ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರಕ್ಕೆ ಸಾಕ್ಷಿ: ಶೋಭಾ ಕರಂದ್ಲಾಜೆ

Date:

ಸರ್ಕಾರಿ ಬಸ್‌ನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್‌ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ಮಹಿಳೆಯರಿಗೆ ಫ್ರೀ ಬಸ್ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ ಅವರು, “ಹೆಣ್ಮಕ್ಕಳಿಗೆ ಉಚಿತ ಕೊಟ್ಟಿರುವುದು ಖುಷಿಯಾಗಿದೆ. ಒಳ್ಳೆಯದಾಗಲಿ. ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದ್ರೆ, ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರ ತೋರಿಸಿಕೊಡುತ್ತದೆ. ಇದಕ್ಕೆ ಜನರೇ ಉತ್ತರಿಸುತ್ತಾರೆ” ಎಂದರು.

“ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ, ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು” ಎಂದರು.

“ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು. ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ, ನಮ್ಮ ದೇಶಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...