ಶಿವಮೊಗ್ಗ | ಸೇತುವೆ ಮರುನಿರ್ಮಾಣ : ಪರ್ಯಾಯ ಮಾರ್ಗಗಳ ಪರಿಶೀಲನೆ ನಡೆಸಿದ ಜಿಲ್ಲಾ ಎಸ್‌ಪಿ

Date:

ಶಿವಮೊಗ್ಗ ನಗರದ ತುಂಗಾ ಹಳೆ ಸೇತುವೆ ತೆರವುಗೊಳಿಸಿ, ಮರುನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ, ನಗರದಲ್ಲಿ ಸುಗಮ ವಾಹನ ಸಂಚಾರಕ್ಕೆ ಅಗತ್ಯವಿರುವ ಪರ್ಯಾಯ ರಸ್ತೆ ವ್ಯವಸ್ಥೆಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರು ಸ್ಥಳ ಪರಿಶೀಲನೆ ನಡೆಸಿದರು.

- Advertisement -

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬೈಪಾಸ್ ರಸ್ತೆ ಮಾರ್ಗವಾಗಿ ಎಂ.ಆರ್.ಎಸ್. ವೃತ್ತದವರೆಗೆ ಸಂಚರಿಸಿ, ರಸ್ತೆ ಪರಿಸ್ಥಿತಿ, ವಾಹನ ಸಂಚಾರದ ಒತ್ತಡ ಹಾಗೂ ಪರ್ಯಾಯ ಮಾರ್ಗಗಳ ಸಾಧ್ಯತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಟ್ರಾಫಿಕ್ ಸರ್ಕಲ್ ಇನ್ಸ್‌ಪೆಕ್ಟರ್ ದೇವರಾಜ್ ಹಾಗೂ ಸಂಚಾರ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ತುಂಗಾ ಹಳೆ ಸೇತುವೆ ಮರು ನಿರ್ಮಾಣ ಕಾಮಗಾರಿ ಆರಂಭವಾದರೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲೂ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ, ಸೇತುವೆ ಮರುನಿರ್ಮಾಣದ ಅವಧಿಯಲ್ಲಿ ವಾಹನ ಸವಾರರಿಗೆ ಎದುರಾಗಬಹುದಾದ ತೊಂದರೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸೂಕ್ತ ಸಂಚಾರ ವ್ಯವಸ್ಥೆ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ಈದಿನ ಮಾಧ್ಯಮಕ್ಕೆ ಎಸ್ಪಿ ನಿಖಿಲ್ ತಿಳಿಸಿದರು.

ನಗರದ ವಾಹನ ಸವಾರರು, ಸಾರ್ವಜನಿಕರು ಹಾಗೂ ದೂರದ ಊರುಗಳಿಂದ ಆಗಮಿಸುವ ಪ್ರಯಾಣಿಕರಿಗೆ ಅನಗತ್ಯ ಸಂಚಾರ ದಟ್ಟಣೆ ಎದುರಾಗದಂತೆ ಪರ್ಯಾಯ ಮಾರ್ಗಗಳ ಆಯ್ಕೆ, ಅಗತ್ಯ ಸಂಚಾರ ನಿಯಂತ್ರಣ ಹಾಗೂ ರಸ್ತೆ ವ್ಯವಸ್ಥೆಗಳ ಕುರಿತು ಪೊಲೀಸ್ ಇಲಾಖೆ ಮುಂಚಿತವಾಗಿ ಸಿದ್ಧತೆ ಕೈಗೊಳ್ಳುತ್ತಿರುವುದು ಗಮನಾರ್ಹವಾಗಿದೆ.

ಒಟ್ಟಿನಲ್ಲಿ, ತುಂಗಾ ಹಳೆ ಸೇತುವೆ ಮರುನಿರ್ಮಾಣ ಕಾಮಗಾರಿಯಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸ್ಥಳ ಪರಿಶೀಲನೆ ಮುಂದಿನ ಸಂಚಾರ ವ್ಯವಸ್ಥೆಗೆ ಪೂರ್ವಸಿದ್ಧತೆಯಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸದ ಚಾಲಕ: ರಸ್ತೆ ತಡೆದ ವಿದ್ಯಾರ್ಥಿಗಳು 

ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ನಿಡುವಣಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ವಿದ್ಯಾರ್ಥಿಗಳಿಗೆ...

ರಾಯಚೂರು | ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾಫರ್ ಅಹ್ಮದ್ ಮೇಲೆ ಮಾರಣಾಂತಿಕ ಹಲ್ಲೆ: ಆರೋಪ

ಕಾಂಗ್ರೆಸ್‌ ಅಲ್ಪಸಂಖ್ಯಾತರ ವಿಭಾಗದ ನಗರ ಘಟಕದ ಅಧ್ಯಕ್ಷ ಜಾಫರ್ ಅಹ್ಮದ್ ಅವರ...

ಕಾರು, ಸರ್ಕಾರಿ ನೌಕರಿ ಇದ್ದವರಿಗೂ ಉಚಿತ ಪಡಿತರ: ‘ಗರೀಬ್ ಕಲ್ಯಾಣ್’ ಯೋಜನೆಯಲ್ಲಿ ಶೇ 13.2 ಅನರ್ಹರು!

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಚಿತ ಆಹಾರ ಧಾನ್ಯ ಯೋಜನೆಯಾದ ‘ಪ್ರಧಾನ ಮಂತ್ರಿ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ ಕುತ್ತು, ರೈತರ ಬದುಕಿಗೆ ಹೊಡೆತ

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ...