ಕನ್ನಡ ಭಾಷೆಯಲ್ಲಿಯೂ ಸಿಆರ್‌ಪಿಎಫ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ: ಸಿದ್ದರಾಮಯ್ಯ ಆಗ್ರಹ

Date:

  • ʼಪ್ರಧಾನಿ ನರೇಂದ್ರ ಮೋದಿ ಸಿಆರ್‌ಪಿಎಫ್ ಪರೀಕ್ಷೆ ಅನ್ಯಾಯ ಸರಿಪಡಿಸಬೇಕುʼ
  • ʼಮುಖ್ಯಮಂತ್ರಿ ಬೊಮ್ಮಾಯಿ, ಬಿಜೆಪಿ ಸಂಸದರು ಪ್ರಧಾನಿ ಮೇಲೆ ಒತ್ತಡ ಹೇರಲಿʼ

ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ನೇಮಕಾತಿ ಪರೀಕ್ಷೆಯಲ್ಲಿ ಭಾಷೆಯ ಸಮಸ್ಯೆಯಿಂದಾಗಿ ಜ್ಞಾನ, ಅರ್ಹತೆ ಇರುವ ಕನ್ನಡಿಗರು ಉದ್ಯೋಗವಂಚಿತರಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯಪ್ರವೇಶಿಸಿ ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ಅವರು ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, “ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜಕೀಯ ಪಕ್ಷಗಳ ವಿರೋಧ; ರಿಮೋಟ್ ಮತದಾನ ರದ್ದುಗೊಳಿಸಿದ ಚುನಾವಣಾ ಆಯೋಗ

“ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ” ಎಂದು ಎಚ್ಚರಿಸಿದ್ದಾರೆ.

“ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು” ಎಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ಮುಂಗಾರು ವಿಳಂಬ: ರಾಜ್ಯದ 11 ಜಲಾಶಯಗಳು ಖಾಲಿ!

ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ ಮುಂಗಾರು...

ಚಿಕ್ಕಮಗಳೂರು | ಕೆನರಾ ಬ್ಯಾಂಕ್‌ ಶಾಖೆ ಸ್ಥಳಾಂತರಿಸದಂತೆ ನಾಗರಿಕರ ಒತ್ತಾಯ

ಚಿಕ್ಕಮಗಳೂರು ನಗರದ ಕೋಟೆಯಲ್ಲಿ ಇರುವ ಕೆನರಾ ಬ್ಯಾಂಕ್ ಶಾಖೆಯನ್ನು ಎಸ್‌ಟಿಜೆ ಕಾಲೇಜಿನಲ್ಲಿರುವ...

ವಿಜಯಪುರ | ಶಿಕ್ಷಕನ ಮೇಲೆ ಪೋಲಿಸ್ ಪೇದೆಯ ಗೂಂಡಾ ವರ್ತನೆ; ಆರೋಪ

ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ಪೊಲೀಸ್‌ ಪೇದೆಯೋರ್ವ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಅವಾಚ್ಯ...