ಸಿದ್ದಾಪುರ | ಜನರ ಸಮಸ್ಯೆಗಳಿಗೆ ಸ್ಪಂದಿಸಲು ‘ಅನಂತ ಜನ ಸ್ಪಂದನ ಕೇಂದ್ರ’ ಆರಂಭ

Date:

ಸಿದ್ದಾಪುರ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪಡೆಯಲು ಜನರು ಎದುರಿಸುತ್ತಿರುವ ದಾಖಲೆಗಳ ಕೊರತೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಗೊಂದಲ ಮತ್ತು ಕಚೇರಿಯಿಂದ ಕಚೇರಿಗೆ ಅಲೆದಾಟದ ಸಮಸ್ಯೆಗಳಿಗೆ ನೆರವಾಗುವ ಉದ್ದೇಶದಿಂದ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಟ್ಟಣದಲ್ಲಿ ‘ಅನಂತ ಜನ ಸ್ಪಂದನ ಕೇಂದ್ರ’ ಆರಂಭಿಸಲಾಗಿದೆ.

- Advertisement -

ಕೇಂದ್ರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಜನರ ವೈಯಕ್ತಿಕ ಸಮಸ್ಯೆಗಳ ಜತೆಗೆ ಗ್ರಾಮ ಹಾಗೂ ಊರುಗಳ ಸಾಮೂಹಿಕ ಸಮಸ್ಯೆಗಳನ್ನೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಜನಪರ ಯೋಜನೆಗಳ ಮಾಹಿತಿ ಸಾಮಾನ್ಯ ಜನರಿಗೆ ತಲುಪದಿರುವುದು ಹಾಗೂ ಯೋಜನೆಗಳ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವಲ್ಲಿ ಜನರು ತೊಂದರೆ ಅನುಭವಿಸುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ವಿಶೇಷವಾಗಿ ಗ್ರಾಮೀಣ ಪ್ರದೇಶದ ಬಡವರು ಹಾಗೂ ವೃದ್ಧರು ಸಿದ್ದಾಪುರಕ್ಕೆ ಬಂದು ಯಾವ ಕಚೇರಿಗೆ ತೆರಳಬೇಕು, ಯಾವ ದಾಖಲೆಗಳನ್ನು ಸಲ್ಲಿಸಬೇಕು ಮತ್ತು ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಒಂದೇ ಸ್ಥಳದಲ್ಲಿ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೇಂದ್ರ ಆರಂಭಿಸಲಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ‘SIR ಪರಿಶೋಧನೆ–ಪ್ರತಿರೋಧ ಪ್ರವಾಸ’ಕ್ಕೆ ಚಾಲನೆ: ಮತದಾನದ ಹಕ್ಕು ರಕ್ಷಣೆಗೆ ಜನಪರ ಹೋರಾಟ

ಕೆಲವರು ಕೆಲಸ ತ್ವರಿತವಾಗಿ ಆಗಬೇಕೆಂಬ ಉದ್ದೇಶದಿಂದ ಮಧ್ಯವರ್ತಿಗಳ ಮೊರೆ ಹೋಗಿ ಹೆಚ್ಚಿನ ಹಣ ನೀಡಿ ಮೋಸ ಹೋಗುತ್ತಿರುವ ದೂರುಗಳೂ ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರವು ಪಕ್ಷಾತೀತವಾಗಿ ಕಾರ್ಯನಿರ್ವಹಿಸಲಿದ್ದು, ಜನರಿಗೆ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಿದೆ ಎಂದರು.

ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿ ಮುದ್ರಣ, ಉದ್ಯಮ ನೋಂದಣಿ, ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರಿಂಟ್, ಇ-ಶ್ರಮ ಕಾರ್ಡ್, ವಿದ್ಯಾರ್ಥಿ ಬಸ್ ಪಾಸ್, ಸಂಧ್ಯಾ ಸುರಕ್ಷಾ ಯೋಜನೆ, ಪಿಎಂ ಕಿಸಾನ್, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಹಾಸ್ಟೆಲ್ ಹಾಗೂ ಕಾಲೇಜು ಅರ್ಜಿಗಳಿಗೆ ನೆರವು ಸೇರಿದಂತೆ ಹಲವು ಸೇವೆಗಳನ್ನು ಉಚಿತವಾಗಿ ಒದಗಿಸಲಾಗುವುದು. ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆದಾಯ ಮತ್ತು ಆಸ್ತಿ ಪ್ರಮಾಣ ಪತ್ರ, ಅಂಗವಿಕಲರ ವೇತನ, ಪಾನ್ ಕಾರ್ಡ್ ತಿದ್ದುಪಡಿ ಸೇರಿದಂತೆ ಸರ್ಕಾರದ ನಿಗದಿತ ಶುಲ್ಕಕ್ಕೆ ಒಳಪಡುವ ಸೇವೆಗಳಿಗೂ ಮಾರ್ಗದರ್ಶನ ನೀಡಲಾಗುವುದು.

ಸಾರ್ವಜನಿಕರಿಂದ ಪ್ರತ್ಯೇಕ ಸೇವಾ ಶುಲ್ಕ ಪಡೆಯುವುದಿಲ್ಲ ಎಂದು ತಿಳಿಸಿದರು.“ದೊಡ್ಡ ಸಮಸ್ಯೆಗಳು ಎದುರಾದಾಗ ಜನರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಾರೆ. ಆದರೆ ಸಾಮಾನ್ಯ ವ್ಯಕ್ತಿಯ ದಿನನಿತ್ಯದ ಸಣ್ಣ ಸಮಸ್ಯೆ ಎದುರಾದಾಗ ಯಾರನ್ನು ಸಂಪರ್ಕಿಸಬೇಕು, ಎಲ್ಲಿಗೆ ಹೋಗಬೇಕು ಎಂಬುದೇ ತಿಳಿಯದೆ ಪರದಾಡುವ ಪರಿಸ್ಥಿತಿ ಇದೆ. ಅಂತಹ ಸಂದರ್ಭದಲ್ಲಿ ಜನರ ಕೈಹಿಡಿಯುವ ವ್ಯವಸ್ಥೆ ಅಗತ್ಯವಾಗಿದೆ” ಎಂದು ಅನಂತಮೂರ್ತಿ ಹೆಗಡೆ ಹೇಳಿದರು.

ಕೇಂದ್ರವನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಜನರ ಅಗತ್ಯಕ್ಕೆ ಅನುಗುಣವಾಗಿ ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಕೇಂದ್ರವನ್ನು ಮುಂದಿನ ದಿನಗಳಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದರು.

ರಜಾ ದಿನಗಳನ್ನು ಹೊರತುಪಡಿಸಿ ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಕೇಂದ್ರ ಕಾರ್ಯನಿರ್ವಹಿಸಲಿದೆ. “ಸಮಸ್ಯೆ ನಿಮ್ಮದು; ಪರಿಹಾರ ನೀಡುವ ಪ್ರಯತ್ನ ನಮ್ಮದು” ಎಂಬ ಧ್ಯೇಯದೊಂದಿಗೆ ಕೇಂದ್ರ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ತಿಮ್ಮಪ್ಪ ಎಂ.ಕೆ., ಪ್ರದೀಪ ಹೆಗಡೆ ಕರ್ಜಗಿ, ಅಣ್ಣಪ್ಪ ಹಸಲರ್ ಶಾನ್ ಬಾಳೆಗದ್ದೆ ಸೇರಿದಂತೆ ಟ್ರಸ್ಟ್‌ನ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಿಡಿಲು ಬಡಿದು ಆಡುಗಳ ಸಾವಿಗೆ ಶಾಸಕರಿಂದ ₹40 ಸಾವಿರ ನೆರವು

ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ...

ಉಡುಪಿ | ಧರ್ಮದ ಹೆಸರಿನಲ್ಲಿ ವಿಭಜನೆ ಬೇಡ, ಮಾನವೀಯತೆಗೆ ಆದ್ಯತೆ ನೀಡಿ : ಮುಹಮ್ಮದ್ ಕುಂಞಿ

ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೀರತ್...

ಚಿಕ್ಕಮಗಳೂರು | “ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ”ಗೊಳಿಸಬೇಕು; ನ್ಯಾ. ರವೀಂದ್ರ ಹೆಗಡೆ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ  ಕಾನೂನು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶ...

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....