ಸಿದ್ದಾಪುರ | ದಲಿತ ಯುವಕನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾರಣಾಂತಿಕ ಹಲ್ಲೆ: ಪ್ರಕರಣ ದಾಖಲು

Date:

ಸಿದ್ದಾಪುರ: ನಾನಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅಮಾಯಕ ದಲಿತ ಯುವಕನೊಬ್ಬನನ್ನು ಬಲವಂತವಾಗಿ ಕರೆದೊಯ್ದು, ಭೀಕರವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಅರಣ್ಯ ಇಲಾಖೆಯ ಡಿಆರ್‌ಎಫ್‌ಒ ಕಾರ್ತಿಕ್ ನಾಗರಾಜ್ ನಾರ್ವೇಕರ್, ಬೀಟ್ ಫಾರೆಸ್ಟರ್ ರೋಹಿತ್ ನಾಯಕ್ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂವರು, ರಾತ್ರಿ ಸುಮಾರು 10.30ರ ವೇಳೆಗೆ ಯುವಕನ ಮನೆಗೆ ನುಗ್ಗಿದ್ದಾರೆ. ಸಣ್ಣ ವಿಚಾರಣೆಯ ನೆಪವೊಡ್ಡಿ ಯುವಕನನ್ನು ಕರೆದೊಯ್ದ ಅಧಿಕಾರಿಗಳು, ಅರಣ್ಯ ಪ್ರದೇಶದಲ್ಲಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಕಡವೆಯನ್ನು ನೀನೇ ಕೊಂದಿರುವುದು ಎಂದು ಒಪ್ಪಿಕೊಳ್ಳುವಂತೆ ಒತ್ತಾಯಿಸಿ, ಇಲ್ಲದಿದ್ದರೆ ಕುಟುಂಬವನ್ನೇ ಪ್ರಕರಣದಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಹಲ್ಲೆಯ ತೀವ್ರತೆಗೆ ಯುವಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಹೆದರಿದ ಅಧಿಕಾರಿಗಳು ಸ್ವತಃ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮರುದಿನ ಯುವಕನ ಆರೋಗ್ಯ ಹದಗೆಟ್ಟಿದ್ದರೂ, ರೋಹಿತ್ ನಾಯಕ್ ಆತನಿಂದ ಬಲವಂತವಾಗಿ ಖಾಲಿ ಬಿಳಿ ಕಾಗದದ ಮೇಲೆ ಸಹಿ ಪಡೆದಿದ್ದಾರೆ. ನಂತರ ಆತನನ್ನು ಕಾರವಾರಕ್ಕೆ ಕರೆದೊಯ್ದು, ಮರುದಿನ ರಾತ್ರಿ 1.30ರ ಸುಮಾರಿಗೆ ಮನೆಯ ಬಾಗಿಲ ಬಳಿ ಬಿಟ್ಟು ಬಂದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ

ವಿಷಯ ತಿಳಿದ ತಕ್ಷಣ ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ನೇತೃತ್ವದ ತಂಡ, ತಾಲೂಕಾಧ್ಯಕ್ಷ ಪುನೀತ್ ಮಾರಾಟೆ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ಯಾಮ್ ದೇಶಭಾಗ್ ಅವರು ಸಂತ್ರಸ್ತನ ಮನೆಗೆ ಭೇಟಿ ನೀಡಿ. ಯುವಕನ ಸ್ಥಿತಿ ಕಂಡು ಆಕ್ರೋಶಗೊಂಡ ಅರ್ಜುನ್ ಮಿಂಟಿ ಅವರು ಪ್ರತಿಭಟನೆಗೆ ಕರೆ ನೀಡಿದರು. ಬಳಿಕ ತಮ್ಮ ಸಂಘಟನೆಯ ಕಾರ್ಯಕರ್ತರೊಂದಿಗೆ ಆರ್‌ಎಫ್‌ಒ ಕಚೇರಿಗೆ ಮುತ್ತಿಗೆ ಹಾಕಿ, ಹಲ್ಲೆ ನಡೆಸಿದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು ಹಾಗೂ ಸಂತ್ರಸ್ತನ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಅರಣ್ಯ ಇಲಾಖೆಯೇ ಭರಿಸಬೇಕೆಂದು ಒತ್ತಾಯ ಮಾಡಿದ್ದಾರೆ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ, ಪ್ರಕರಣ ದಾಖಲಿಸದಂತೆ ಸಾಕಷ್ಟು ಒತ್ತಡ ಮತ್ತು ಆಮಿಷಗಳು ಬಂದಿದ್ದರೂ, ಭೀಮ ಘರ್ಜನೆ ಸಂಘಟನೆಯು ದಲಿತರ ಮೇಲಿನ ದೌರ್ಜನ್ಯವನ್ನು ಎಂದಿಗೂ ಸಹಿಸುವುದಿಲ್ಲ. ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಬಿಡುವ ಮಾತೇ ಇಲ್ಲ, ಸುಳ್ಳು ಪ್ರಕರಣ ದಾಖಲಿಸಿ ಅಧಿಕಾರ ದುರುಪಯೋಗಪಡಿಸಿಕೊಂಡರೆ ಏನಾಗುತ್ತದೆ ಎಂಬುದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಎಚ್ಚರಿಸಿದರು.

ಈ ಹೋರಾಟಕ್ಕೆ ಅಂಬೇಡ್ಕರ್ ಶಕ್ತಿ ಸಂಘದ ಅಧ್ಯಕ್ಷ ನಂದನ್ ಬೋರ್ಕರ್ ಅವರು ಬೆಂಬಲ ನೀಡಿದ್ದು, ಅವರಿಗೆ ಸಂಘಟನೆಯು ಧನ್ಯವಾದ ಸಲ್ಲಿಸಿದೆ. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅಮಿತ್ ಜೋಗ್ಲೇಕರ್, ತಾಲೂಕು ಉಪಾಧ್ಯಕ್ಷ ರಾಜೇಶ್ ಕಲಘಟಗಿ, ಗುರುರಾಜ್ ಮಿಂಟಿ, ಸಂಜಯ್ ಮಡಗಾವಂಕರ್, ಅಕ್ಷಯ್ ಮಡಗಾವಂಕರ್, ಗೌತಮ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...