ಶಿವಮೊಗ್ಗ | SIR ರದ್ದತಿಗೆ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳ ಒಕ್ಕೂಟ ಆಗ್ರಹ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಲೋಪದೋಷಗಳು ಮತ್ತು ಅಕ್ರಮಗಳು ನಡೆದಿವೆ. ಈ ಎಸ್‌ಐಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ‘SIR ವಿರೋಧಿ ಜಾತ್ಯತೀಯ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಕರ್ನಾಟಕ’ ಆಗ್ರಹಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.

- Advertisement -

ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವ ಮತ್ತು ಮತದಾನದ ಹಕ್ಕನ್ನು ಕಸಿಯುವ ಹುನ್ನಾರ ನಡೆಯುತ್ತಿದೆ ಎಂದು ಸಂಘಟನೆಗಳ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಎಸ್‌ಐಆರ್‌ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಹಾಗೂ ಈ ಅಕ್ರಮಗಳಿಗೆ ಹೊಣೆಯಾಗಿರುವ ಚುನಾವಣಾ ಆಯೋಗದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಅಲ್ಲದೆ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಕಾಪಾಡಲು ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಬೇಕು ಎಂದೂ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

ಸಂವಿಧಾನಕ್ಕೆ 77 – ಈಡೇರದ ಕನಸು…..

ಸಂವಿಧಾನ ದಿನ ಒಂದು ಬಗೆಯ ಲಯವಿದೆ. ಅಂದು ಮುಂಜಾನೆಯಿಂದ ಇರುಳಿನವರೆಗೂ ಸಂವಿಧಾನದ್ದೇ ಸದ್ದು. ಅದರ ಮಹತ್ವ, ಅಗತ್ಯ, ಅನಿವಾರ್ಯತೆ, ಅನುಕೂಲತೆ ಬಗ್ಗೆ ಸ್ಮರಿಸಿಕೊಂಡು ಸಂಭ್ರಮಿಸುತ್ತೇವೆ. ಪ್ರಧಾನಿಯಿಂದ ಗ್ರಾಮ ಪಂಚಾಯಿತಿ ಸದಸ್ಯರವರೆಗೂ ಪ್ರಶ್ನಿಸಲು ಇರುವ "ಅಧಿಕಾರಭಾಗ್ಯ"...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ...

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ ಸಮಿತಿಯ ಒಂದು ವರ್ಷದ ಅಭಿಯಾನ; ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹೊಸ ಸಂಕಲ್ಪ ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳಿಗೂ...

ಸಂವಿಧಾನ ದಿನದ ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವುದು ಅತ್ಯಂತ ತುರ್ತು ಅಗತ್ಯವಾಗಿದೆ ಎಂದು ಪ್ರತಿಪಾದಿಸಿರುವ ಸಂಘಟನೆಗಳು, ರಾಷ್ಟ್ರಪತಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಸಂವಿಧಾನಬದ್ಧ ಹಕ್ಕುಗಳಿಗೆ ಎದುರಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಮನವಿ ಮಾಡಿವೆ.

ಮನವಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಲಾಗಿದೆ. SIR ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಚುನಾವಣಾ ಆಯೋಗವು ನವೆಂಬರ್ 6ರಂದು ಹೊರಡಿಸಿದ ಹೊಸ ಸೂಚನೆಗಳಲ್ಲಿ, ಮತದಾರರ ಪಟ್ಟಿಯಿಂದ ಕೈಬಿಡಲಾದವರ ಪಟ್ಟಿಯನ್ನು ಪ್ರತಿ ಮತಗಟ್ಟೆಯಲ್ಲಿ ಪ್ರಕಟಿಸುವುದು, ಮನೆಮನೆಗೆ ಮಾಹಿತಿ ತಲುಪಿಸುವುದು ಹಾಗೂ ತಪ್ಪಾಗಿ ಹೆಸರು ಕೈಬಿಡಲ್ಪಟ್ಟ ಮತದಾರರಿಂದ ಮತ್ತೆ ಎನ್ಯೂಮರೇಷನ್ ಫಾರಂ ಪಡೆದು ಅವರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವಂತೆ ಸೂಚಿಸಿರುವುದನ್ನು ಸಂಘಟನೆಗಳು ಉಲ್ಲೇಖಿಸಿವೆ.

ಈ ಸೂಚನೆಗಳೇ SIR ಪ್ರಕ್ರಿಯೆಯಲ್ಲಿನ ಲೋಪದೋಷಗಳಿಗೆ ಸಾಕ್ಷಿಯಾಗಿವೆ ಎಂಬುದು ಸಂಘಟನೆಗಳ ವಾದವಾಗಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿದ್ದವರಿಂದ ಮತ್ತೆ ಫಾರಂ-6 ಭರ್ತಿ ಮಾಡಿಸಿಕೊಳ್ಳುವುದು, ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಕೈಬಿಡುವುದು ಸೇರಿದಂತೆ ಹಲವು ಕ್ರಮಗಳು ಪ್ರಶ್ನಾರ್ಹವಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಗಂಭೀರ ಲೋಪದೋಷಗಳ ಆರೋಪಕರ್ನಾಟಕದಲ್ಲಿ ಅಂತಿಮಗೊಳಿಸಲಾಗಿದೆ ಎನ್ನಲಾದ SIR ಮತದಾರರ ಪಟ್ಟಿಯಲ್ಲಿಯೂ ಹಲವು ಗಂಭೀರ ದೋಷಗಳಿವೆ ಎಂದು ಸಂಘಟನೆಗಳು ಆರೋಪಿಸಿವೆ.

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರ ಜನಸಂಖ್ಯೆ ಸುಮಾರು 5.2 ಕೋಟಿ ಇದೆ ಎಂಬ ಅಂಕಿಅಂಶವನ್ನು ಉಲ್ಲೇಖಿಸಿರುವ ಸಂಘಟನೆಗಳು, ಮತದಾರರ ಪಟ್ಟಿಯಲ್ಲಿ ಸುಮಾರು 4.5 ಕೋಟಿ ಜನರಷ್ಟೇ ಉಳಿದಿರುವುದಕ್ಕೆ ಕಾರಣವೇನು? ಉಳಿದ ಸುಮಾರು 70 ಲಕ್ಷ ಜನರು ಮತದಾರರ ಪಟ್ಟಿಯಿಂದ ಹೊರಗುಳಿದಿರುವುದೇಕೆ? ಎಂದು ಪ್ರಶ್ನಿಸಿವೆ.

ವಿಶೇಷವಾಗಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಮತದಾರರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದ ವ್ಯತ್ಯಾಸ ಕಂಡುಬರುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಅಂತಿಮ ಪಟ್ಟಿಯಲ್ಲಿಯೂ ಸರಿಯಾದ ವಿಳಾಸವಿಲ್ಲದ ಸುಮಾರು 20 ಲಕ್ಷ ನಮೂದುಗಳನ್ನು ತಮ್ಮ ಡೇಟಾ ತಂಡ ಗುರುತಿಸಿದೆ ಎಂದು ಸಂಘಟನೆಗಳು ಹೇಳಿವೆ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವ ಮತದಾರರಲ್ಲಿ ಶೇ.25ರಷ್ಟು ಮಂದಿ ನೋಂದಣಿಯಿಂದ ಹೊರಗುಳಿದಿದ್ದಾರೆ ಎಂಬ ಅಧ್ಯಯನದ ಅಂಶವನ್ನೂ ಪ್ರಸ್ತಾಪಿಸಲಾಗಿದೆ. ಬೆಂಗಳೂರಿನಲ್ಲಿ ಹೊಸದಾಗಿ ನೋಂದಾಯಿಸಲಾದ 1.2 ಲಕ್ಷ ಮತದಾರರ ಕುರಿತ ಮೂಲ ಮಾಹಿತಿಯ ಲಭ್ಯತೆಯ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ದೇಶಾದ್ಯಂತ ಮತದಾನದ ಹಕ್ಕಿಗೆ ಧಕ್ಕೆಯಾಗಿದೆ ಎಂಬ ಆತಂಕSIR ಪ್ರಕ್ರಿಯೆಯಲ್ಲಿನ ಲೋಪಗಳು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಇಡೀ ದೇಶದ ಮತದಾರರ ಪಟ್ಟಿಯ ಮೇಲೂ ಪರಿಣಾಮ ಬೀರಿವೆ ಎಂದು ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ. ದೇಶಾದ್ಯಂತ ಕೋಟ್ಯಂತರ ಮತದಾರರು ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂಬ ಆರೋಪ ಮಾಡಿರುವ ಸಂಘಟನೆಗಳು, ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಮಂದಿ ಮೇಲ್ಮನವಿ ಸಲ್ಲಿಸಿದ್ದರೂ ಅವರ ಮತದಾನದ ಹಕ್ಕಿನ ಕುರಿತು ಗಂಭೀರ ಪ್ರಶ್ನೆಗಳು ಉಳಿದಿವೆ ಎಂದು ಮನವಿಯಲ್ಲಿ ಪ್ರಸ್ತಾಪಿಸಿವೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂಘಟನೆಗಳು, ಚುನಾವಣಾ ಆಯೋಗವು ಸ್ವತಂತ್ರವಾಗಿ, ಪಾರದರ್ಶಕವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ಮೇಲಿನ ಸಾರ್ವಜನಿಕ ವಿಶ್ವಾಸ ಕುಸಿಯುವಂತಾಗಿದೆ ಎಂದು ಅಭಿಪ್ರಾಯಪಟ್ಟಿವೆ.

ಸಂಘಟನೆಗಳ ಪ್ರಮುಖ ಬೇಡಿಕೆಗಳು:

ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಸಂಘಟನೆಗಳು ಪ್ರಮುಖವಾಗಿ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟಿವೆ.

1. SIR ಪ್ರಕ್ರಿಯೆಯನ್ನು ಹಾಗೂ ಅದರ ಆಧಾರದ ಮೇಲೆ ಅಂತಿಮಗೊಳಿಸಿರುವ ಮತದಾರರ ಪಟ್ಟಿಯನ್ನು ರದ್ದುಗೊಳಿಸಬೇಕು.
2. ಈ ಪ್ರಕ್ರಿಯೆಯಲ್ಲಿನ ಲೋಪದೋಷಗಳಿಗೆ ಹೊಣೆಗಾರರಾದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸೇರಿದಂತೆ ಸಂಬಂಧಪಟ್ಟ ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಂಡು ಅವರನ್ನು ಪದಚ್ಯುತಗೊಳಿಸಬೇಕು.
3. 2023ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಹಾಗೂ ಸೇವಾ ಷರತ್ತುಗಳಿಗೆ ಸಂಬಂಧಿಸಿದ ಕಾಯ್ದೆಯಲ್ಲಿನ ವಿವಾದಾತ್ಮಕ ಅಂಶಗಳನ್ನು ಮರುಪರಿಶೀಲಿಸಿ, ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸಬೇಕು.
4. ಭವಿಷ್ಯದಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ಪಾರದರ್ಶಕ, ಪ್ರಜಾಸತ್ತಾತ್ಮಕ ಹಾಗೂ ನ್ಯಾಯಸಮ್ಮತ ವಿಧಾನದಲ್ಲಿ ನಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಒಟ್ಟಿನಲ್ಲಿ, ಮತದಾರರ ಪಟ್ಟಿಯ ಪರಿಷ್ಕರಣೆ ಎಂಬುದು ಅರ್ಹ ಮತದಾರರನ್ನು ಗುರುತಿಸಿ ಅವರ ಹಕ್ಕುಗಳನ್ನು ಮತ್ತಷ್ಟು ಬಲಪಡಿಸುವ ಪ್ರಕ್ರಿಯೆಯಾಗಬೇಕೇ ಹೊರತು, ಯಾವುದೇ ಕಾರಣಕ್ಕೂ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವಂತಾಗಬಾರದು. ಚುನಾವಣಾ ಆಯೋಗದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಮರುಸ್ಥಾಪಿಸಲು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಾಂವಿಧಾನಿಕ ಸಂಸ್ಥೆಗಳು ತಕ್ಷಣ ಮಧ್ಯಪ್ರವೇಶಿಸಬೇಕು ಎಂಬುದು ಸಂಘಟನೆಗಳ ಒತ್ತಾಯವಾಗಿದೆ.

SIR ವಿರೋಧಿ ಕರ್ನಾಟಕದ ಪರವಾಗಿ ಮನವಿಗೆ ನೀಡಿದ ಸಂದರ್ಭದಲ್ಲಿ ಕೆ.ಎಲ್. ಅಶೋಕ್ – ರಾಜ್ಯ ಸಂಚಾಲಕರು, ಎದ್ದೇಳು ಕರ್ನಾಟಕ; ಎಂ. ಗುರುಮೂರ್ತಿ – ರಾಜ್ಯ ಸಂಘಟನಾ ಸಂಚಾಲಕರು, ಕರ್ನಾಟಕ ದಲಿತ ಸಂಘರ್ಷ ಸಮಿತಿ; ಕೆ. ರಾಘವೇಂದ್ರ – ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ, ಶಿವಮೊಗ್ಗ; ಕೆ.ಪಿ. ಶ್ರೀಪಾಲ್ – ಹಿರಿಯ ವಕೀಲರು, ಶಿವಮೊಗ್ಗ; ನಾರಾಯಣ್ – ಜಿಲ್ಲಾ ಮುಖಂಡರು, CITU; ಮುಹಮ್ಮದ್ ಆಯೂಬ್ – ಅಧ್ಯಕ್ಷರು, ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ; ಮುಸ್ತಕಾ ಬೇಗ್ – ಕಾರ್ಯದರ್ಶಿಗಳು, WPI; ಆರ್. ಕುಮಾರ್ – ಬರಹಗಾರರು; ಡಿ.ಎಸ್. ಶಿವಕುಮಾರ್ ‘ವಿವೇಕ’; ಹುಸೇನ್ – ಸಾಮಾಜಿಕ ಹೋರಾಟಗಾರರು; ಸುರೇಶ್ ಅರತಾಳು – ಚಿಂತಕರು; ಷಹರಾಜ್ – ವಕೀಲರು, ಶಿವಮೊಗ್ಗ; ಜಿ. ರಾಜು – ಪ್ರಗತಿಪರ ಸಂಘಟನೆಗಳ ಒಕ್ಕೂಟ, ಭದ್ರಾವತಿ; ಸುಭಾನ್ – ಜಿಲ್ಲಾ ಮುಖಂಡರು, CPI(M) ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಡಿಲಿಮಿಟೇಷನ್’ ಮಸೂದೆ ಬೆಂಬಲಕ್ಕಾಗಿ ಸಂಸದರಿಗೆ ₹150 ಕೋಟಿ ಆಮಿಷ: ಸಂಜಯ್ ರಾವತ್ ಆರೋಪ

ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಭಾರತೀಯ ಜನತಾ ಪಕ್ಷವು (ಬಿಜೆಪಿ)...

ರಾಜಕಾರಣದಲ್ಲಿ ಮುಂದೆ ಬರಬೇಕೆಂದಿದ್ದರೆ ಮೋದಿ ಜೊತೆ ನಿಲ್ಲುವಂತೆ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದರು: ಸುವೇಂದು ಅಧಿಕಾರಿ

ರಾಜಕಾರಣದಲ್ಲಿ ಮುಂದೆ ಬರಬೇಕೆಂದಿದ್ದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನರೇಂದ್ರ ಮೋದಿ...

‘ಆಶಾ’ಗಳು ಇದ್ದರೂ ನಡೆಯುತ್ತೆ, ಇಲ್ಲದಿದ್ದರೂ ನಡೆಯುತ್ತೆ: ಆರೋಗ್ಯ ಸಚಿವ ಯು.ಟಿ ಖಾದರ್

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು...