ಸಿದ್ದಾಪುರ | ವಿದ್ಯುತ್ ಆಘಾತಕ್ಕೆ ಹವ್ಯಕ ಕ್ರಿಕೆಟ್‌ನ ಜನಪ್ರಿಯ ಆಟಗಾರ ಪ್ರವೀಣ್ ಹೆಗಡೆ (ಬೂಸಾ) ನಿಧನ

Date:

ಸಿದ್ದಾಪುರ: ಹವ್ಯಕ ಕ್ರಿಕೆಟ್ ವಲಯದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಹಾಗೂ ಉದ್ದನೆಯ ಸಿಕ್ಸರ್‌ಗಳ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪ್ರವೀಣ್ ಹೆಗಡೆ (ಬೂಸಾ) ಅವರು ವಿದ್ಯುತ್ ಆಘಾತದಿಂದ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಅವರ ಅಕಾಲಿಕ ನಿಧನದ ಸುದ್ದಿ ಕ್ರೀಡಾಭಿಮಾನಿಗಳು, ಸ್ನೇಹಿತರು ಹಾಗೂ ಜಿಲ್ಲೆಯ ಜನರಲ್ಲಿ ತೀವ್ರ ದುಃಖ ಉಂಟುಮಾಡಿದೆ.

- Advertisement -

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಿದ್ರಕಾನು ಗ್ರಾಮದವರಾದ ಪ್ರವೀಣ್ ಹೆಗಡೆ ಅವರು ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಹಾರೆಗೊಪ್ಪದಲ್ಲಿ ವಾಸವಾಗಿದ್ದರು. ಭಾನುವಾರ ಸಂಜೆ ಮನೆಯ ಸಮೀಪದ ವಿದ್ಯುತ್ ತಂತಿಗಳಿಗೆ ಅಡ್ಡಿಯಾಗಿದ್ದ ಮರದ ಕೊಂಬೆಗಳನ್ನು ಕಡಿಯುವಾಗ ವಿದ್ಯುತ್ ಪ್ರವಹಿಸಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಕುಟುಂಬಸ್ಥರು ತಕ್ಷಣ ನೆರವಿಗೆ ಧಾವಿಸಿದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

37 ವರ್ಷದ ಪ್ರವೀಣ್ ಹೆಗಡೆ ಅವರು ಕೃಷಿಕ, ಉದ್ಯಮಿ ಹಾಗೂ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದರು. ವಿಶೇಷವಾಗಿ ಹವ್ಯಕ ಸಮುದಾಯದ ಕ್ರಿಕೆಟ್ ಟೂರ್ನಿಗಳಲ್ಲಿ ಆಕ್ರಮಣಕಾರಿ ಆಟದ ಮೂಲಕ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ಹಲವು ಪಂದ್ಯಾವಳಿಗಳಲ್ಲಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದ ಅವರು, ತಮ್ಮ ಆಟದ ಶೈಲಿಯಿಂದ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಗೋವನ್ನು ರಕ್ಷಿಸಲು ಮುಂದಾದ ಮುಸ್ಲಿಂ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಅವರು ಸಂತಾಪ ಸೂಚಿಸಿ, ಪ್ರವೀಣ್ ಹೆಗಡೆ ಅವರ ನಿಧನದ ಸುದ್ದಿ ತಮಗೆ ತೀವ್ರ ದುಃಖ ಉಂಟುಮಾಡಿದೆ ಎಂದು ತಿಳಿಸಿದ್ದಾರೆ. ಕೃಷಿ, ಉದ್ಯಮ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದ ಅವರು ಜಿಲ್ಲೆಯಾದ್ಯಂತ ಪರಿಚಿತರಾಗಿದ್ದು, ಅವರ ಅಕಾಲಿಕ ಅಗಲಿಕೆ ಕುಟುಂಬಸ್ಥರು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ದೊಡ್ಡ ಆಘಾತವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ದುಃಖಿತ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಇದೇ ವೇಳೆ, ಶಿರಸಿ-ಸಿದ್ಧಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರವೀಣ್ ಹೆಗಡೆ ಅವರು ಭವಿಷ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯ ಹೊಂದಿದ್ದ ಪ್ರತಿಭಾವಂತ ಕ್ರೀಡಾಪಟುವಾಗಿದ್ದರು ಅವರ ನಿಧನದಿಂದ ಉತ್ತರ ಕನ್ನಡ ಜಿಲ್ಲೆಯ ಕ್ರೀಡಾ ವಲಯಕ್ಕೆ ಅಪಾರ ನಷ್ಟ ಉಂಟಾಗಿದೆ, ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ಧೈರ್ಯ ಸಿಗಲಿ ಎಂದು ಅವರು ಸಂತಾಪ ತಿಳಿಸಿದ್ದಾರೆ.

ಪ್ರವೀಣ್ ಹೆಗಡೆ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪದ ಸಂದೇಶಗಳು ಹರಿದುಬಂದಿದ್ದು, ವಿವಿಧ ಸಂಘಟನೆಗಳ ಮುಖಂಡರು, ಕ್ರೀಡಾಪಟುಗಳು ಹಾಗೂ ಯುವಕರು ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...