ಸಿದ್ದಾಪುರ | ಅಕ್ರಮವಾಗಿ ವನ್ಯಜೀವಿ ಬೇಟೆಯಾಡುತ್ತಿದ್ದ ಮೂವರ ಸೆರೆ; ಬಂದೂಕು, ವಾಹನ ಜಪ್ತಿ

Date:

ಸಿದ್ದಾಪುರ ತಾಲೂಕಿನ ಹುಸೂರು ಗ್ರಾಮದ ಸಮೀಪ ಅಕ್ರಮವಾಗಿ ಬೇಟೆಯಾಡಿದ ವನ್ಯಜೀವಿಗಳ ಕಳೇಬರವನ್ನು ವಾಹನದಲ್ಲಿ ಸಾಗಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಹುಸೂರು ಗ್ರಾಮದ ಅರಣ್ಯ ಸರ್ವೆ ನಂ.210ರ ವ್ಯಾಪ್ತಿಯ ಗದ್ದೆಗೆ ಹೋಗುವ ರಸ್ತೆಯಲ್ಲಿ ಮಹೇಂದ್ರ ಪಿಕಪ್ ವಾಹನ (ಕೆಎ-17 ಬಿ-4291) ಸಂಚರಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿದ್ದಾಪುರ ವಲಯ ಅರಣ್ಯ ಸಿಬ್ಬಂದಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

ಬಂಧಿತ ಆರೋಪಿಗಳನ್ನು ಸಿದ್ದಾಪುರ ತಾಲೂಕಿನ ಹುಸೂರಿನ ವಿರೇಂದ್ರ ಮಾರುತಿ ನಾಯ್ಕ, ಕುಂಬಾರಕುಳಿಯ ಶಿವಾನಂದ ಮಹಾಬಲೇಶ್ವರ ನಾಯ್ಕ ಹಾಗೂ ಸುಂಕತ್ತಿಯ ವಾಸುದೇವ ಈರ ನಾಯ್ಕ ಎಂದು ಗುರುತಿಸಲಾಗಿದೆ. ಆರೋಪಿಗಳು ಗುಂಡು ಹಾರಿಸಿ ಕಡವೆ ಹಾಗೂ ಬರ್ಕ (ಬೊಗಳುವ ಜಿಂಕೆ) ಪ್ರಾಣಿಗಳನ್ನು ಬೇಟೆಯಾಡಿ, ಅವುಗಳ ಕಳೇಬರವನ್ನು ವಾಹನದಲ್ಲಿ ಸಾಗಿಸುತ್ತಿದ್ದರೆಂದು ತನಿಖೆಯಿಂದ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜೂನ್ 20ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; 12.30 ಲಕ್ಷ ಮತದಾರರ ವಿವರಗಳ ಮರುಪರಿಶೀಲನೆ

ಕಾರ್ಯಾಚರಣೆ ವೇಳೆ ಬೇಟೆಯಾಡಲಾದ ಪ್ರಾಣಿಗಳ ಕಳೇಬರ, ಕೃತ್ಯಕ್ಕೆ ಬಳಸಿದ ಬಂದೂಕು ಹಾಗೂ ಸಾಗಾಣಿಕೆಗೆ ಬಳಸಲಾಗಿದ್ದ ವಾಹನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣದ ತನಿಖೆಯ ಭಾಗವಾಗಿ ವನ್ಯಜೀವಿ ವಿಧಿವಿಜ್ಞಾನ ತಜ್ಞರ ನೆರವಿನಿಂದ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಎಚ್. ಸೂರ್ಯವಂಶಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪವಿತ್ರಾ ಯು.ಜೆ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯನ್ನು ಸಿದ್ದಾಪುರ ವಲಯ ಅರಣ್ಯಾಧಿಕಾರಿ ಅಜಯಕುಮಾರ ಎಂ.ಎಸ್. ನೇತೃತ್ವ ವಹಿಸಿದ್ದರು.

ಉಪ ವಲಯ ಅರಣ್ಯಾಧಿಕಾರಿಗಳಾದ ರಾಘವೇಂದ್ರ ಆರ್.ಡಿ., ಗುಲಾಶೀರ್ ಎಂ. ನದಾಪ್, ಗುಡದಯ್ಯ ಅಪ್ಪಿನಬೈಲ್, ಅಡಿವೆಪ್ಪ ಸಂಗಪ್ಪ ಕನ್ನೂರ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಅರಣ್ಯ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಬೇಟೆ ಚಟುವಟಿಕೆಗಳ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...

ರಾಸಾಯನಿಕಗಳಿಲ್ಲದೆ ಎಕರೆಗೆ 80 ಟನ್ ಕಬ್ಬು ಬೆಳೆದು ಗಮನ ಸೆಳೆದ ರೈತ ಮಹೇಶ್

ರಾಸಾಯನಿಕ ಗೊಬ್ಬರಗಳು ಹಾಗೂ ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆ,...

ಧಾರವಾಡ | ಭರವಸೆಗಳನ್ನು ಈಡೇರಿಸಲು ನ.26ರವರೆಗೆ ಗಡುವು: ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ...