ಸಿದ್ದಾಪುರ | ಪಿಗ್ಮಿ ಕಲೆಕ್ಟರ್ ವೃದ್ಧೆಯ ಕೊಲೆ ಪ್ರಕರಣ; ಕೇವಲ 6 ತಿಂಗಳಲ್ಲೇ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Date:

ಸಿದ್ದಾಪುರ: ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಅವರಿಂದ ಹಣ ಹಾಗೂ ಬಂಗಾರದ ಆಭರಣಗಳನ್ನು ದೋಚಿದ್ದ ಆರೋಪಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹೊಸ ಕಾನೂನು ಬಿ.ಎನ್.ಎಸ್ (BNS) ಅಡಿಯಲ್ಲಿ ಕೇವಲ 5–6 ತಿಂಗಳ ಅಲ್ಪ ಅವಧಿಯಲ್ಲಿ ಸಾಕ್ಷಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಹೊರಬಿದ್ದಿರುವುದು ವಿಶೇಷವಾಗಿದೆ.

- Advertisement -

ಪ್ರಕರಣದ ಹಿನ್ನೆಲೆ: ಸಿದ್ದಾಪುರ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೊರಬ ರಸ್ತೆಯ ನಿವಾಸಿ ಗೀತಾ ಪ್ರಭಾಕರ ಹುಂಡೇಕರ ಅವರು ವಿನಾಯಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಪಿಗ್ಗಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಅವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಪ್ರತಿದಿನ ಪಿಗ್ಗಿ ಹಣ ಸಂಗ್ರಹಿಸುತ್ತಿದ್ದ ವಿಷಯವನ್ನು ತಿಳಿದಿದ್ದ ಆರೋಪಿ ಅಭಿಜಿತ ಗಣಪತಿ ಮಡಿವಾಳ ಹಣದ ಆಸೆಯಿಂದ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದನು. 2024 ಡಿಸೆಂಬರ್ 23ರಂದು ರಾತ್ರಿ ಸುಮಾರು 10.15 ಗಂಟೆಗೆ ಆರೋಪಿಯು ಗೀತಾ ಅವರ ಮನೆಯ ಹಿಂಭಾಗದ ಹಂಚನ್ನು ತೆಗೆದು ಒಳನುಗ್ಗಿದ್ದನು.

ಮನೆಯೊಳಗೆ ಅತಿಕ್ರಮಣವಾಗಿ ಪ್ರವೇಶ ಮಾಡಿದ ಆತ, ಗೀತಾ ಅವರ ಕುತ್ತಿಗೆಯನ್ನು ಬಲವಾಗಿ ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದನು. ಬಳಿಕ ಮೃತಳ ಕಿವಿಯಲ್ಲಿದ್ದ ಬಂಗಾರದ ಓಲೆಗಳು, ರೋಲ್ಡ್ ಗೋಲ್ಡ್ ಬಳೆಗಳು ಹಾಗೂ ಪಿಗ್ಗಿಯಿಂದ ಸಂಗ್ರಹಿಸಿದ್ದ ₹21,680 ಹಣವನ್ನು ದೋಚಿ ಪರಾರಿಯಾಗಿದ್ದನು.

ನ್ಯಾಯಾಲಯದ ತೀರ್ಪು: ಸಿದ್ದಾಪುರ ಪೊಲೀಸ್ ನಿರೀಕ್ಷಕರಾದ ಜೆ.ಬಿ. ಸೀತಾರಾಮ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಾರ್ವಜನಿಕ ಅಭಿಯೋಜಕರಾದ ರಾಜೇಶ್ ಎಂ. ಮಳಗಿಕರ್ ಅವರು ವಾದ ಮಂಡಿಸಿ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕುಮಟಾ | ಗ್ರಾಮಸ್ಥರ ಹೋರಾಟಕ್ಕೆ ಜಯ; ಮಿರ್ಜಾನ ಕೋಟೆ ರಸ್ತೆಗೆ ಗೇಟ್ ಅಳವಡಿಕೆ ನಿರ್ಧಾರ ಕೈಬಿಟ್ಟ ಪಂಚಾಯತ್.

ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ ಕಿಣಿ ಅವರು ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ ಆರೋಪಿತನ ಮೇಲಿನ ದೋಷ ಸಾಬೀತಾಗಿದೆ ಎಂದು ತೀರ್ಮಾನಿಸಿದರು. ಆರೋಪಿಯಾದ ಅಭಿಜಿತ ಗಣಪತಿ ಮಡಿವಾಳನಿಗೆ ಜೀವಾವಧಿ ಶಿಕ್ಷೆ ಹಾಗೂ ₹32,000 ದಂಡ ವಿಧಿಸಲಾಗಿದೆ.

ಅಲ್ಲದೆ, ಮೃತರ ಅವಲಂಬಿತ ಮಕ್ಕಳಿಗೆ ₹50,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಜಿಲ್ಲಾ ಉಚಿತ ಕಾನೂನು ಸೇವಾ ಪ್ರಾಧಿಕಾರದಿಂದಲೂ ಪರಿಹಾರ ಪಡೆಯಬಹುದೆಂದು ನ್ಯಾಯಾಲಯ ತಿಳಿಸಿದೆ.

ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸುವಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಎಎಸ್‌ಐ ಗಣಪತಿ ಭಟ್ ಅವರು ಸಾಕ್ಷಿಗಳನ್ನು ಸಮಯಕ್ಕೆ ಸರಿಯಾಗಿ ಹಾಜರುಪಡಿಸುವ ಮೂಲಕ ಪ್ರಮುಖ ಪಾತ್ರ ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....