ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಗ್ರಾಮದಲ್ಲಿ ಅ.14ರಂದು ಬೆಳಗ್ಗೆ 10 ಗಂಟೆಗೆ ಧಮ್ಮದೀಕ್ಷಾ ದಿನ ಹಾಗೂ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಮತ್ತು ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.
ಶ್ರೀರಂಗಪಟ್ಟಣ ಶಾಸಕ ಎ.ಜಿ. ರಮೇಶ ಬಂಡಿಸಿದ್ದೇಗೌಡ ಸಮಾರಂಭ ಉದ್ಘಾಟಿಸುವರು. ಕಡತನಾಳು ವಿಶ್ವಜ್ಞಾನಿ ಅಂಬೇಡ್ಕರ್ ಸಂಘ ಅಧ್ಯಕ್ಷ ಕೆ.ಸಿ ಮಾದೇಶ ಅಧ್ಯಕ್ಷತೆ ವಹಿಸುವರು. ವಸತಿ ಇಲಾಖೆ ಉಪ ಕಾರ್ಯದರ್ಶಿ ಸಿ.ಶಿವಣ್ಣ ಲಾಲಿಪಾಳ್ಯ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಲಿದ್ದಾರೆ.
ಇದನ್ನು ಓದಿದ್ದೀರಾ? ಅದೃಷ್ಟ ಒಲಿದರೆ 50% ತೆರಿಗೆ: ಇದು ನಿರ್ಮಲಕ್ಕನ ತೆರಿಗೆ ಭಯೋತ್ಪಾದನೆ!
ಉಪನ್ಯಾಸಕರಾದ ಡಾ.ಸಿ.ಕೆ. ಮಮತಾ ಅವರು “ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬುದ್ಧ ಧಮ್ಮ” ಕುರಿತು ಉಪನ್ಯಾಸ ನೀಡಲಿರುವರು. ಮುಖ್ಯ ಅತಿಥಿಗಳಾಗಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ, 2015ರ ಮೈಸೂರು ದಸರಾ ಮಹೋತ್ಸವ ಉದ್ಘಾಟಕ ಪುಟ್ಟಯ್ಯ ಮಲಾರ, ರೈತ ನಾಯಕ ಕೆ.ಎಸ್. ನಂಜುಂಡೇಗೌಡ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
