ಸಿದ್ದಾಪುರ | ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಹಿಂದಿ ಶಿಕ್ಷಕ ಅಬು ತಲಹ ಬಂಧನ

Date:

ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಶಾಲೆಯ ಹಿಂದಿ ಶಿಕ್ಷಕ ಅಬು ತಲಹ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಪೊಲೀಸ್ ಮೂಲಗಳ ಪ್ರಕಾರ, ಮೃತ ವಿದ್ಯಾರ್ಥಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಶಿಕ್ಷಕರನ್ನು ಮೊದಲು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ತನಿಖೆಯಲ್ಲಿ ಲಭ್ಯವಾದ ಮಾಹಿತಿ ಮತ್ತು ಪ್ರಾಥಮಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಬಂಧನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಶಿಕ್ಷಕರು ವಿದ್ಯಾರ್ಥಿಯ ಮೇಲೆ ಮಾನಸಿಕ ಒತ್ತಡ ಉಂಟುಮಾಡುವ ರೀತಿಯಲ್ಲಿ ವರ್ತಿಸಿದ್ದಲ್ಲದೆ, ಬೆದರಿಕೆ ಮತ್ತು ಹಲ್ಲೆ ನಡೆಸಿದ್ದಾರೆಯೆಂಬ ಆರೋಪಗಳು ಕೇಳಿಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕತ್ತಿ ತೋರಿಸಿ ಮಾಂಗಲ್ಯ ಸರ ದರೋಡೆ; 24 ಗಂಟೆಯೊಳಗೆ ಆರೋಪಿ ಬಂಧನ

ಈ ಘಟನೆಗಳಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಈ ಆರೋಪಗಳ ಸತ್ಯಾಸತ್ಯತೆ ತನಿಖೆ ನಂತರ ತಿಳಿದು ಬರಲಿದೆ. ಇದೇ ಶಿಕ್ಷಕ ಈ ಹಿಂದೆ ಹಾರ್ಸಿಕಟ್ಟದ ಮುರಾರ್ಜಿ ವಸತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೂ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದರೆಂಬ ಆರೋಪಗಳು ಸಹ ಕೇಳಿಬಂದಿದೆ.


ಘಟನೆಯ ವಿವರ: ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ-ಹುತಗಾರ ಗ್ರಾಮದ ನಿವಾಸಿಯಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ (15) ಎನ್ನುವ ವಿದ್ಯಾರ್ಥಿ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿರುವ ಬಟ್ಟೆ ಒಣಗಿಸುವ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಶಾಲಾ ಆಡಳಿತ ‌ಮಂಡಳಿ ಅವರು ತಿಳಿಸಿದರು.

ಆದರೆ ವಿದ್ಯಾರ್ಥಿಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಯ ಎದುರು ಪ್ರತಿಭಟನೆ ನಡೆಸಿದ್ದರು. ನಂತರ ಸಿದ್ದಾಪುರ ಪಟ್ಟಣದಲ್ಲಿಯೂ ವಿವಿಧ ಸಂಘಟನೆಗಳು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದವು. ಪ್ರಕರಣದ ಗಂಭೀರತೆಯನ್ನು ಗಮನಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ, ತನಿಖೆಯನ್ನು ಕಾರವಾರ ಡಿವೈಎಸ್ಪಿ ನೇತೃತ್ವದಲ್ಲಿ ನಡೆಸಲು ಸೂಚಿಸಿತ್ತು.

ಪ್ರಾಥಮಿಕ ತನಿಖೆಯಲ್ಲಿ ಇದೀಗ ಶಿಕ್ಷಕ ಅಬು ತಲಹ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಯ ಸಾವಿಗೆ ನಿಖರವಾದ ಕಾರಣ, ಶಿಕ್ಷಕರ ಪಾತ್ರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...