ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ ಜಂಬಿಟ್ಟಿಗೆ ರವಾನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಹೊಸನಗರ ತಾಲೂಕಿನ ತಹಶೀಲ್ದಾರ್ ಭರತ್ ರಾಜ್ ನೇತೃತ್ವದ ಅಧಿಕಾರಿಗಳ ತಂಡವು ಗುರುವಾರ ಮುಂಜಾನೆ 5:30 ರ ಸುಮಾರಿಗೆ ದಿಢೀರ್ ದಾಳಿ ನಡೆಸಿದೆ.
ರಿಪ್ಪನ್‌ಪೇಟೆ ಸಮೀಪದ ವೊಡಹೊಸಳ್ಳಿ ರಸ್ತೆಯನಿಗಾವಹಿಸಿದ್ದ ಅಧಿಕಾರಿಗಳ ತಂಡ, ಆನಂದಪುರ ಕಡೆಯಿಂದ ಆಗಮಿಸುತ್ತಿದ್ದ ಎರಡು ಲಾರಿಗಳನ್ನು ತಡೆದು ಪರಿಶೀಲಿಸಿತು.

ಈ ಸಂದರ್ಭದಲ್ಲಿ ಯಾವುದೇ ದಾಖಲೆಗಳಿಲ್ಲದೆ ನಿಯಮಬಾಹಿರವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದುದು ದೃಢಪಟ್ಟ ಹಿನ್ನೆಲೆಯಲ್ಲಿ, ತಕ್ಷಣವೇ ಎರಡೂ ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದರು. ವಶಪಡಿಸಿಕೊಂಡ ಲಾರಿಗಳನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಭರತ್ ರಾಜ್ ಅವರೊಂದಿಗೆ ಕಂದಾಯ ಸಿಬ್ಬಂದಿಗಳಾದ ಗಣೇಶ್ ಹಾಗೂ ಶಿವಪ್ಪ ಸಕ್ರಿಯವಾಗಿ ಪಾಲ್ಗೊಂಡಿದ್ದರು.





