ಸಿದ್ದಾಪುರ | ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು

Date:

ಸಿದ್ದಾಪುರ: ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಾರ್ಸಿಕಟ್ಟಾದ ಅಶೋಕ ಪ್ರೌಢಶಾಲೆಯ ಸಹ ಶಿಕ್ಷಕ, ಕ್ರೀಡಾಪಟು ಸುಬ್ರಹ್ಮಣ್ಯ ಪರಮೇಶ್ವರ ಗೌಡ (47) ಎಂದು ಗುರುತಿಸಲಾಗಿದೆ.

- Advertisement -

ಮೂಲತಃ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಗೊನೇಹಳ್ಳಿ-ಕಡಮೆ ಗ್ರಾಮದವರಾಗಿದ್ದ ಅವರು ‘ಸುಬ್ಬಣ್ಣಿ’ ಎಂದೇ ಪರಿಚಿತರಾಗಿದ್ದರು. ಆಗಸ್ಟ್ 13ರಂದು ಸಂಜೆ ಸಿದ್ದಾಪುರದ ಎಪಿಎಂಸಿ ಅಡಿಕೆ ಭವನದಲ್ಲಿ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಸುಬ್ರಹ್ಮಣ್ಯ ಗೌಡ ಅವರು ಏಕಾಏಕಿ ಅಸ್ವಸ್ಥಗೊಂಡು ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಶಿರಸಿ | ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ನಡೆದ ಸ್ಥಳದ ‘ಶುದ್ಧೀಕರಣ’ ಖಂಡನೀಯ: ಪ್ರಸನ್ನ ಶೆಟ್ಟಿ

ತಕ್ಷಣ ಅವರನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಪರಿಶೀಲಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ವೈದ್ಯಕೀಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಬ್ರಹ್ಮಣ್ಯ ಗೌಡ ಅವರು ಕ್ರೀಡಾ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದ ಅವರು ವಿದ್ಯಾರ್ಥಿಗಳು ಹಾಗೂ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರ ನಿಧನಕ್ಕೆ ಸಹೋದ್ಯೋಗಿಗಳು, ವಿದ್ಯಾರ್ಥಿಗಳು, ಸ್ನೇಹಿತರು ಹಾಗೂ ಕ್ರೀಡಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...