ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಮುಂಭಾಗ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ. ಜಿ. ಎ. ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಸಂತೋಷ್ ಎಂ. ಎಸ್., ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಸರ್ಜನ್ ಡಾ.ನಾಗೇಶ್ ಕೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ರಾಮಪ್ರಸಾದ್, ಶುಶ್ರೂಷಕ ಅಧಿಕಾರಿ ಗಳು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ಅಧಿಕಾರಿಗಳು ಹಾಗೂ ವಿಧ್ಯಾರ್ಥಿಗಳು ಮಾನಸಿಕ ಆರೋಗ್ಯ ಕಾಪಾಡುವ ಕುರಿತಾದ ಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಿಂದ ಹೊರಟು ಸರ್ಕ್ಯೂಟ್ ಹೌಸ್, ಕುವೆಂಪು ರಸ್ತೆ ಹಾಗೂ ಜ್ಯೂಯಲ್ ರಾಕ್ ಹೋಟೆಲ್ ಮಾರ್ಗವಾಗಿ ಐ. ಎಂ. ಎ. ಹಾಲ್ನಲ್ಲಿ ಮುಕ್ತಾಯಗೊಂಡಿತು.






