ಬೀದರ | ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಭಾಲ್ಕಿ ಶ್ರೀಗಳು ಮನವಿ

Date:

Advertisements

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸನ್ಮಾನಿಸಿದ ಅವರು, “ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವ ತಮ್ಮ ಸರ್ಕಾರಕ್ಕೆ ಅಭಿನಂದನೆ ಹಾಗೂ ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಬಜೆಟ್‌ನಲ್ಲಿ ಘೋಷಣೆ
ಮಾಡಿರುವುದು ಸ್ವಾಗತಾರ್ಹ” ಎಂದರು.

“ಅದೇ ರೀತಿ ಜಗತ್ತಿಗೆ ಪ್ರಜಾಪ್ರಭುತ್ವ ಕೊಟ್ಟಿದ್ದು ವಚನ ಸಾಹಿತ್ಯ, ಸರ್ವರಿಗೂ ಸಮಾನತೆ ಸಾರಿದ ಭೂಮಿ ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪಿಸುವುದರಿಂದ ಬಸವಾದಿ ಶರಣರ ತತ್ವಗಳು ಜಗದಗಲ ತಲುಪಿಸಲು ಸಹಕಾರಿ ಆಗುತ್ತದೆ. ವಚನ ಸಾಹಿತ್ಯ ಅಧ್ಯಯನ, ಸಂಶೋಧನೆ ನಡೆಸಲು ಅನುಕೂಲವಾಗುತ್ತದೆ” ಎಂದು ಮನವರಿಕೆ ಮಾಡಿದರು.

Advertisements

“ಈ ಬಗ್ಗೆ ಸರಕಾರದ ಗಮನ ಸೆಳೆದು ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಸೂಕ್ತ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಬೇಕು” ಶ್ರೀಗಳು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?

ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಪ್ರಮುಖರಾದ ಶಶಿಧರ ಕೋಸಂಬೆ, ಜಯರಾಜ ಖಂಡ್ರೆ, ಸಂಗಮೇಶ ಹುಣಜೆ ಮದಕಟ್ಟಿ, ರಾಜಕುಮಾರ ಬಿರಾದಾರ, ಸಂಜೀವಕುಮಾರ
ಜುಮ್ಮಾ, ನವಲಿಂಗ ಪಾಟೀಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X