ಶಿವಮೊಗ್ಗ | ಖಾಸಗಿ ಆಸ್ಪತ್ರೆಗಳಿಗೆ ಟ್ರಾಫಿಕ್ ಸಿಪಿಐ ದೇವರಾಜ್ ಎಚ್ಚರಿಕೆ: ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸೂಚನೆ

Date:

ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ, ನಗರದ ಪಾರ್ಕ್ ಬಡಾವಣೆ ಹಾಗೂ ದುರ್ಗಿಗುಡಿ ಪ್ರದೇಶಗಳ ರಸ್ತೆಗಳಲ್ಲಿ ಪ್ರತಿದಿನ ಉಂಟಾಗುತ್ತಿರುವ ವಾಹನ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಹಿನ್ನಲೆ ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರು ಸಭೆ ನಡೆಸಿದ್ದಾರೆ .

- Advertisement -

ಅಲ್ಲದೆ, ಸಂಚಾರ ಗಸ್ತಿನ ಸಂದರ್ಭದಲ್ಲಿ ಸದರಿ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದಾಗಿ ಸಂಚಾರ ವ್ಯವಸ್ಥೆಗೆ ತೊಂದರೆಯಾಗುತ್ತಿರುವುದು ಕಂಡುಬಂದಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಈ ಹಿನ್ನೆಲೆಯಲ್ಲಿ, ಸದರಿ ಸಮಸ್ಯೆಯನ್ನು ನಿಯಂತ್ರಿಸಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆಯನ್ನು ಮಹಾನಗರ ಪಾಲಿಕೆಯ ಇಂಜಿನಿಯರ್‌ಗಳ ಸಮ್ಮುಖದಲ್ಲಿ ಕರೆಯಲಾಯಿತು.

ಸಭೆಯಲ್ಲಿ ಆಸ್ಪತ್ರೆಗಳ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ತಮ್ಮ ತಮ್ಮ ಆಸ್ಪತ್ರೆಗಳಿಗೆ ಆಗಮಿಸುವ ವಾಹನಗಳ ನಿಲುಗಡೆಗಾಗಿ ಆಸ್ಪತ್ರೆಯ ಆವರಣದಲ್ಲಿಯೇ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಕಲ್ಪಿಸುವಂತೆ ಸೂಚಿಸಲಾಯಿತು.

ಅಲ್ಲದೆ, ಆಸ್ಪತ್ರೆ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಪಾರ್ಕಿಂಗ್ ಉದ್ದೇಶಕ್ಕಾಗಿ ಮೀಸಲಿರಿಸಿರುವ ಸ್ಥಳವನ್ನು ಕಡ್ಡಾಯವಾಗಿ ವಾಹನಗಳ ನಿಲುಗಡೆಗೆ ಮಾತ್ರ ಬಳಸಬೇಕು ಹಾಗೂ ಸದರಿ ಸ್ಥಳವನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸಬಾರದು ಎಂದು ತಿಳಿಸಲಾಯಿತು.ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಸಹಕರಿಸುವಂತೆ ತಿಳಿಸಲಾಯಿತು.

ಸೂಚನೆಗಳನ್ನು ಉಲ್ಲಂಘಿಸುವ ಆಸ್ಪತ್ರೆಗಳ ಆಡಳಿತ ಮಂಡಳಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅಂತಿಮ ಮತಪಟ್ಟಿಯಲ್ಲಿ ಭಾರೀ ಎಡವಟ್ಟು; ‘Husband Husband’, ‘XXX’, ‘????’ಗಳೇ ಮತದಾರರ ಹೆಸರುಗಳು!

ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸುತ್ತೇವೆಂದು ಚುನಾವಣಾ ಆಯೋಗ/ಗ್ಯಾನೇಶ್‌ ಕುಮಾರ್ ಏಕಪಕ್ಷೀಯವಾಗಿ ದೇಶದ ಮೇಲೆ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಪರಿಗಣನೆ ಸಾಧ್ಯತೆ: ಈಶ್ವರ್ ಖಂಡ್ರೆ

ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ (SIR)...

ಕುತ್ತಿಗೆಗೆ ಚಾಕು ಹಿಡಿದು ರಸ್ತೆಯಲ್ಲಿ ಎಳೆದಾಡಿದ; ಚಿನ್ನದ ಸರಕ್ಕಾಗಿ ಫೆವಿಕ್ವಿಕ್‌ನಿಂದ ಕೈ ಅಂಟಿಸಿದ ಕಿರಾತಕ!

ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಚಿನ್ನದ ಸರ ಕಳವು ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬ...