ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

Date:

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರಕೃತಿ ನಡಿಗೆ’ ಹಾಗೂ ಕ್ಷೇತ್ರ ಅಧ್ಯಯನದ ಮೂಲಕ ಇತಿಹಾಸದ ಕುತೂಹಲಕಾರಿ ಮಾಹಿತಿಗಳನ್ನ ಕಣ್ಣಾರೆ ಕಂಡು ಆನಂದಿಸಿದರು.

- Advertisement -

ಸೋಮನದಿ ತೀರದ ಒಕ್ಕೋಟಿಯ ಪರಿಸರದಲ್ಲಿ ಸಂಚರಿಸಿದ ವಿದ್ಯಾರ್ಥಿ ತಂಡವು, ಅಲ್ಲಿನ ಪ್ರಾಚೀನ ಜೈನರ ವಸತಿ ನೆಲೆಗಳನ್ನು ವೀಕ್ಷಿಸಿತು. ಅಂದಿನ ಕಾಲದ ಜೈನರು ವಾಸಿಸುತ್ತಿದ್ದ ಮನೆಗಳ ಪಳೆಯುಳಿಕೆಗಳು, ಅವರು ಪೂಜಿಸುತ್ತಿದ್ದ ನಾಗರ ಮೂರ್ತಿ, ಪದ್ಮಾವತಿ ವಿಗ್ರಹ ಹಾಗೂ ಶಾಸನಗಳನ್ನೊಳಗೊಂಡ ಶಿಲಾ ಫಲಕಗಳನ್ನು ಕಂಡು ಮಕ್ಕಳು ಅಚ್ಚರಿ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಅಲ್ಲದೆ, ಪುರಾತನ ಕಾಲದ ಭತ್ತ ಕುಟ್ಟುವ ಒರಳುಗಳನ್ನು ವೀಕ್ಷಿಸುವ ಮೂಲಕ ಅಂದಿನ ಜನರ ಜೀವನಶೈಲಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಒಕ್ಕೋಟಿಯಿಂದ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿ ಜೈನರು ಬಳಸುತ್ತಿದ್ದ ಮಣ್ಣಿನ ಪಾತ್ರೆಗಳು ಮತ್ತು ಮಡಿಕೆಗಳು ಪತ್ತೆಯಾಗಿವೆ.

ವಿಶೇಷವೆಂದರೆ, ಕೆಲವು ಮಡಿಕೆಗಳ ಮೇಲೆ ಮನುಷ್ಯನ ಮುಖದ ಚಿತ್ರಣಗಳಿದ್ದು, ಇವು ಇಂದಿಗೂ ಸುಸ್ಥಿತಿಯಲ್ಲಿರುವುದು ವಿಶೇಷ. ಇನ್ನು ಅನೇಕ ಪಳೆಯುಳಿಕೆಗಳು ಮಣ್ಣಿನ ಅಡಿಯಲ್ಲಿ ಹೂತುಹೋಗಿದ್ದು, ಇವುಗಳ ಐತಿಹಾಸಿಕ ಮಹತ್ವದ ಕುರಿತು ಮಾರ್ಗದರ್ಶಕರಾದ ಜನಾರ್ಧನ ತಿಮ್ಮ ಗೌಡ ಅವರು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ವಿವರಿಸಿದರು.

ಅಧ್ಯಯನದ ಜೊತೆಗೆ ಪ್ರಕೃತಿ ನಡಿಗೆಯನ್ನು ಕೈಗೊಂಡ ಮಕ್ಕಳು, ಸೋಮನದಿಯ ಮನಮೋಹಕ ದೃಶ್ಯವನ್ನು ಸವಿದರು. ಕಾಡಿನಲ್ಲಿ ಕಂಡುಬರುವ ವಿವಿಧ ಜಾತಿಯ ಮರಗಳು, ಬಳ್ಳಿಗಳು, ವನ್ಯಮೃಗಗಳ ಹಿಕ್ಕೆಗಳು ಹಾಗೂ ಸಾಂಬಾರ ಪದಾರ್ಥಗಳಾದ ದಾಲ್ಚಿನಿ ಮತ್ತು ರಾಮಪತ್ರೆಗಳ ಬಗ್ಗೆ ಪ್ರಾಯೋಗಿಕ ಜ್ಞಾನ ಪಡೆದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ನದಿಯ ಸಮೀಪವಿರುವ ಸಣ್ಣ ಜಲಪಾತ ಹಾಗೂ ಹಿಂದೆ ತೆಪ್ಪ ನಡೆಸುತ್ತಿದ್ದ ಸ್ಥಳಗಳ ಬಗ್ಗೆಯೂ ಮಕ್ಕಳು ಕುತೂಹಲದಿಂದ ಮಾಹಿತಿ ಸಂಗ್ರಹಿಸಿದರು. ಈ ಅಪರೂಪದ ಶೈಕ್ಷಣಿಕ ಪ್ರವಾಸದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಇತಿಹಾಸದ ಕುರುಹುಗಳನ್ನು ಸಂರಕ್ಷಿಸುವ ಮತ್ತು ಪರಿಸರದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾದ ಜನಾರ್ಧನ ತಿಮ್ಮ ಗೌಡ ಅವರು ಸಾಥ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...