ಶಿವಮೊಗ್ಗ | ಭದ್ರಾವತಿಯಲ್ಲಿ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ತರಬೇತಿ ಅಭಿನಂದನಾ ಕಾರ್ಯಕ್ರಮ

Date:

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ.ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ. ಮತ್ತು ಬಿಸಲ್ ತರಬೇತಿದಾರರ ಕಂಪನಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಭದ್ರಾವತಿ ಘಟಕದ ಸಂಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಷೀನ್ ಹಾಗೂ ಮಷಿನ್ ಹೆಲ್ಪರ್ ರವರಿಗೆ ತರಬೇತಿ ಶಿಬಿರ. ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಕೇಂದ್ರ ಕಾರ್ಯಾಲಯದಲ್ಲಿ ಆಯೋಜಿಸಲಾಗಿತ್ತು.

- Advertisement -
1003682532

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆ ಆರ್ ಐ ಡಿ ಎಲ್ ಅಧ್ಯಕ್ಷ, ಶಾಸಕ ಬಿ ಕೆ ಸಂಗಮೇಶ್ವರ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕವಾಗಿ ಅನುಕೂಲವಾಗಲು ಕಾರ್ಮಿಕ ಸಚಿವರ ಜೊತೆ ಮಾತನಾಡಿ ವಿಶೇಷವಾಗಿ ವೃತ್ತಿಪರ ಕಿಟ್ ಗಳು ಹಾಗೂ ವಿವಿಧ ಸೌಲಭ್ಯಗಳನ್ನು ಕೊಡಿಸಲಾಗಿದೆ.‌ ಹಾಗೂ ಕಾರ್ಮಿಕರು ತಮ್ಮ ನೊಂದಾಯಿತ ಕಾರ್ಮಿಕರ ಗುರುತಿನ ಚೀಟಿಯನ್ನು ಸಮಯಕ್ಕೆ ಸರಿಯಾಗಿ ನವೀಕರಣಗೊಳಿಸಿ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಕಾರ್ಮಿಕರ ಪರವಾಗಿ ಕಾನೂನಾತ್ಮಕ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ತಾವು ಕೂಡ ಸಕ್ರಿಯರಾಗಬೇಕು. ಯಾವುದೇ ಕುಂದುಕೊರತೆ ಹಾಗೂ ನಿಮ್ಮ ಕಷ್ಟಕಾಲಗಳಲ್ಲಿ ನಾವು ಜೊತೆಗಿರುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1003682531

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ವಿನೋದ್ “ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಈಗಾಗಲೇ ನೊಂದಾಯಿತ ಕಾರ್ಮಿಕರಿಗೆ ವಿಶೇಷ ಯೋಜನೆಗಳು ವೃತ್ತಿಪರ ವೃತ್ತಿಗೆ ಅನುಗುಣವಾಗಿ ಕಾರ್ಮಿಕರ ಪರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಹಾಗೂ ನಮ್ಮ ಒಕ್ಕೂಟದ ಹೋರಾಟಗಳಿಗೆ ಸ್ಪಂದಿಸಿ ಅಪಘಾತ ಪರಿಹಾರ ಮೊತ್ತವನ್ನು 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಿಸಿ ಹಾಗೂ ಅನುಗ್ರಹ ರಾಶಿ ಅಂತ್ಯಕ್ರಿಯೆ ವೆಚ್ಚ ವನ್ನು 75ಸಾವಿರ ರೂಗಳಿಂದ ಒಂದು ಲಕ್ಷ ಐವತ್ತು ಸಾವಿರವರೆಗೆ ಕರ್ನಾಟಕ ಸರ್ಕಾರ ಏರಿಕೆ ಮಾಡಿದೆ” ಎಂದು ಅಭಿನಂದನೆ ಸಲ್ಲಿಸಿದರು.

ತರಬೇತಿಯಲ್ಲಿ ಪೂರ್ವ ಕಲಿಕೆಯ ಮಾನ್ಯತೆ ಮತ್ತು ಸೇತುಬಂಧ ತರಬೇತಿ ಶಿಬಿರವನ್ನು ಹತ್ತು ದಿನಗಳ ಕಾಲ ಹಮ್ಮಿಕೊಂಡಿದ್ದು ಈ ದಿವಸ ಈ ಶಿಬಿರವು ಯಶಸ್ವಿಯಾಗಿ ಪೂರ್ಣಗೊಂಡಿದ್ದು ಇದರ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಮಿಕರ ಸೌಲಭ್ಯಗಳ ಮಾಹಿತಿ ತಿಳಿಸಿಕೊಡಲಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಸ ಬೇರ್ಪಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ; ಬಂಧನಕ್ಕೆ ಆಗ್ರಹ

ಕಾರ್ಮಿಕ ಇಲಾಖೆಯ ಭದ್ರಾವತಿ ಕಾರ್ಮಿಕ ನಿರೀಕ್ಷಕ ರಕ್ಷಿತ್ ತರಬೇತಿಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷ ಸುರೇಶ್ ಹಾಗೂ ನಿರ್ದೇಶಕ ಭಾಷಾ. ಶ್ರೀಮತಿ ನೇತ್ರಾವತಿ ಹಾಗೂ ಸದಸ್ಯ ಕೆ ಮುರುಗನ್. ಶಬರೀಶ್, ಕುಮಾರಿ ಸುಪ್ರೀತಾ, ಬಿಸಲ್ ತರಬೇತಿದಾರ ಸಮರ್ಥ್ ಸೇರಿ ಹಲವು ಕಾರ್ಮಿಕರು ಉಪಸ್ಥಿತರಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...