ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆವರೆ?: ಕಾಂಗ್ರೆಸ್‌ ಶಾಸಕ ಕೆ.ಎನ್ ರಾಜಣ್ಣ

Date:

ಈದ್ಗಾ ಮೈದಾನ ಮತ್ತು ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರೆಯೇ ಎಂದು ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ ಪ್ರಶ್ನಿಸಿದ್ದಾರೆ.

- Advertisement -

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಅನುಮತಿ ಪಡೆಯುವುದು ಕಡ್ಡಾಯ ಎಂಬ ನಿಯಮವನ್ನು ಸರ್ಕಾರ ಜಾರಿಗೆ ತಂದಿರುವ ಕುರಿತು ಪ್ರತಿಕ್ರಿಯೆ ನೀಡಿದರು. “ನಮಾಜ್ ಮಾಡಲು ಅನುಮತಿ ಕೇಳಿಕೊಂಡು ಅವರು (ಮುಸ್ಲಿಮರು) ಬರುತ್ತಾರೆಯೇ? ಅನುಮತಿ ಪಡೆಯದೇ ರಸ್ತೆಯಲ್ಲಿ ನಮಾಜ್ ಮಾಡಿದರೆ, ಅದನ್ನು ತಡೆಯುವ ಶಕ್ತಿ ಇದೆಯೇ? ಜಾರಿ ಮಾಡಲು ಸಾಧ್ಯವಾಗುವ ಕಾನೂನನ್ನು ಜಾರಿಗೆ ತರಬೇಕೇ ಹೊರತು, ಜಾರಿ ಮಾಡಲಾಗದ ಕಾನೂನುಗಳನ್ನು ಜಾರಿಗೆ ತಂದರೆ, ಅದು ಪುಸ್ತಕದಲ್ಲಿ ಮಾತ್ರವೇ ಇರುತ್ತದೆ. ಈ ನಿಯಮ ಯಾವ ಪ್ರಮಾಣದಲ್ಲಿ ಜಾರಿಗೆ ಬರುತ್ತದೆ ಕಾದು ನೋಡೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಜಾಗೃತ ಕರ್ನಾಟಕ ಆಯೋಜಿಸಿದ್ದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ– ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ’ ವಿಚಾರಗೋಷ್ಠಿಯಲ್ಲಿ ಜಿಲ್ಲಾ ಉಸ್ತುವರಿ ಸಚಿವ ಜಿ ಪರಮೇಶ್ವರ್ ಅವರ ಬಗ್ಗೆ ಮಾತನಾಡಿದ ರಾಜಣ್ಣ, “ಪರಮೇಶ್ವರ ಅವರಿಗೆ ಮೀಸಲು ಕ್ಷೇತ್ರವೇ ಯಾಕೆ ಬೇಕು? ಅವರು ಸಾಮಾನ್ಯ ಕ್ಷೇತ್ರದಲ್ಲಿ ಯಾಕೆ ನಿಲ್ಲಬಾರದು? ಅವರು ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಮೀಸಲು ಕ್ಷೇತ್ರದಿಂದ ಮತ್ತೊಬ್ಬರಿಗೆ ಅವಕಾಶ ದೊರೆಯುತ್ತದೆ ಅಲ್ಲವೇ?” ಎಂದು ಹೇಳಿದರು.

“ಎಚ್‌.ಕಾಂತರಾಜು, ಜಯಪ್ರಕಾಶ್‌ ಹೆಗ್ಡೆ ನೇತೃತ್ವದ ವರದಿಗಳನ್ನು ಜಾರಿ ಮಾಡಬೇಕು ಎಂಬ ಮನಸ್ಥಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿತ್ತು. ಆದರೆ, ವರದಿಯನ್ನು ಜಾರಿಗೊಳಿಸದಂತೆ ಕಾಂಗ್ರೆಸ್‌ ನಾಯಕರೇ ಒತ್ತಡ ಹಾಕಿದರು. ಆದ್ದರಿಂದಲೇ ಮತ್ತೊಂದು ಸರ್ವೆ ನಡೆಸುವ ನಿರ್ಣಯ ಕೈಗೊಳ್ಳಬೇಕಾಯಿತು” ಎಂದು ರಾಜಣ್ಣ ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...