ಸಿದ್ದಾಪುರ | ಪರೀಕ್ಷೆಯಲ್ಲಿ ಫೇಲಾಗುವ ಆತಂಕ; ಬಿ.ಕಾಂ. ವಿದ್ಯಾರ್ಥಿ ಆತ್ಮಹತ್ಯೆ

Date:

ಸಿದ್ದಾಪುರ: ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಸಮೀಪದ ಕಲಕಟ್ಟೆ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತ ವಿದ್ಯಾರ್ಥಿಯನ್ನು ಅಭಿರಾಮ್ ವೆಂಕಟರಮಣ ಹೆಗಡೆ (20) ಎಂದು ಗುರುತಿಸಲಾಗಿದೆ. ಅವರು ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಬಿ.ಕಾಂ. ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು. ಲಭ್ಯ ಮಾಹಿತಿಯ ಪ್ರಕಾರ, ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಮೂರು ವಿಷಯಗಳಲ್ಲಿ ಅನುತ್ತೀರ್ಣವಾಗುವ ಸಾಧ್ಯತೆ ಇದೆ ಎಂಬ ಆತಂಕದಿಂದ ಅಭಿರಾಮ್ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕತ್ತಿ ತೋರಿಸಿ ಮಾಂಗಲ್ಯ ಸರ ದರೋಡೆ; 24 ಗಂಟೆಯೊಳಗೆ ಆರೋಪಿ ಬಂಧನ

ಇದೇ ಕಾರಣದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಕುಟುಂಬದವರು ಸ್ಥಳೀಯರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸಿದ್ದಾಪುರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿದ್ದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು.

ಮೃತನಿಂದ ಬರೆಯಲಾಗಿದೆ ಎನ್ನಲಾದ ಡೆತ್‌ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿರುವ ಮಾಹಿತಿಯ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ವಿದ್ಯಾರ್ಥಿಯ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಬಂಧು-ಬಳಗ ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಪರೀಕ್ಷೆಯ ಫಲಿತಾಂಶದ ಆತಂಕದಿಂದ ಯುವಕ ಜೀವ ಕಳೆದುಕೊಂಡಿರುವ ಘಟನೆ ಶಿಕ್ಷಣ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.

ಓದು ಒಂದು ಪರೀಕ್ಷೆ ಮಾತ್ರ, ಜೀವನವಲ್ಲ…ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದು ಜೀವನದ ಅಂತ್ಯವಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕು ಅಮೂಲ್ಯ. ಫಲಿತಾಂಶ ಏನೇ ಬಂದರೂ ಅದನ್ನು ಧೈರ್ಯದಿಂದ ಎದುರಿಸಿ, ನಿಮ್ಮ ಪೋಷಕರು, ಶಿಕ್ಷಕರು ಅಥವಾ ಆತ್ಮೀಯರೊಂದಿಗೆ ಮುಕ್ತವಾಗಿ ಮಾತನಾಡಿ. ಪೋಷಕರೂ ಸಹ ಮಕ್ಕಳ ಮೇಲೆ ಅತಿಯಾದ ಒತ್ತಡ ಹೇರದೆ, ಅವರ ಭಾವನೆಗಳನ್ನು ಅರ್ಥಮಾಡಿಕೊಂಡು ಬೆಂಬಲವಾಗಿ ನಿಲ್ಲಬೇಕು. ಒಂದು ಪರೀಕ್ಷೆ ಸೋಲಬಹುದು, ಆದರೆ ಜೀವನದಲ್ಲಿ ಮತ್ತೆ ಮತ್ತೆ ಗೆಲ್ಲಲು ಅವಕಾಶಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...