ಶ್ರವಣಬೆಳಗೊಳ | ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

Date:

ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ ಚೋಳನಹಳ್ಳಿ (ಶಾಸಕರ ಹುಟ್ಟೂರು) ಗ್ರಾಮದಲ್ಲಿ ಮತಯಾಚನೆಗೆ ಅವರು ತೆರಳಿದ್ದರು. ಈ ವೇಳೆ, ಗ್ರಾಮಸ್ಥರು ಅವರಿಗೆ ಅದ್ದೂರಿ ಸ್ವಾಗತ ಕೋರಿದರು. ಬಳಿಕ ಮತನಾಡಿದ ಬಾಲಕೃಷ್ಣ, “ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ನೀಡಿದ ಸಮಸ್ತ ಜನತೆಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ” ಎಂದರು.

“ನನ್ನನ್ನು ಎರಡು ಬಾರಿ ಶಾಸಕನನ್ನಾಗಿ ಮಾಡಿದ್ದೀರಾ, ನಿಮ್ಮೆಲ್ಲರ ಬೆಂಬಲ, ಸಹಕಾರದ ಮೂಲಕ ಮೂರನೇ ಬಾರಿ ಶಾಸಕನಾಗಿ ನಿಮ್ಮೆಲ್ಲರ ಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಬೇಕು” ಎಂದು  ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಿಮ್ಮೂರಿನ ಮನೆಮಗ ಮೂರನೇ ಬಾರಿ ಶಾಸಕನಾಗುವ ಸುವರ್ಣ ಅವಕಾಶವನ್ನು ಮನಸ್ಸಿನಲ್ಲಿಟ್ಟುಕೊಂಡು ಎಲ್ಲ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನನಗೆ ಮತ ನೀಡಬೇಕು” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಮನೆಗೆ ಹೋಗುವ ಖಾತರಿಯಿಂದ ಕಾಂಗ್ರೆಸ್‌ ಗ್ಯಾರಂಟಿ ಘೋಷಣೆ: ರೇವಣ್ಣ

ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗೇಟ್‌ನಿಂದ ಬೈಕ್‌ ರ‍್ಯಾಲಿ ಮೂಲಕ ಜೆಡಿಎಸ್ ಕಾರ್ಯಕರ್ತರು ಸ್ವಾಗತ ಕೋರಿದರು. ಗ್ರಾಮಕ್ಕೆ ಆಗಮಿಸಿದ ಶಾಸಕರಿಗೆ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು. ಗ್ರಾಮದ ಮುಖಂಡರು ಹೂವು ಎರಚುವ ಮೂಲಕ ಸ್ವಾಗತ ಕೋರಿದರು. ಬಳಿಕ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪ್ರಚಾರ ಮಾಡಿ ಮತಯಾಚನೆ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...