ತೀರ್ಥಹಳ್ಳಿ | ನಾಬಳ ಸೇತುವೆ ಜಲಾವೃತ: ಒಂದೇ ಕುಟುಂಬದ 7 ಮಂದಿಯ ರಕ್ಷಣೆ

Date:

ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಬಳ ಸೇತುವೆಯ ಮೇಲೆ ನೀರು ರಭಸದಿಂದ ಹರಿದು ಬಂದ ಪರಿಣಾಮ ಒಂದೇ ಕುಟುಂಬದ ಏಳು ಜನರಿದ್ದ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ, ಅಪಾಯದ ಮುನ್ಸೂಚನೆಯರಿತ ಸ್ಥಳೀಯರು ಕೂಡಲೇ ಪ್ರಯಾಣಿಕರ ನೆರವಿಗೆ ಧಾವಿಸಿದ್ದಾರೆ.

- Advertisement -

ಹೊನ್ನಾವರ ಮೂಲದ ಕುಟುಂಬ, ಶೃಂಗೇರಿಗೆ ತೆರಳುತ್ತಿದ್ದ ಮಾರ್ಗಮಧ್ಯೆ ಘಟನೆ ಸಂಭವಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ತೀರ್ಥಹಳ್ಳಿ ಪ್ರದೇಶದ ನದಿ, ಹಳ್ಳ-ಕೊಳ್ಳಗಳು ತುಂಬಿಕೊಂಡಿವೆ. ನಾಬಳ ಗ್ರಾಮದ ಮುಖೇನ ಹರಿಯುವ ಮಾಲತಿ ನದಿ ಧುಮ್ಮಿಕ್ಕಿ ಹರಿಯುತ್ತಿದ್ದು, ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ಸಂಪೂರ್ಣವಾಗಿ ಜಲಾವೃತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸೇತುವೆಯ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರಿಂದ ಕಾರು ನಡುನೀರಿನಲ್ಲಿ ಸಿಲುಕಿಕೊಂಡಿತು. ಅಪಾಯ ಮನಗಂಡ ಪ್ರಯಾಣಿಕರು ಕಾರಿನ ಮೇಲೇರಿ ಕುಳಿತು ರಕ್ಷಣೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಸ್ಥಳೀಯರ ಗಮನಕ್ಕೆ ಬಂದ ನಂತರ ರಕ್ಷಣಾ ಕಾರ್ಯ ನಡೆದಿದೆ.

ಸದ್ಯ ನಾಬಳ ಸೇತುವೆ ಮೇಲೆ 4 ಅಡಿ ನೀರು ಹರಿಯುತ್ತಿದೆ. ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನ ಹಲವೆಡೆ ಸಣ್ಣಪುಟ್ಟ ಅನಾಹುತಗಳು ಸಂಭವಿಸಿವೆ. ದನಗಳ ಕೊಟ್ಟಿಗೆಗಳು ಮುರಿದು ಬಿದ್ದರೆ, ಕೆಲವೆಡೆ ಭಾಗಶಃ ಮನೆಗಳು ಕುಸಿದು ಬಿದ್ದಿವೆ. ಸದ್ಯಕ್ಕೆ ಯಾವುದೇ ಪ್ರಾಣ ಹಾನಿಯಾದ ವರದಿ ಆಗಿಲ್ಲ.

ಮಳೆ ಮುಂದುವರಿದಿದ್ದು, ತೀರ್ಥಹಳ್ಳಿ ತಾಲೂಕಿನ ಹಲವು ಪ್ರದೇಶಗಳಲ್ಲಿ ನದಿ-ಹಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಸಾರ್ವಜನಿಕರು ಜಾಗರೂಕರಾಗಿ ಇರುವಂತೆ ಸ್ಥಳೀಯ ಆಡಳಿತ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...