ಸಿದ್ದಾಪುರ | ದಂಪತಿಗಳ ಕಲಹ ಬಿಡಿಸಲು ಹೋದ ವ್ಯಕ್ತಿಯ ಹತ್ಯೆ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಪೋಲಿಸರ ವಶಕ್ಕೆ

Date:

ಪತಿ-ಪತ್ನಿಯ ನಡುವಿನ ಜಗಳವನ್ನು ಶಮನಗೊಳಿಸಲು ಮುಂದಾದ ಚಿಕ್ಕಪ್ಪನನ್ನೇ ಯುವಕರ ಗುಂಪೊಂದು ಚಾಕು ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಸಂಭವಿಸಿದೆ.

- Advertisement -

ಘಟನೆಯ ಹಿನ್ನೆಲೆ: ಅವರಗುಪ್ಪ ಗ್ರಾಮದ ವಸಂತ್ ನಾಯ್ಕ (41) ಮೃತಪಟ್ಟ ದುರ್ದೈವಿ ಆಗಿದ್ದಾರೆ. ಆರೋಪಿ ಮಹಿಳೆ ಸುಚಿತ್ರಾ ತನ್ನ ಪತಿಯಿಂದ ದೂರವಾಗಿ ಶಿವಮೊಗ್ಗದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಎಂಬುವರ ಕಚೇರಿಯಲ್ಲಿ ಕೆಲಸ ಮಾಡುತ್ತಾ, ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅಲ್ಲಿಯೇ ವಾಸವಾಗಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಆದರೆ, ತಾಯಿ ಮತ್ತು ಜ್ಯೋತಿಷಿಯ ನಡುವಿನ ನಡವಳಿಕೆಯ ಬಗ್ಗೆ ಮಗಳು ಅಸಮಾಧಾನ ಹೊಂದಿದ್ದಳು ಎನ್ನಲಾಗಿದೆ. ಈ ವಿಷಯವಾಗಿ ತಾಯಿ ಮತ್ತು ಜ್ಯೋತಿಷಿಯಿಂದ ಕಿರುಕುಳ ಅನುಭವಿಸಿದ ಮಗಳು, ಯಾರಿಗೂ ತಿಳಿಸದೆ ಸಿದ್ದಾಪುರದಲ್ಲಿದ್ದ ತಂದೆ ಮಹೇಶ್ ಅವರ ಬಳಿಗೆ ಬಂದು, ಚಿಕ್ಕಪ್ಪ ವಸಂತ್ ನಾಯ್ಕ ಅವರ ಮನೆಯಲ್ಲಿ ಆಶ್ರಯ ಪಡೆದಿದ್ದಳು.

ಮಗಳನ್ನು ಹುಡುಕಿಕೊಂಡು ಸುಚಿತ್ರಾ, ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಕೆಲವು ಯುವಕರೊಂದಿಗೆ ಅವರಗುಪ್ಪಕ್ಕೆ ಬಂದಿದ್ದಾಳೆ. ಈ ವೇಳೆ ಪತಿ ಮಹೇಶ್ ಮತ್ತು ಸುಚಿತ್ರಾ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳದ ಸಂದರ್ಭದಲ್ಲಿ ಜ್ಯೋತಿಷಿಯ ಕಾರು ಜಖಂಗೊಂಡಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.

ಗಲಾಟೆ ಬಿಡಿಸಲು ವಸಂತ್ ನಾಯ್ಕ ಅವರು ಮಧ್ಯಪ್ರವೇಶಿಸಿದಾಗ, ಸುಚಿತ್ರಾ ಜೊತೆ ಬಂದಿದ್ದ ಯುವಕರ ಗುಂಪು ಅವರ ಮೇಲೆ ಚಾಕು ಇರಿದಿದೆ. ಇದೇ ವೇಳೆ ಪತಿ ಮಹೇಶ್ ಹಾಗೂ ನೆರೆಮನೆಯ ಕುಮಾರ್ ಎಂಬುವವರಿಗೂ ಚಾಕು ಇರಿಯಲಾಗಿದ್ದು, ವಸಂತ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

1000495263
ಎಡಗಡಯಿಂದ ಮೃತ ವಸಂತ ನಾಯ್ಕ, ಮತ್ತು ಹಲ್ಲೆಗೊಳಗಾದವರು

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಾತ್ರಾ ಮಹೋತ್ಸವಗಳಲ್ಲೂ ಜೂಜಿನ ಕರಿನೆರಳು; ಬೀಳಬೇಕಿದೆ ಬ್ರೇಕ್

ಗಂಭೀರ ಗಾಯಗೊಂಡಿರುವ ಮಹೇಶ್ ಮತ್ತು ಕುಮಾರ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮೃತರ ಅತ್ತಿಗೆ ಸಂಧ್ಯಾ ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳಾದ ಸುಚಿತ್ರಾ, ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಲೋಕನಾಥ್ ಸೇರಿದಂತೆ ಒಟ್ಟು ಏಳು ಜನರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ನಂತರ ಹೆಚ್ಚಿನ ಸತ್ಯಾಸತ್ಯತೆ ಹೊರಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...