ಔರಾದ್‌ ಕ್ಷೇತ್ರದ 40 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ : ಶಾಸಕ ಪ್ರಭು ಚವ್ಹಾಣ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರ

Date:

ʼಬೀದರ್‌ ಜಿಲ್ಲೆಯ ಔರಾದ್ (ಬಿ) ವಿಧಾನಸಭಾ ಕ್ಷೇತ್ರದಲ್ಲಿ 18 ಪ್ರಾಥಮಿಕ ಮತ್ತು 22 ಪ್ರೌಢ ಶಾಲೆಗಳಲ್ಲಿ ಖಾಯಂ ಕನ್ನಡ ಶಿಕ್ಷಕರ ಕೊರತೆಯಿದೆʼ ಎಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಉತ್ತರಿಸಿದ್ದಾರೆ.

- Advertisement -

ಔರಾದ(ಬಿ) ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ವಿಷಯ ಶಿಕ್ಷಕರ‌ ಕೊರತೆ ಬಗ್ಗೆ ಮಾಜಿ ಸಚಿವ, ಔರಾದ್‌ ಶಾಸಕ ಪ್ರಭು ಬಿ.ಚವ್ಹಾಣ ಅವರು ವಿಧಾನಸಭಾ ಅಧಿವೇಶನದಲ್ಲಿ ಕೇಳಿದ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆಯೊಂದಕ್ಕೆ ಸಚಿವ ಮಧು ಬಂಗಾರಪ್ಪ ಅವರು ಈ ಮೇಲಿನಂತೆ ಉತ್ತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ʼಕೊರತೆಯಿಂದ ಶಿಕ್ಷಕರ ಹುದ್ದೆಗಳ ನೇಮಕಾತಿ/ನಿಯೋಜನೆಗೆ ಸರ್ಕಾರ ಕ್ರಮ ಕೈಗೊಂಡಿದೆಯೇ ಎಂದು ಶಾಸಕ ಪ್ರಭು ಚವ್ಹಾಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ ಅವರು, ʼಖಾಲಿಯಿರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ 7 ಜಿಲ್ಲೆಗಳಲ್ಲಿ ಖಾಲಿಯಿರುವ ಪ್ರಾಥಮಿಕ ಶಾಲೆಗಳ 4,882 ಮತ್ತು ಪ್ರೌಢ ಶಾಲೆಗಳ 385 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದಿಂದ ಅನುಮತಿ ನೀಡಲಾಗಿದೆʼ ಎಂದಿದ್ದಾರೆ.

ʼಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2024ರ ಅಕ್ಟೋಬರ್ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿರುವುದಿಲ್ಲʼ ಎಂದು ಸಚಿವ ಮಧು ಬಂಗಾರಪ್ಪ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಖಾಯಂ ಕನ್ನಡ ಶಿಕ್ಷಕರ ನೇಮಕ್ಕೆ ಆಗ್ರಹ :

ʼರಾಜ್ಯದ ಗಡಿ ಭಾಗದಲ್ಲಿರುವ ಔರಾದ (ಬಿ) ಕ್ಷೇತ್ರದಲ್ಲಿ ಮರಾಠಿ ಮತ್ತು ತೆಲುಗು ಭಾಷೆಗಳ ಪ್ರಭಾವ ಹೆಚ್ಚಾಗಿದೆ. ನಾನು ಶಾಸಕನಾದ ನಂತರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದೇನೆ. ಕನ್ನಡದ ಹಿತರಕ್ಷಣೆಯ ದಿಶೆಯಲ್ಲಿ ನಿರಂತರ ಶ್ರಮಿಸುತ್ತಿದ್ದೇನೆ. ಎಲ್ಲ ಶಾಲೆಗಳಲ್ಲಿ ಕನ್ನಡ ಪಾಠಗಳು ನಡೆಯುವಂತೆ ಮಾಡಿದ್ದೇನೆ. ಗ್ರಾಮ ಸಂಚಾರ ನಡೆಸಿ ಶಾಲೆಗಳಲ್ಲಿನ ಕೊರತೆಗಳನ್ನು ತಿಳಿದುಕೊಂಡು ಸರಿಪಡಿಸುವ ವ್ಯವಸ್ಥೆ ಮಾಡುತ್ತಿದ್ದೇನೆ. ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಿದ್ದೇನೆ‌. ಎಲ್ಲ ಪ್ರಯತ್ನಗಳಿಂದಾಗಿ ಶಿಕ್ಷಣ ಕ್ಷೇತ್ರ ಸಾಕಷ್ಟು ಸುಧಾರಿಸುತ್ತಿದೆʼ ಎಂದು ಶಾಸಕ ಪ್ರಭು ಚವ್ಹಾಣ ತಿಳಿಸಿದ್ದಾರೆ.

ʼಕ್ಷೇತ್ರದ ಸಾಕಷ್ಟು ಶಾಲೆಗಳಲ್ಲಿ ಶಿಕ್ಷಕರ ಸಮಸ್ಯೆಯಿದೆ‌. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲ‌. ವಿದ್ಯಾರ್ಥಿಗಳಿಲ್ಲದ ಕಡೆ ಹೆಚ್ಚಿನ ಶಿಕ್ಷಕರಿದ್ದು, ವಿದ್ಯಾರ್ಥಿಗಳು ಹೆಚ್ಚಿರುವ ಕಡೆ ಶಿಕ್ಷಕರ ಕೊರತೆಯಿದೆ. ಅಧಿಕಾರಿಗಳು ಸುಳ್ಳು ಮಾಹಿತಿ ನೀಡಿ ಸಚಿವರನ್ನು ದಾರಿ ತಪ್ಪಿಸುತ್ತಿದ್ದಾರೆ. ಶಿಕ್ಷಕರ ಕೊರತೆಯಿಂದಾಗಿ ಗಡಿ ಭಾಗದಲ್ಲಿ ಶಿಕ್ಷಣಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆʼ ಎಂದಿದ್ದಾರೆ.

ʼವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣ ಶಿಕ್ಷಕರನ್ನು ಒದಗಿಸಬೇಕು‌. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭಿಸಬೇಕು. ನಮ್ಮ ಮಕ್ಕಳು ಕೂಡ ಇಂದಿನ ಸ್ಪರ್ಧಾತ್ಮಕತೆಗೆ ಒಗ್ಗಿಕೊಳ್ಳಬೇಕು. ಈ ದಿಶೆಯಲ್ಲಿ ಸಚಿವರು ಪ್ರಮಾಣಿಕವಾಗಿ ಕೆಲಸ ಮಾಡಬೇಕು. ಗಡಿ ಭಾಗದಲ್ಲಿರುವ ಶಾಲೆಗಳಲ್ಲಿ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು, ಈ ಭಾಗದತ್ತ ಹೆಚ್ಚಿನ ಕಾಳಜಿ ವಹಿಸಬೇಕು. ಶಿಕ್ಷಕರ ಸಮಸ್ಯೆ ಸೇರಿದಂತೆ ಸರ್ಕಾರಿ ಶಾಲೆಗಳಲ್ಲಿನ ಎಲ್ಲ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ ಗಡಿ ಭಾಗದಲ್ಲಿ ಶಿಕ್ಷಣ ಸುಧಾರಣೆಗೆ ಪ್ರಯತ್ನಿಸಬೇಕುʼ ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಔರಾದ ತಾಲೂಕಿನ ಅರ್ಧದಷ್ಟು ಸರ್ಕಾರಿ ಪ್ರೌಢ ಶಾಲೆಗಳಿಗೆ ಕನ್ನಡ ಭಾಷಾ ಶಿಕ್ಷಕರಿಲ್ಲ

ಔರಾದ್‌ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ವಿಷಯ ಶಿಕ್ಷಕರ ಬಗ್ಗೆ ʼಈದಿನ.ಕಾಮ್‌ʼ 2024 ಜೂನ್‌ 21ರಂದು ʼಔರಾದ ತಾಲೂಕಿನ ಅರ್ಧದಷ್ಟು ಸರ್ಕಾರಿ ಪ್ರೌಢ ಶಾಲೆಗಳಿಗೆ ಕನ್ನಡ ಭಾಷಾ ಶಿಕ್ಷಕರಿಲ್ಲʼ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...