ಉಡುಪಿ | ಸಾಲಿಕೇರಿ ಬಸ್ ನಿಲ್ದಾಣದಲ್ಲಿ ಶ್ರೀ ಕೃಷ್ಣ ಪ್ರಸಾದ್ ಕ್ಯಾಶ್ಯೂ ಸಂಸ್ಥೆಯಿಂದ ನೂತನ ತಂಗುದಾಣ ಲೋಕಾರ್ಪಣೆ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಕೇರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅಗತ್ಯತೆಗಳನ್ನು ಮನಗಂಡು, ಸಂಪತ್ ಕುಮಾರ್ ಶೆಟ್ಟಿ ಇವರ ಮಾಲಿಕತ್ವದ ಶ್ರೀ ಕೃಷ್ಣ ಪ್ರಸಾದ್ ಕ್ಯಾಶ್ಯೂ ಸಂಸ್ಥೆ ವತಿಯಿಂದ ನಿರ್ಮಿಸಲಾದ ನೂತನ ತಂಗುದಾಣವನ್ನು ಶನಿವಾರ ಲೋಕಾರ್ಪಣೆಗೊಳಿಸಲಾಯಿತು.

- Advertisement -

ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಮಾಲೀಕರಾದ ಸಂಪತ್ ಕುಮಾರ್ ಶೆಟ್ಟಿ, “ನಮ್ಮ ಉದ್ಯಮ ಕ್ಷೇತ್ರದಲ್ಲಿ 15 ವರ್ಷಗಳಲ್ಲಿ ಸಾಧಿಸಿದ್ದನ್ನು, ಸಾಲಿಕೇರಿಯ ದೈವ ದೇವರ ಅನುಗ್ರಹದಿಂದ ಕೇವಲ ಒಂದು ವರ್ಷದ ಅವಧಿಯಲ್ಲಿ ಸಾಧಿಸಲು ಸಾಧ್ಯವಾಯಿತು. ಈ ಊರು ನಮಗೆ ಬಹಳಷ್ಟು ಕೊಟ್ಟಿದ್ದು, ಅದಕ್ಕೆ ಪ್ರತಿಫಲವಾಗಿ ಊರಿನ ಅಭಿವೃದ್ಧಿ ಕಾರ್ಯಗಳಲ್ಲಿ ಸದಾ ಜನರೊಂದಿಗೆ ನಿಂತು ಕೆಲಸ ಮಾಡುವ ಬದ್ಧತೆ ನಮ್ಮದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಮಾತನಾಡಿ, “ಶ್ರೀ ಕೃಷ್ಣ ಪ್ರಸಾದ್ ಕ್ಯಾಶ್ಯೂ ಸಂಸ್ಥೆಯು ಸಾವಿರಾರು ಬಡ ವರ್ಗದ ಜನರಿಗೆ ಉದ್ಯೋಗ ಕಲ್ಪಿಸುವ ಮೂಲಕ ಅವರ ಜೀವನೋಪಾಯಕ್ಕೆ ಭದ್ರತೆ ಒದಗಿಸುತ್ತಿದೆ. ಬಡವರ ಹೊಟ್ಟೆ ತುಂಬಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿರುವ ಈ ಸಂಸ್ಥೆಗೆ ವಾರಂಬಳ್ಳಿ ಗ್ರಾಮ ಪಂಚಾಯತ್ ಸದಾ ಪ್ರೋತ್ಸಾಹ ಮತ್ತು ಸಂಪೂರ್ಣ ಸಹಕಾರ ನೀಡಲಿದೆ” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಾರಂಬಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ದೇವಾನಂದ್ ನಾಯಕ್, ಜಿ.ಎಂ. ವಿದ್ಯಾ ಸಂಸ್ಥೆಯ ಸಂಸ್ಥಾಪಕ ಪ್ರಕಾಶ್ ಚಂದ್ರ ಶೆಟ್ಟಿ, ಸಾಲಿಕೇರಿ ಶ್ರೀ ವೀರಭದ್ರ ದೇವಸ್ಥಾನದ ಧರ್ಮದರ್ಶಿಗಳಾದ ಸುರೇಶ್ ಶೆಟ್ಟಿಗಾರ್, ನಾಗೇಶ್, ಹರೀಶ್ ಶೆಟ್ಟಿ, ಉಮಾಬಾಯಿ ಅಶೋಕ್, ನಿರಂಜನ್ ಶೆಟ್ಟಿ, ಮಹೇಶ್ ಶೆಟ್ಟಿಗಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ವಾರಂಬಳ್ಳಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶೇಖರ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...