ದಾವಣಗೆರೆ | ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ ಎಂದು ಡಂಗುರ ಸಾರಿದ ವ್ಯಕ್ತಿ

Date:

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿದೆ. ಈ ಬೆನ್ನಲ್ಲೇ ದಾವಣಗೆರೆ ತಾಲೂಕಿನ ಗೋಣಿವಾಡ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮಟೆ ಬಾರಿಸುತ್ತ, ‘ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ’ ಎಂಬ ಸಂದೇಶ ಸಾರಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

“ಇವತ್ತಿನಿಂದ ಯಾರೂ ಕರೆಂಟ್ ಬಿಲ್ ಕಟ್ಟಂಗಿಲ್ಲ. ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅರ್ಡರ್ ಮಾಡಿ ಕಳುಹಿಸಿದ್ದಾರೆ” ಎಂದು ವ್ಯಕ್ತಿಯೊಬ್ಬರು ಗೋಣಿವಾಡ ಗ್ರಾಮದಲ್ಲಿ ಸಂಚರಿಸಿ ತಮಟೆ ಬಾರಿಸುತ್ತ ಸಂದೇಶ ಸಾರಿದ್ದಾರೆ.

ತ್ವರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿರುವ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನ ನಾಯಕರು ವಿದ್ಯುತ್‌ ಬಿಲ್‌ ಕಟ್ಟಬೇಡಿ ಎಂದು ಕರೆ ನೀಡಿದ ಬೆನ್ನಲ್ಲೇ ವಿದ್ಯುತ್ ಬಿಲ್ ಕಟ್ಟುವುದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿರೋಧ ವ್ಯಕ್ತವಾಗುತ್ತಿದೆ.

ಕಾಂಗ್ರೆಸ್‌ ನೀಡಿದ್ದ ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ ಎಂದು ಹೇಳಲಾಗಿತ್ತು. ಈ ಹಿನ್ನೆಲೆ ಅನೇಕ ಕಡೆ ಟಿಕೆಟ್‌ ಖರೀದಿಸದೇ ನಿರ್ವಾಹಕರ ಜೊತೆಗೆ ವಾಗ್ವಾದ ನಡೆಸುವ ವಿಡಿಯೋಗಳು ವೈರಲ್‌ ಆಗುತ್ತಿವೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಕುಕ್ಕರ್‌ ಸ್ಪೋಟ ಪ್ರಕರಣ; ಪರ-ವಿರೋಧ ಚರ್ಚೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...