ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಪತ್ರಕರ್ತ ಸಿದ್ದಪ್ಪ ಮೂಲಗೆ ಅವರು ಗುಲಬರ್ಗಾ ವಿಶ್ವವಿದ್ಯಾನಿಲಯಕದ ನೂತನ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ರಾಜ್ಯಪಾಲರ ಸಚಿವಾಲಯದಿಂದ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿಗಳಿಗೆ ಬರೆದ ನೇಮಕಾತಿ ಪತ್ರದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಸಿದ್ದಪ್ಪ ಮೂಲಗೆ ಸೇರಿ ಒಟ್ಟು ಆರು ಮಂದಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಶಸಿಕಲಾ ಸಿ. ತಿಳಿಸಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ಕರ್ನಾಟಕ ವಿದ್ಯಾವಿದ್ಯಾಲಯಗಳ ಅಧಿನಿಯಮ, 2000ರ ಪ್ರಕರಣ 28(1)(ಜಿ)ರಡಿ ಪ್ರದತ್ತವಾದ ಅಧಿಕಾರದನ್ವಯ ಹಾಗೂ ಪ್ರಕರಣ 38(1) ಮತ್ತು 39(1)ರ ಉಪಬಂಧಗಳಿಗೊಳಪಟ್ಟು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಸರ್ಕಾರದಿಂದ ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ.