ಸಿದ್ದಾಪುರ | ರೈತರ ಸಂಕಷ್ಟದ ನಡುವೆ ಕೋಟಿ ವೆಚ್ಚದ ಉತ್ಸವ ಬೇಕಿತ್ತೇ?; ಜಿಲ್ಲಾಡಳಿತದ ವಿರುದ್ಧ ಶಾಸಕ ಭೀಮಣ್ಣ ನಾಯ್ಕ ಆಕ್ರೋಶ

Date:

ಸಿದ್ದಾಪುರ: ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳ ಮೂಲಕ ಬಡವರ ಕೈಹಿಡಿಯುವುದರ ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಗೂ ಪೂರಕವಾದ ಅನುದಾನ ಬಿಡುಗಡೆ ಮಾಡುತ್ತಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುತ್ತಿದ್ದರೂ, ಜಿಲ್ಲಾಡಳಿತದ ಮಂದಗತಿಯ ಧೋರಣೆಯಿಂದಾಗಿ ಶಿರಸಿ-ಸಿದ್ದಾಪುರ ಕ್ಷೇತ್ರದ ಪ್ರಗತಿಗೆ ಹಿನ್ನಡೆಯಾಗುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಮಂಗಳವಾರ ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತದ ಕಾರ್ಯವೈಖರಿಯನ್ನು “ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ” ಎಂಬ ಗಾದೆ ಮಾತಿಗೆ ಹೋಲಿಸಿದರು. ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ರೂ. ಅನುದಾನ ಘೋಷಿಸಿ, ಶಾಸಕರು ಅನುಮೋದನೆಗಾಗಿ ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲಾಧಿಕಾರಿಗಳಿಗೇ ಜವಾಬ್ದಾರಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಆದರೆ, ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಸಂಬಂಧಿಸಿದ 50 ಕೋಟಿ ರೂ. ಮೊತ್ತದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಕಳುಹಿಸಿದರೂ ಜಿಲ್ಲಾಧಿಕಾರಿಗಳು ಈವರೆಗೆ ಅನುಮೋದನೆ ನೀಡಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರು ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರೂ ಜಿಲ್ಲಾಡಳಿತ ಮಾತ್ರ ಮೌನಕ್ಕೆ ಶರಣಾಗಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಟ್ಯಾಗೋರ್ ಕಡಲತೀರದಲ್ಲಿ ಮಹಿಳೆ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ!

ಮುಖ್ಯಮಂತ್ರಿಗಳ ಅಭಿವೃದ್ಧಿ ವೇಗಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತವು ‘ರೋಡ್ ಬ್ರೇಕ್’ ಹಾಕಿದಂತೆ ವರ್ತಿಸುತ್ತಿರುವುದು ಕ್ಷೇತ್ರದ ಜನತೆಗೆ ಮಾಡುತ್ತಿರುವ ಅನ್ಯಾಯ ಎಂದು ಶಾಸಕರು ಆಕ್ರೋಶ ಹೊರಹಾಕಿದರು. ಅಡಿಕೆ ಬೆಳೆಗಾರರು ಸೇರಿದಂತೆ ಜಿಲ್ಲೆಯ ರೈತ ಸಮೂಹ ಇಂದು ಸಾಲು ಸಾಲು ಸಮಸ್ಯೆಗಳಿಂದ ಕಂಗೆಟ್ಟಿದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರ ನೆರವಿಗೆ ಧಾವಿಸಬೇಕಾದ ಜಿಲ್ಲಾಡಳಿತವು, ಕೋಟ್ಯಂತರ ರೂಪಾಯಿಗಳನ್ನು ದುಂದುವೆಚ್ಚ ಮಾಡಿ ‘ಕರಾವಳಿ ಉತ್ಸವ’ ಆಯೋಜಿಸುತ್ತಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಹೊತ್ತಿನಲ್ಲಿ ಇಂತಹ ವೈಭವದ ಆಚರಣೆಗಳ ಅಗತ್ಯವಿತ್ತೇ ಎನ್ನುವ ಸಾರ್ವಜನಿಕರ ಪ್ರಶ್ನೆಗೆ ಜಿಲ್ಲಾಡಳಿತವೇ ಉತ್ತರಿಸಬೇಕಿದೆ ಎಂದು ಅವರು ಹೇಳಿದರು. ರಾಜ್ಯ ಸರ್ಕಾರವು ಜನಪರ ಕೆಲಸಗಳಿಗೆ ಹಣದ ಕೊರತೆ ಮಾಡದಿದ್ದರೂ, ಸ್ಥಳೀಯ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕಾದ ಅಧಿಕಾರಿಗಳ ವಿಳಂಬ ನೀತಿಯಿಂದಾಗಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಳ್ಳುತ್ತಿರುವುದು ಕ್ಷೇತ್ರದ ಜನರಲ್ಲಿ ಬೇಸರ ಮೂಡಿಸಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...