ಸಿದ್ದಾಪುರ | ಕರ್ನಾಟಕ ಬ್ಯಾಂಕ್‌ನಲ್ಲಿ ₹3.51 ಕೋಟಿ ರೂ.ಗಳ ವಂಚನೆ ಬೆಳಕಿಗೆ; ಪ್ರಕರಣ ದಾಖಲು.

Date:

ಸಿದ್ದಾಪುರ: ಪಟ್ಟಣದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಮೂರು ಕೋಟಿ ಕ್ಕಿಂತ ಅಧಿಕ ಮೊತ್ತದ ಹಣವನ್ನು ಗ್ರಾಹಕರ ಖಾತೆಗಳಿಂದ ಅಕ್ರಮವಾಗಿ ವರ್ಗಾಯಿಸಿದ ಮಹಾ ವಂಚನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕಿನ ಗ್ರಾಹಕ ಸೇವಾ ಸಹಾಯಕನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿನ ಶಾಖಾ ಪ್ರಬಂಧಕರಾದ ಶಂಭುಲಿಂಗ ಪರಮೇಶ್ವರ ಭಟ್ ಅವರು ಆಂತರಿಕ ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಅವರು ಮಂಜುನಾಥ ಶ್ರೀಧರ ಭಟ್ (34) ಎಂಬ ಸಿಬ್ಬಂದಿ ವಿರುದ್ಧ ಅಧಿಕೃತ ದೂರು ದಾಖಲಿಸಿದ್ದಾರೆ. ಈ ಘಟನೆ ಬ್ಯಾಂಕ್ ವಲಯದಲ್ಲಿ ಆಘಾತ ಮೂಡಿಸಿದೆ.

- Advertisement -

ಆಪಾದಿತ ಮಂಜುನಾಥ ಭಟ್ 2013ರಲ್ಲಿ ಬ್ಯಾಂಕ್ ಸೇವೆಗೆ ಸೇರಿದ್ದು, 2023ರಿಂದ ಸಿದ್ದಾಪುರದ ನೂತನ ಶಾಖೆಯಲ್ಲಿ ಗ್ರಾಹಕ ಸೇವಾ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಅವನು 2024ರ ಸೆಪ್ಟೆಂಬರ್ 11ರಿಂದ 2025ರ ಸೆಪ್ಟೆಂಬರ್ 23ರವರೆಗೆ ವಿವಿಧ ಗ್ರಾಹಕರ ಖಾತೆಗಳಿಂದ ಹಣವನ್ನು ಹಂತ ಹಂತವಾಗಿ 3,51,84,349, ರೂಪಾಯಿ ಹಣವನ್ನು ಅಕ್ರಮವಾಗಿ ತನ್ನ ವೈಯಕ್ತಿಕ ಖಾತೆಗೆ ವರ್ಗಾಯಿಸಿಕೊಂಡಿರುವುದು ದೃಢಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ:...

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ 10,280ಕ್ಕೆ ಏರಿಕೆಯಾಗಿರುವುದು ಕೇವಲ ಒಂದು ಸರ್ಕಾರಿ ಯೋಜನೆಯ ಫಲಾಫಲದ ಅಂಕಿ-ಅಂಶವಲ್ಲ. ಜಿಲ್ಲೆಯಲ್ಲಿನ ಉದ್ಯೋಗಾವಕಾಶಗಳು, ಯುವಜನರ ಸದೃಢ ಭವಿಷ್ಯ, ಸ್ಥಳೀಯ ಆರ್ಥಿಕ...

ಅಡ್ವಾಣಿ – ಅಧಿಕಾರದ ಆಟದಲ್ಲಿ ಸಿದ್ಧಾಂತವೂ ಒಂದು ಮೆಟ್ಟಿಲಷ್ಟೇ!

1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಎರಡು ಸ್ಥಾನಗಳು. ಅಲ್ಲಿಂದ ಪಕ್ಷವನ್ನು ರಾಷ್ಟ್ರೀಯ ಅಧಿಕಾರದ ಕೇಂದ್ರಕ್ಕೆ ತರುವಲ್ಲಿ ಅಡ್ವಾಣಿ ಅವರ ಪಾತ್ರ ದೊಡ್ಡದು. ರಥಯಾತ್ರೆ, ರಾಮಮಂದಿರ ಚಳವಳಿ ಮತ್ತು ಹಿಂದುತ್ವದ ರಾಜಕಾರಣದ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಪ್ರಕರಣದ ಹಿನ್ನೆಲೆ: ಸೆಪ್ಟೆಂಬರ್ 29, 2025 ರಂದು ಗ್ರಾಹಕರೊಬ್ಬರು ತಮ್ಮ ಟರ್ಮ್ ಡೆಪಾಸಿಟ್ ನವೀಕರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ ಆಗ ಬ್ಯಾಂಕಿನ ಬೇರೆ ಸಿಬ್ಬಂದಿ ಅವರ ಖಾತೆಯನ್ನು ಪರಿಶೀಲಿಸಿದಾಗ ಠೇವಣಿ ಮೊತ್ತ ಖಾಲಿಯಾಗಿರುವುದು ಸಿಬ್ಬಂದಿ ಗಮನಕ್ಕೆ ಬಂದಿದೆ. ಆ ಠೇವಣಿಯನ್ನು 2024ರ ಸೆಪ್ಟೆಂಬರ್ 24ರಂದು ಮುಚ್ಚಿ, ಗ್ರಾಹಕರ ಜಮಾ ಖಾತೆಗೆ 4,40,561/- ಜಮಾ ಮಾಡಲಾಗಿದೆ. ಅಲ್ಲಿಂದ 4,40,500/- ಅನ್ನು ಆರೋಪಿತನ ವೈಯಕ್ತಿಕ ಖಾತೆಗೆ RTGS ಮೂಲಕ ವರ್ಗಾಯಿಸಿ ಕೊಂಡಿದ್ದು ಪತ್ತೆಯಾಗಿದೆ. ಆರೋಪಿತನು ತಾನು ಬ್ಯಾಂಕ್ ಸಿಬ್ಬಂದಿ ಎಂಬ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಗ್ರಾಹಕರ ಠೇವಣಿಗಳನ್ನು ಮುಂಚಿತವಾಗಿ ಮುಚ್ಚಿ, ಎಸ್‌ಎಂಎಸ್ (SMS) ಗ್ರಾಹಕರ ಮೋಬೈಲ್ ಗೆ ಹೋಗದಂತೆ ಆ ಸೇವೆಗಳನ್ನು ನಿಷ್ಕ್ರಿಯಗೊಳಿಸಿ, ನಕಲಿ ಠೇವಣಿ ರಸೀದಿಗಳನ್ನು ಮುದ್ರಿಸಿ ಗ್ರಾಹಕರಿಗೆ ನೀಡುತ್ತಿದ್ದನು. ಮುಖ್ಯವಾಗಿ ಹಿರಿಯ ನಾಗರಿಕರು ಮತ್ತು ಪರಿಚಿತ ಗ್ರಾಹಕರೇ ಅವನ ವಂಚನೆಗೆ ಗುರಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಪರವಾನಗಿ ಇಲ್ಲದೆ ಮರಳು ಸಂಗ್ರಹ; ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಬ್ಯಾಂಕಿನ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು: ಆರೋಪಿತ ಸಿಬ್ಬಂದಿಯನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ. ಇತರರ ಪಾತ್ರವಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳಲಾಗುವುದು. ಗ್ರಾಹಕರ ಹಣಕ್ಕೆ ಯಾವುದೇ ಧಕ್ಕೆ ಉಂಟಾಗದಂತೆ ಬ್ಯಾಂಕ್ ಕಾನೂನು ಪ್ರಕ್ರಿಯೆ ಕೈಗೊಂಡಿದೆ. ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ. ಹಣ ಮರುಪಾವತಿ ಮಾಡಲು ಆಡಳಿತ ಮಂಡಳಿಯ ಅನುಮೋದನೆ ಅಗತ್ಯವಿದ್ದು, 1 ರಿಂದ 15 ದಿನಗಳೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.ವಂಚನೆಗೆ ಬಳಕೆಯಾದ ಲಾಗಿನ್‌ಗಳನ್ನು ಉಪಯೋಗಿಸಿದ ಇಬ್ಬರು ಸಿಬ್ಬಂದಿಯನ್ನು ಈಗಾಗಲೇ ಬೇರೆ ಶಾಖೆಗೆ ವರ್ಗಾಯಿಸಲಾಗಿದೆ.”ಇತರರ ಲಾಗಿನ್ ಮಾಹಿತಿ ಹಂಚಿಕೊಂಡಿರುವುದು ಗಂಭೀರ ಕರ್ತವ್ಯ ಲೋಪ,” ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

"ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ...

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...