ಶಿವಮೊಗ್ಗ ಮೃಗಾಲಯದಲ್ಲಿ ‘ನೀರು ಕುದುರೆ’ ದಾಳಿ – ಪಶುವೈದ್ಯೆ ಸಾವು; ತನಿಖೆಗೆ ಆದೇಶ

Date:

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗುರುವಾರ ರಾತ್ರಿ ಜಲಹಸ್ತಿ (ನೀರು ಕುದುರೆ) ನಡೆಸಿದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 27 ವರ್ಷಗಳ ಪಶುವೈದ್ಯೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.

- Advertisement -

ಮೃತ ವೈದ್ಯೆಯನ್ನು ಡಾ. ಸಮೀಕ್ಷಾ ರೆಡ್ಡಿ ಎಂದು ಗುರುತಿಸಲಾಗಿದೆ.  ಇವರು ಇತ್ತೀಚೆಗಷ್ಟೇ ಕರ್ನಾಟಕ ಅರಣ್ಯ ಇಲಾಖೆಗೆ ಗುತ್ತಿಗೆ ಆಧಾರದ ಮೇಲೆ ಉದ್ಯೋಗಕ್ಕೆ ನೇಮಕಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಅವರ ಮೇಲೆ ನೀರು ಕುದುರೆಯು ಗುರುವಾರ ರಾತ್ರಿ ಸುಮಾರು 11.30ರ ಸುಮಾರಿಗೆ ನಡೆಸಿದೆ ಎಂದು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

” ದುಃಖದ ಸಮಯದಲ್ಲಿ ಸರ್ಕಾರವು ಮೃತರ ಕುಟುಂಬದೊಂದಿಗಿರುತ್ತದೆ. ಪ್ರತಿಯೊಂದು ಜೀವವೂ ಅಮೂಲ್ಯವಾದುದು. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ,” ಎಂದು ಸಚಿವರು ಹೇಳಿದ್ದಾರೆ.

ಈ ದುರಂತದ ಬಗ್ಗೆ ತನಿಖೆ ನಡೆಸಲು ಹಿರಿಯ ಪಶುವೈದ್ಯರು ಮತ್ತು ಅರಣ್ಯ ಅಧಿಕಾರಿಗಳನ್ನೊಳಗೊಂಡ ತಂಡವನ್ನು ನೇಮಿಸಲಾಗಿದೆ ಎಂದು ಖಂಡ್ರೆ ಹೇಳಿದ್ದಾರೆ.

ಮೃಗಾಲಯದ ಅಧಿಕಾರಿಗಳು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಡಾ. ರೆಡ್ಡಿ ಅವರು ಪಕ್ಷಿಯೊಂದರ ಆರೋಗ್ಯ ತಪಾಸಣೆ ನಡೆಸಲು ಮೃಗಾಲಯದ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ, ಅವರು ಗರ್ಭಿಣಿ ನೀರು ಕುದುರೆಯ ದೇಹದ ಉಷ್ಣತೆಯನ್ನು ಪರೀಕ್ಷಿಸಲು ಹೋದರು. ಆಗ, ನೀರು ಕುದುರೆಯು ಆಕ್ರಮಣಕಾರಿಯಾಗಿ ವರ್ತಿಸಿ ಅವರ ಮೇಲೆ ದಾಳಿ ಮಾಡಿದೆ.

ತಕ್ಷಣವೇ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ರಾಜ್ಯದ ಎಲ್ಲ ಮೃಗಾಲಯಗಳಲ್ಲಿರುವ ಪಶುವೈದ್ಯರು ಪ್ರಾಣಿಗಳಿಗೆ ಚಿಕಿತ್ಸೆ ನೀಡುವಾಗ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು (SOP) ಕಟ್ಟುನಿಟ್ಟಾಗಿ ಪಾಲಿಸುವಂತೆ ಖಂಡ್ರೆ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮಲೆನಾಡು ಭಾಗದ ಶಿವಮೊಗ್ಗ ನಗರದಿಂದ 10 ಕಿಮೀ ದೂರದಲ್ಲಿರುವ ತ್ಯಾವರೆಕೊಪ್ಪ ಮೃಗಾಲಯವು 250 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿದೆ. ಈ ಮೃಗಾಲಯದಲ್ಲಿ ನಾಲ್ಕು ಸಿಂಹಗಳು ಮತ್ತು ಏಳು ಹುಲಿಗಳಿದ್ದು, ಸಿಂಹ ಮತ್ತು ಹುಲಿ ಸಫಾರಿಗೆ ಹೆಸರುವಾಸಿಯಾಗಿದೆ. ಈ ಆವರಣವನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರವು ನಿರ್ವಹಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...