ಶಿವಮೊಗ್ಗ | ಅಕ್ಟೋಬರ್ 11ರಂದು ರಾಜ್ಯ, ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

Date:

ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಹಾಗೂ ಶಿವಮೊಗ್ಗ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ದಿನಾಂಕ 11.10.2026ರ ಭಾನುವಾರ ಸಂಜೆ 6.00 ಗಂಟೆಗೆ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಘದ ಸಹಕಾರ್ಯದರ್ಶಿ ಬಿ.ಎಸ್. ವಿಕ್ರಂ ಅವರು ರಾಜ್ಯ ಮಟ್ಟದ ಸ್ಪರ್ಧೆಯ ವಿವರಗಳನ್ನು ವಿವರಿಸಿದರು.

- Advertisement -

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಶಿವಮೊಗ್ಗ ಯುವದಸರಾ 2026 ವಿಜೇತರಿಗೆ ರೂ. 30,000 ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿಪತ್ರ ನೀಡಲಾಗುವುದು. ರನ್ನರ್-ಅಪ್‌ಗೆ ರೂ. 15,000 ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿಪತ್ರ ಹಾಗೂ ಉತ್ತಮ ದೇಹದಾರ್ಢ್ಯ ಪ್ರದರ್ಶಕರಿಗೆ ರೂ. 5,000 ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿಪತ್ರ ನೀಡಲಾಗುವುದು. ತೂಕದ ಎಂಟು ವಿಭಾಗಗಳಲ್ಲಿ ಪ್ರಥಮ ಬಹುಮಾನಕ್ಕೆ ರೂ. 5,000, ದ್ವಿತೀಯಕ್ಕೆ ರೂ. 4,000, ತೃತೀಯಕ್ಕೆ ರೂ. 3,000, ಚತುರ್ಥಕ್ಕೆ ರೂ. 2,000 ಮತ್ತು ಪಂಚಮಕ್ಕೆ ರೂ. 1,000 ನಗದು ಬಹುಮಾನದೊಂದಿಗೆ ಪಾರಿತೋಷಕ ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಶಿವಮೊಗ್ಗ ಯುವದಸರಾ 2026 ವಿಜೇತರಿಗೆ ರೂ. 10,000 ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿಪತ್ರ ಹಾಗೂ ರನ್ನರ್-ಅಪ್‌ಗೆ ರೂ. 8,000 ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿಪತ್ರ ನೀಡಲಾಗುವುದು. ತೂಕದ ವಿಭಾಗಗಳಲ್ಲಿ ಪ್ರಥಮ ಬಹುಮಾನಕ್ಕೆ ರೂ. 3,000, ದ್ವಿತೀಯಕ್ಕೆ ರೂ. 2,500, ತೃತೀಯಕ್ಕೆ ರೂ. 2,000 ನಗದು ಬಹುಮಾನದೊಂದಿಗೆ ಪಾರಿತೋಷಕ ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು. ಚತುರ್ಥ ಮತ್ತು ಪಂಚಮ ಬಹುಮಾನಕ್ಕೆ ಪಾರಿತೋಷಕ ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು.

ದೇಹತೂಕವನ್ನು ದಿನಾಂಕ 11.10.2026ರಂದು ಮಧ್ಯಾಹ್ನ 2.00 ರಿಂದ ಸಂಜೆ 4.00 ರವರೆಗೆ ನಡೆಸಲಾಗುವುದು. ಹೆಸರು ನೋಂದಾಯಿಸಿಕೊಳ್ಳಲು ಶಿವಮೊಗ್ಗ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಯೋಗೀಶ್ ಬಿ. ಅವರನ್ನು ಮೊಬೈಲ್ ಸಂಖ್ಯೆ 99723691 ಅಥವಾ ಯುವದಸರಾ ಕಾರ್ಯದರ್ಶಿ ಹಾಗೂ ಕಿರಿಯ ಅಭಿಯಂತರರು ಶಿವಕುಮಾರ್ ಅವರನ್ನು ಮೊಬೈಲ್ ಸಂಖ್ಯೆ 7676375417ಗೆ ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ...