ಶಿವಮೊಗ್ಗ | SC ST ಮೀಸಲಾತಿ ಹೆಚ್ಚಳ ಅನುಮೋದನೆ ಆಗ್ರಹಿಸಿ ಧರಣಿ

Date:

ಇಂದಿನ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಹಿಂದುಳಿದ ವರ್ಗಗಳನ್ನೊಳಗೊಂಡು ಪ.ಜಾತಿ ಮತ್ತು ಪ.ಪಂಗಡಗಳ ಮೀಸಲಾತಿ ಪ್ರಮಾಣ ಶೇ.50 ರಿಂದ 56ಕ್ಕೆ ಹೆಚ್ಚಿಸಿದ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್ ತೀರ್ಪುನ್ನು ಪ್ರಶ್ನಿಸಿ, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಿ ಕಾನೂನುಬದ್ಧಗೊಳಿಸುವಂತೆ ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರ ಒತ್ತಾಯಿಸಬೇಕೆಂದು ಆಗ್ರಹಿಸಿ ಶಿವಮೊಗ್ಗದಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಮೂರ್ತಿ ಎಂ ತಿಳಿಸಿದ್ದಾರೆ.

- Advertisement -

SC ST ಮೀಸಲಾತಿ ಹೆಚ್ಚಳ ಅನುಮೋದನೆಗೆ ಆಗ್ರಹಿಸಿ, ಮೀಸಲಾತಿ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಪುತಿಭಟನಾ ಧರಣಿಯನ್ನು ನ. 6ರಂದು ಹಮ್ಮಿಕೊಳ್ಳಲಾಗಿದೆ ಬಸವರಾಜ ಬೊಮ್ಮಾಯಿ ಸರ್ಕಾರ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್‌ದಾಸ್ ಆಯೋಗದ ಸಮೀಕ್ಷಾ ವರದಿ ಆಧರಿಸಿ ಹಿಂದುಳಿದ ವರ್ಗಗಳನ್ನೊಳಗೊಂಡು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು ಒಟ್ಟು ಶೇ.6ಕ್ಕೆ ಹೆಚ್ಚಿಸಿ ಪ್ರಸ್ತುತ ಇದ್ದ ಮೀಸಲಾತಿ ಪ್ರಮಾಣ ಶೇ.56ಕ್ಕೆ ಹೆಚ್ಚಿಸಿ 2023ರ ಜನವರಿ 12ರಂದು ಜಾರಿಗೆ ತಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಆದರೆ, ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿದ ಮೀಸಲಾತಿ ಸಂವಿಧಾನದ ಪರಿಚ್ಛೇದ 14 ಮತ್ತು 15ರ ಉಲ್ಲಂಘನೆಯಾಗಿದೆ ಎಂಬ ಕಾರಣ ನೀಡಿ ಮೀಸಲಾತಿ ಹೆಚ್ಚಳ ಕಾಯ್ದೆ-2022 ಅನ್ನು ರಾಜ್ಯ ಹೈಕೋರ್ಟ್ ಕಳೆದ ದಿನಾಂಕ:12.10.2026 ರಂದು ರದ್ದುಪಡಿಸಿದೆ. 1992ರಲ್ಲಿ ಸುಪ್ರೀಂ ಕೋರ್ಟ್ ಇಂದಿರಾ ಸಾಹಿ ಪ್ರಕರಣದಲ್ಲಿ ಆದೇಶ ಹೊರಡಿಸಿದ ಜಾತಿ ಆಧಾರಿತ ಮೀಸಲಾತಿ ಮಿತಿ ದಾಟಿ ಶೇ.56ಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ಆದೇಶವು ಸುಪ್ರೀಂ ಕೋರ್ಟಿನ ತೀರ್ಪು ಉಲ್ಲಂಘಿಸಿದೆ ಎಂದು ಕೆಲವು ಮನುವಾದಿಗಳು ಕರ್ನಾಟಕ ಹೈಕೋರ್ಟಿನಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗಿಯ ಪೀಠವು ಮೀಸಲಾತಿ ಪ್ರಮಾಣ ಶೇ.50 ರಿಂದ ಶೇ. 56ಕ್ಕೆ ಹೆಚ್ಚಿಸಿ ಹೊರಡಿಸಿದ ಆದೇಶವನ್ನು ರದ್ದುಗೊಳಿಸಿದೆ.

ಇದನ್ನು ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸುವ ಕೆಲಸವಾಗಬೇಕೆಂದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಜಾರಿಗೊಳಿಸಲಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯಗಳ ಶೇ.56ಕ್ಕೇರಿಸಿದ ಮೀಸಲಾತಿಯನ್ನು ಕಾನೂನುಬದ್ಧಗೊಳಿಸಲು ಸರ್ವ ಪಕ್ಷಗಳ ನಿಯೋಗದೊಂದಿಗೆ ದೆಹಲಿಗೆ ತೆರಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಒತ್ತಡ ಹಾಕಿ ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸುವ ಪ್ರಾಮಾಣಿಕ ಕಾಳಜಿ ಮಾಡದ ಕಾರಣ ಇಂದು ಹೈಕೋರ್ಟಿನಲ್ಲಿ ಪ.ಜಾತಿ ಪ.ಪಂಗಡಗಳವರಿಗೆ ಶೇ.6ರನ್ನು ಸೇರ್ಪಡೆಗೊಳಿಸಿ ಶೇ.56ಕ್ಕೆ ಹೆಚ್ಚಿಸಲಾದ ಮೀಸಲಾತಿ ರದ್ದಾಗಲು ಕಾರಣವಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮಮಂದಿರ ದೇಣಿಗೆ ಲೂಟಿ ಪ್ರಕರಣ: ನ್ಯಾಯಾಲಯ ವಿಚಾರಣೆಗೆ ಸುಪ್ರೀಂ ಅಸ್ತು; ಕಳುವಾಗಿದ್ದು ಬರೀ 2.7 ಕೋಟಿ ಎಂದ SIT

ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ್ದ ದೇಣಿಗೆ ಹಣದಲ್ಲಿ ಸುಮಾರು 2.7 ಕೋಟಿ...

ಅಮೆರಿಕದ ಮೊದಲ ಮುಸ್ಲಿಂ ಸೆನೇಟರ್ ಆಗಲಿದ್ದಾರೆಯೇ ಡಾ ಅಬ್ದುಲ್ ಎಲ್-ಸಯದ್?

ಅಮೆರಿಕದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ಕುತೂಹಲ ಮೂಡಿಸಿರುವ ಮಿಷಿಗನ್ ರಾಜ್ಯದ ಸೆನೇಟ್...

ಬಾಗಲಕೋಟೆ | ಕಬ್ಬು ಬೆಲೆಗಾಗಿ ರೈತರ ಹೋರಾಟ; ಕಟಾವಿಗೆ ಹೊರರಾಜ್ಯದ 70 ಸಾವಿರ ಕಾರ್ಮಿಕರ ಆಗಮನ!

ಒಂದೆಡೆ ಕಬ್ಬಿಗೆ ನ್ಯಾಯಯುತ ಬೆಲೆ ದೊರಕಬೇಕೆಂದು ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೆ,...