ಮೀನುಗಾರರ ‘ಕೈ’ ಹಿಡಿದ ಬಜೆಟ್ : ಭರಫೂರ ಭರವಸೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

Date:

3.27 ಲಕ್ಷ ಕೋಟಿ ರೂ.ಯ 14ನೇ ಬಜೆಟ್ ಅನ್ನು ಶುಕ್ರವಾರ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೀನುಗಾರರಿಗೆ ಭರಪೂರ ಭರವಸೆಯನ್ನು ಘೋಷಿಸಿದ್ದಾರೆ. ಆ ಮೂಲಕ ಸಂಕಷ್ಟದಲ್ಲಿರುವ ಮೀನುಗಾರಿಕಾ ಕ್ಷೇತ್ರವನ್ನು ಲಾಭದಾಯಕ ಉದ್ಯಮವನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡಿದ್ದಾರೆ.

- Advertisement -

ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರದ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ಇದರ ಜೊತೆಗೆ ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸುವ ಭರವಸೆ ನೀಡಿದ್ದು, ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ ಗಾತ್ರ 3.27 ಲಕ್ಷ ಕೋಟಿ ರೂ. | 5 ಗ್ಯಾರಂಟಿ ಯೋಜನೆಗಳಿಗೆ ಬೇಕು ರೂ. 52,000 ಕೋಟಿ

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌-ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ಹಾಗೂ ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ವಿಪುಲ ಅವಕಾಶಗಳನ್ನು ಉಪಯೋಗಿಸುವುದಾಗಿ ತಿಳಿಸಿರುವ ಸರ್ಕಾರ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸುವುದಾಗಿಯೂ ತಿಳಿಸಿದೆ.

ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದು, ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಡತನದ ಸವಾಲಿನಿಂದ ಗವರ್ನರ್ ಪೀಠದವರೆಗೆ: ಅಮೆರಿಕದಲ್ಲಿ ಮೂರು ಬಾರಿ ಇತಿಹಾಸ ಸೃಷ್ಟಿಸಿದ ಡೆಬ್ ಹಾಲಂಡ್

ಅಮೆರಿಕದ ರಾಜಕೀಯ ವ್ಯವಸ್ಥೆಯಲ್ಲಿ ವಂಚಿತ ಜನಾಂಗದ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರುವುದು ಸಾಮಾನ್ಯ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...

ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ...

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...