ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

Date:

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಗ್ರಾಮದ ಚಂದ್ರಶೇಖರ ಮತ್ತು ಶಾರದಾ ದಂಪತಿಯ ಪುತ್ರಿ ಅಂಜನಾ (22) ಮೃತಪಟ್ಟ ಯುವತಿ. ಯುವತಿಯ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

- Advertisement -

ಘಟನೆ ನಡೆದ ಬೆನ್ನಲ್ಲೇ ಅಂತ್ಯಕ್ರಿಯೆಯನ್ನು ತರಾತುರಿಯಲ್ಲಿ ನೆರವೇರಿಸಲಾಗಿದೆ ಎಂಬ ವಿಚಾರ ಸ್ಥಳೀಯರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಂಜನಾ ಅವರ ಸಾವಿಗೆ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಯುವತಿಯ ಸಾವಿನ ಬೆನ್ನಲ್ಲೇ ಅಂತ್ಯಕ್ರಿಯೆ ನೆರವೇರಿಸಿರುವ ವಿಚಾರ ಗ್ರಾಮದಲ್ಲಿ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದೇ ದಿನ (ಅ.22) ಹಾಸನದ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಸಾವಿನ ಸುತ್ತವೂ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.

Advertisements

ಮೃತ ಯುವತಿಯನ್ನು ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ (19) ಎಂದು ಗುರುತಿಸಲಾಗಿದೆ. ಬಿಎ ಓದುತ್ತಿದ್ದ ರಚಿತಾ ಇದ್ದಕ್ಕಿದ್ದಂತೆ ತಮ್ಮ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಈ ಯುವತಿ ಸುಮಾರು ಒಂದೂವರೆ ವರ್ಷದಿಂದ ನವೀನ್‌ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ನವೀನ್‌ ಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದೇ ಬೇಕರಿಯಲ್ಲಿ ರಚಿತಾ ತಾಯಿ ಸಾಕಮ್ಮ ಸಹ ಕೆಲಸ ಮಾಡುತ್ತಿದ್ದರು. ಇಬ್ಬರು ಪ್ರೀತಿಸುವ ವಿಷಯವನ್ನು ಸಾಕಮ್ಮ ಬಳಿ ರಚಿತಾ ಹಾಗೂ ನವೀನ್ ಹೇಳಿದ್ದರು. ಮದುವೆ ಮಾಡಿಸುವುದಾಗಿ ರಚಿತಾ ತಾಯಿ ಭರವಸೆಕೊಟ್ಟಿದ್ದರು. ಆದರೆ ಇತ್ತೀಚಿಗೆ ರಚಿತಾಳಿಗೆ ನವೀನ್ ಕಿರುಕುಳ ನೀಡುತ್ತಿದ್ದ ಎಂದು ಸಾಕಮ್ಮ ಆರೋಪಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ-ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಭುಗಿಲೆದ್ದ ಆಕ್ರೋಶ: ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಉದ್ದೇಶಪೂರ್ವಕವಾಗಿ...

ಚೀನಾ ವಿಚಾರದಲ್ಲಿ ಮೋದಿ ಮೌನ; ಕೇಂದ್ರದ ವಿರುದ್ಧ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಸೇನೆಯೊಂದಿಗೆ ಮುಖಾಮುಖಿ ಸಂಘರ್ಷ ಮುಂದುವರಿದಿದೆ ಎಂದು...

ಐಫೋನ್‌ ಹ್ಯಾಕ್‌ನಿಂದ ಟ್ರಂಪ್ ಅಳಿಯನ ಬರೋಬ್ಬರಿ 31,500 ಕೋಟಿ ರೂ.ಗಳ ಬೃಹತ್ ಹಗರಣ ಬಯಲು!

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು...