ಸಿಎಜಿ ವರದಿಯ ಬಗ್ಗೆ ತನಿಖೆ ನಡೆಸುವ ತಾಕತ್ತು ಮೋದಿಗೆ ಇದೆಯಾ?: ಸಿದ್ದರಾಮಯ್ಯ ಸವಾಲು

Date:

  • ಮೃತಪಟ್ಟ 88,000 ಫಲಾನುಭವಿಗಳ ಹೆಸರಿನಲ್ಲಿ ಹೊಸದಾಗಿ ಬಿಲ್‌
  • ಪಿಎಂ ಕೇರ್ಸ್‌ ಫಂಡ್ ಯಾರಿಗೆ ಲಾಭವಾಗುತ್ತಿದೆ ಹೇಳಬಲ್ಲಿರಾ: ಪ್ರಶ್ನೆ

ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದ ಗುತ್ತಿಗೆದಾರರು ಮಾಡಿರುವ 40% ಕಮಿಷನ್ ಆರೋಪದ ತನಿಖೆಗೆ ನಿವೃತ್ತ ನ್ಯಾ. ಎಚ್‌ ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚನೆ ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ. ನಿಮ್ಮದೇ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಎಜಿ ನೀಡಿರುವ ವರದಿಯ ಬಗ್ಗೆ ನೀವು ಯಾವಾಗ ತನಿಖೆ ನಡೆಸಿ ’ನಾ ಖಾವೂಂಗಾ ನಾ ಖಾನೆ ದೂಂಗಾ’ ಎಂಬ ನಿಮ್ಮ ಘೋಷಣೆಗೆ ಅನುಗುಣವಾಗಿ ನುಡಿದಂತೆ ನಡೆಯುವಿರಾ? ಎಂದು ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಮೂಗಿನ ಕೆಳಗೆ ದ್ವಾರಕಾ ಎಕ್ಸ್‌ಪ್ರೆಸ್‌ ಹೈವೇ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ 250 ಕೋಟಿ ರೂ. ಕೊಳ್ಳೆ ಹೊಡೆಯಲಾಗಿದೆ. 5 ಟೋಲ್‌ ಪ್ಲಾಜಾಗಳಲ್ಲಿ 132 ಕೋಟಿ ಹಣ ಲೂಟಿ ಮಾಡಲಾಗಿದೆ. ನೀವು ಪದೇ ಪದೇ ಉಲ್ಲೇಖಿಸುವ ‘ಆಯುಷ್ಮಾನ್‌ ಭಾರತ್‌’ ಯೋಜನೆಯಲ್ಲಂತೂ ಮೃತಪಟ್ಟ ಸುಮಾರು 88,೦೦೦ ಫಲಾನುಭವಿಗಳ ಹೆಸರಿನಲ್ಲಿ ಹೊಸದಾಗಿ ಬಿಲ್‌ಗಳನ್ನು ಕ್ಲೈಮ್‌ ಮಾಡಿ ಹಣ ನುಂಗಿ ಹಾಕಲಾಗಿದೆ ಎಂದು ಸಿಎಜಿ ವರದಿ ಮಾಡಿದೆ. ಇದರ ಬಗ್ಗೆ ತನಿಖೆ ನಡೆಸುವ ಧೈರ್ಯ ತೋರಿಸುವಿರಾ” ಎಂದು ಪ್ರಶ್ನಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಅಧ್ಯಕ್ಷರೂ ಆಗಿದ್ದೀರಿ. ಭಾರತ್ ಮಾಲಾ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ ರೂ.15.37 ಕೋಟಿಗಳಿಂದ ರೂ.32 ಕೋಟಿವರೆಗೆ ಹೆಚ್ಚುವರಿ ಖರ್ಚು ತೋರಿಸಲಾಗಿದೆ ಎಂದು ಸಿಎಜಿ ವರದಿ ಮಾಡಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು?” ಎಂದು ಕೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸಿಎಂ ಆಗಿದ್ದ ಕುಮಾರಸ್ವಾಮಿ, ಬೊಮ್ಮಾಯಿಗೆ ಕಾವೇರಿ ನೀರಿನ ಹಂಚಿಕೆ ಬಗ್ಗೆ ಕನಿಷ್ಠ ಜ್ಞಾನವಿಲ್ಲವೇ: ಲಕ್ಷ್ಮಣ್‌ ಪ್ರಶ್ನೆ

“ಸಂಪರ್ಕ ವ್ಯವಸ್ಥೆ ಸುಧಾರಣೆಯ ಅತಿ ಪ್ರಚಾರದ ಭಾರತ ಮಾಲಾ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿಯೇ ಅಕ್ರಮ ನಡೆದಿದೆ ಮತ್ತು ಆ ಯೋಜನೆ ಬಗೆಗೆ ವಿಸ್ತೃತವಾದ ವರದಿಯೇ ಸಲ್ಲಿಕೆಯಾಗಿಲ್ಲ. ಹೀಗಿದ್ದರೂ 3,500 ಕೋಟಿ ಹಣವನ್ನು ವರ್ಗಾಯಿಸಲಾಗಿದೆ ಎಂದು ಸಿಎಜಿ ಲೋಪವನ್ನು ಎತ್ತಿ ತೋರಿಸಿದೆ. ಪ್ರಧಾನಿ ಮೋದಿ ಅವರೇ, ಈ ಬಗ್ಗೆ ನಿಮ್ಮ ಮೌನವನ್ನು ಅಕ್ರಮದಲ್ಲಿ ಷಾಮೀಲಾಗಿದ್ದೀರಿ ಎಂದು ವ್ಯಾಖ್ಯಾನಿಸಬಹುದೇ?” ಎಂದಿದ್ದಾರೆ.

“ನೀವು I.N.D.I.A ಒಕ್ಕೂಟವನ್ನು ಭ್ರಷ್ಟರ ಒಕ್ಕೂಟವೆಂದು ಸುಳ್ಳು ಆರೋಪ ಹೊರಿಸಿ ಸಂಭ್ರಮಿಸುತ್ತೀರಿ. ನಿಮ್ಮದೇ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಸಿಎಜಿ ವರದಿಯು ಬಟಾಬಯಲು ಮಾಡಿದ್ದರೂ ಕಣ್ಣು, ಬಾಯಿ ಮುಚ್ಚಿ ಕೂತಿದ್ದೀರಿ. ಇದು ಆತ್ಮವಂಚಕ ನಡವಳಿಕೆ ಅಲ್ಲವೇ?” ಎಂದು ಕುಟುಕಿದ್ದಾರೆ.

“ಅಯೋಧ್ಯೆಯ ರಾಮ ಮಂದಿರ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ನಿಮ್ಮದೇ ಪರಿವಾರ ಆರೋಪಗಳನ್ನು ಮಾಡತೊಡಗಿದೆ. ‘ಪಿಎಂ ಕೇರ್ಸ್‌ ಫಂಡ್’‌ ಅನ್ನು ಸರ್ಕಾರದ್ದೆಂದು ಭಾವಿಸಿ ಮುಗ್ಧ ಜನತೆ ಅಪಾರ ಪ್ರಮಾಣದಲ್ಲಿ ಹಣವನ್ನು ದಾನವಾಗಿ ನೀಡುತ್ತಿದ್ದಾರೆ. ಆದರೆ, ನಿಮ್ಮ ಸರ್ಕಾರ ಅದನ್ನು ಸಾರ್ವಜನಿಕ ದತ್ತಿ ಟ್ರಸ್ಟ್‌ ಎಂದು ಹೆಸರಿಸಿ ಅದನ್ನು ಮಾಹಿತಿ ಹಕ್ಕಿನಿಂದ ಹೊರಗಿರಿಸಿದೆ. ಈ ದುಡ್ಡಿನಿಂದ ಯಾರಿಗೆ ಲಾಭವಾಗುತ್ತಿದೆ ಹೇಳಬಲ್ಲಿರಾ?”ಎಂದು ಸವಾಲು ಹಾಕಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು...

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...