ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Date:

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ ಆನಂದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಸುಮಾರು 6.45ರ ವೇಳೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

- Advertisement -

ಬುಧವಾರ ಬೆಳಿಗ್ಗೆ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ ಆನಂದ್ ಅವರನ್ನು ಮೊದಲು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ, ಅಲ್ಲಿ ಚಿಕಿತ್ಸೆಯ ವೆಚ್ಚ ಹೆಚ್ಚಾಗಿದ್ದರಿಂದ ಕುಟುಂಬದವರು ಆನಂದ್‌ ಅವರನ್ನು ಮತ್ತೆ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ಆನಂದ್ ಶಾಮಿಯಾನ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ನಮ್ಮ ಕೈಯಲ್ಲಿ ಖರ್ಚಿಗಾಗಿ ಇಟ್ಟುಕೊಂಡಿದ್ದ 74,000 ಇತ್ತು. ಅದನ್ನು ಖಾಸಗಿ ಆಸ್ಪತ್ರೆಯಲ್ಲಿ ಪಾವತಿಸಿ, ಹೆಚ್ಚಿನ ಚಿಕಿತ್ಸೆ ಅಲ್ಲಿ ಸಾಧ್ಯವಾಗದೆ ಅಲ್ಲಿಂದ ಆನಂದ್ ಅವರನ್ನು ಕರೆದುಕೊಂಡು ಬಂದು ಮೆಗ್ಗಾನ್‌ಗೆ ದಾಖಲಿಸಿದೆವು. ಅಷ್ಟು ಹಣವನ್ನು ಹೊಂದಿಸುವುದು ನಮಗೆ ಸಾಧ್ಯವಾಗಲಿಲ್ಲ” ಎಂದು ಆನಂದ್ ಅವರ ಸಹೋದರಿ ಹೇಳಿರುವುದಾಗಿ ವರದಿಯಾಗಿದೆ.

Advertisements

ಸ್ಥಳೀಯ ಭಾಸ್ಕರ್‌ ಎಂಬಾತನೇ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಬಳಿಕ ರೈಲ್ವೆ ಹಳಿ ಮೇಲೆ ಬಿಸಾಡಿದ್ದಾನೆ ಎಂದು ಮೃತನ ತಾಯಿ ಮುನಿಯಮ್ಮ ಆರೋಪಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ | ಮಾದಕ ದ್ರವ್ಯಗಳ ಸೇವನೆ ವಿರುದ್ದ ಪ್ರತಿಜ್ಞೆಗೆ ಕರೆ

ಎರಡು ವಾರಗಳ ಹಿಂದೆ ಆನಂದ್‌ ಹಾಗೂ ಭಾಸ್ಕರ್‌ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪದ ಮೇಲೆ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಭಾಸ್ಕರ್‌ನನ್ನು ಬಂಧಿಸಿರಲಿಲ್ಲ ಎನ್ನಲಾಗಿದೆ. ಇದೀಗ ಹಳೆಯ ಹಲ್ಲೆಗೂ ಸಾವಿಗೂ ಸಂಬಂಧವಿದೆಯೇ ಎಂಬ ಅನುಮಾನ ಮೂಡುತ್ತಿದೆ. ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು...

ಕತ್ತಲಲ್ಲಿ ಗುರುಗ್ರಾಮ್: ವಿದ್ಯುತ್‌ ಬಿಕ್ಕಟ್ಟಿನಿಂದ 1,800 ಕೈಗಾರಿಕೆಗಳ ಕೆಲಸ ಸ್ಥಗಿತ, ನೀರಿಗಾಗಿ ಜನರ ಪರದಾಟ

ಹರಿಯಾಣ ವಿದ್ಯುತ್ ಇಲಾಖೆಯ ನೌಕರರು ನಡೆಸುತ್ತಿರುವ ಮೂರು ದಿನಗಳ ಮುಷ್ಕರದಿಂದ ‌ಗುರುಗ್ರಾಮ್...

ದೆಹಲಿಯಲ್ಲಿ ಭುಗಿಲೆದ್ದ ಆಕ್ರೋಶ: ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಉದ್ದೇಶಪೂರ್ವಕವಾಗಿ...

ಗದಗ | ಪಶ್ಚಿಮ ಪದವೀಧರರ ಚುನಾವಣೆ; ಜಿಲ್ಲೆಯಲ್ಲಿ ಶೇ 46.18ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ಪ್ರಕ್ರಿಯೇ ಬೆಳೆಗ್ಗೆ 8 ಗಂಟೆಯಿಂದ...