನ ಮೂಡಿಸಿದೆ.

ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಲಿ: ಕರವೇ ಸಿಂಹ ಸೇನೆ ಆಗ್ರಹ:

ಈ ಎಲ್ಲಾ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರವೇ ಸಿಂಹ ಸೇನೆ, “ಶಿವಮೊಗ್ಗ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳ ಕಾರ್ಯವೈಖರಿ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆಯಾಗಿರುವ ಪ್ರಕರಣದ ಸಂಪೂರ್ಣ ಹಿನ್ನೆಲೆ ಬಹಿರಂಗಪಡಿಸಬೇಕು. ಜಿಲ್ಲೆಯ ಎಲ್ಲಾ 66 ನ್ಯಾಯಬೆಲೆ ಅಂಗಡಿಗಳಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಪಡಿತರ ಅಕ್ಕಿ ಅಕ್ರಮ ಖರೀದಿ ಹಾಗೂ ಮಾರಾಟದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಜವಾಬ್ದಾರಿಯನ್ನೂ ನಿಗದಿಪಡಿಸಬೇಕು” ಎಂದು ಸಂಘಟನೆ ಒತ್ತಾಯಿಸಿದೆ.

ಶಿವಮೊಗ್ಗ ಜಿಲ್ಲಾಧಿಕಾರಿಗಳು ಕೂಡಲೇ ಆಹಾರ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವರೇ? ಅಥವಾ ಸಾರ್ವಜನಿಕರ ದೂರುಗಳು ಕಡತಗಳಲ್ಲೇ ಉಳಿಯಲಿವೆಯೇ? ಎಂಬುದನ್ನು ಕಾದು ನೋಡಬೇಕಿದೆ.

ಬಡವರ ಪಾಲಿನ ಪಡಿತರ ಅಕ್ಕಿ ದುರುಪಯೋಗವಾಗದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಧ್ರಾ ರೈಲು ದಹನ ಪ್ರಕರಣ: ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು!

2002ರ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ...

ಭಾಲ್ಕಿ | ಕನ್ನಡ ಭಾಷೆ ನಮ್ಮೆಲ್ಲರ ಅಸ್ಮಿತೆ

ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ಕನ್ನಡಿಗರ ಇತಿಹಾಸ, ಸಂಸ್ಕೃತಿ,...

ರಾಜ್ಯದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ...

FSSAI ಕಾನೂನು ಕ್ರಮದ ಬೆನ್ನಲ್ಲೇ ‘ನಮ್ಮ ಕುಡಿಯುವ ನೀರು ಸಂಪೂರ್ಣ ಸುರಕ್ಷಿತ’ ಎಂದ ಬಿಸ್ಲೆರಿ

ಬಿಸ್ಲೆರಿ ಇಂಟರ್‌ನ್ಯಾಶನಲ್ ಪ್ರೈವೇಟ್ ಲಿಮಿಟೆಡ್‌ನ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು "ಅಸುರಕ್ಷಿತ"...