ಉಡುಪಿ | ಡಾ.ಶಿವರಾಮ ಕಾರಂತರು ಯಕ್ಷಗಾನದ ಮೂಲಕ ವಿಶ್ವದ ಗಮನ ಸೆಳೆದವರು: ಡಾ.ಬಾಲಾಜಿ ಎಸ್

Date:

Advertisements

ಜಾನಪದಕ್ಕೆ ಯಾವುದೇ ಜಾತಿ, ಮತ, ಧರ್ಮಗಳ ಇತಿ ಮಿತಿಗಳಿಲ್ಲ. ಜಾನಪದವನ್ನು ಉಳಿಸಿ ಬೆಳೆಸುವುದು ಯುವ ಜನತೆಯ ಜವಾಬ್ದಾರಿ. ಡಾ. ಶಿವರಾಮ ಕಾರಂತರು ಸ್ವತಃ ಯಕ್ಷಗಾನವನ್ನು ಪ್ರದರ್ಶನ ಮಾಡುವ ಮೂಲಕ ವಿಶ್ವದ ಗಮನ ಸೆಳೆದವರು ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಎಸ್ ಹೇಳಿದರು.
ಅವರು ಗುರುವಾರ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-5 ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ. ಶಿವರಾಮ ಕಾರಂತರು ತಮ್ಮ ಬರಹಗಳ ಮೂಲಕ ಕರಾವಳಿಯ ಸಂಸ್ಕೃತಿ ಮಾತ್ರವಲ್ಲದೇ ಅದರೊಂದಿಗೆ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುವ ಕಾರ್ಯದಲ್ಲಿ ತೊಡಗಿದವರು. ಕಾರಂತರ ಕುರಿತ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವುದೇ ಡಾ.ಶಿವರಾಮ ಕಾರಂತ ಟ್ರಸ್ಟಿನ ಮುಖ್ಯ ಉದ್ದೇಶವಾಗಿದೆ ಎಂದರು.

ಚಿಂತಕ ಮುಷ್ತಾಕ್ ಹೆನ್ನಾಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಡಾ. ಶಿವರಾಮ ಕಾರಂತರ ಬದುಕು, ಕೃತಿಗಳು ಮತ್ತು ಪರಿಸರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಡಾ. ಶಿವರಾಮ ಕಾರಂತರು ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಕುರಿತು ವಿಶೇಷ ಕಾಳಜಿ ಹೊಂದಿದ್ದರು. ಸಮಾಜವನ್ನು ಜಾಗೃತಿಗೊಳಿಸುವಲ್ಲಿ ಕಾರಂತರ ಪಾತ್ರ ಮಹತ್ತವಾಗಿದೆ ಎಂದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

Advertisements

ಈ ಸಂದರ್ಭದಲ್ಲಿ ಖ್ಯಾತ ಜಾನಪದ ವಿದ್ವಾಂಸ ಪ್ರೊ. ಕನರಾಡಿ ವಾದಿರಾಜ್ ಭಟ್ ಜಲ ಜಾನಪದ ಪುಸ್ತಕ ಬಿಡುಗಡೆಗೊಳಿಸಿದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯೆ ಡಾ. ಭಾರತಿ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ. ಪ್ರಸಾದ್ ರಾವ್, ಜಲ ಜಾನಪದ ಕೃತಿಯ ಸಂಪಾದಕ ಮಂಡಳಿಯ ಸದಸ್ಯರು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಕುಮಾರ್ ಶೆಟ್ಟಿ ನಿರೂಪಿಸಿ, ರೇಷ್ಮಾ ಶೆಟ್ಟಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X