ಕಳ್ಳಭಟ್ಟಿಗೆ ಕಡಿವಾಣ ಹಾಕಿ ಬಡವರ ಆರೋಗ್ಯ, ಆದಾಯ ಕಾಪಾಡಿ: ಸಿಎಂ ಸಿದ್ದರಾಮಯ್ಯ

Date:

  • ಗಡಿಗಳಲ್ಲಿ ತೀವ್ರ ನಿಗಾ ವಹಿಸಿ ಅಕ್ರಮ ಮದ್ಯ ನುಸುಳುವಿಕೆ ತಪ್ಪಿಸಿ
  • ಇಲಾಖೆಯ ಪ್ರಸಕ್ತ ವರ್ಷದ ರಾಜಸ್ವ ಸಂಗ್ರಹ ಗುರಿ ₹36,000 ಕೋಟಿ

ಕಳ್ಳಭಟ್ಟಿಗೆ ಕಡಿವಾಣ ಹಾಕಿ, ಅಕ್ರಮ ಮದ್ಯ ನುಸುಳುವಿಕೆ ತಪ್ಪಿಸಿ, ಬಾಕಿ ತೆರಿಗೆ ವಸೂಲಿ ಮಾಡಿ ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿ ಸಾಧಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆಯಲ್ಲಿ ಈ ಸೂಚನೆ ನೀಡಿದರು.

“ಇಲಾಖೆಯ ಪ್ರಸಕ್ತ ವರ್ಷದ ರಾಜಸ್ವ ಸಂಗ್ರಹ ಗುರಿ ₹36,000 ಕೋಟಿ ಇದ್ದು, ತೆರಿಗೆ ಸಂಗ್ರಹದ ಬೆಳವಣಿಗೆ ದರ ಶೇ.5.31ರಷ್ಟಿದೆ. ನಿಗದಿತ ಗುರಿ ಸಾಧನೆಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು. ರಾಜ್ಯದ ಗಡಿ ಭಾಗಗಳಲ್ಲಿ, ವಿಶೇಷವಾಗಿ ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಣಿಕೆ ಕುರಿತು ಜಾರಿ ದಳದವರು ಹೆಚ್ಚಿನ ನಿಗಾ ವಹಿಸಬೇಕು” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಕಳ್ಳಭಟ್ಟಿ ಮದ್ಯ ತಯಾರಿಕೆ, ಮಾರಾಟದಿಂದ ಬಡವರ ಆದಾಯ ಮತ್ತು ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತದೆ. ಇದರಿಂದ ಕಳ್ಳಭಟ್ಟಿ ಮದ್ಯ ತಯಾರಿಕೆ ಮತ್ತು ಮಾರಾಟವನ್ನು ಮಟ್ಟಹಾಕಬೇಕು. ಎಲ್ಲ ಕಡೆ ಜಾಗೃತದಳ ಕಟ್ಟೆಚ್ಚರ ವಹಿಸಬೇಕು. ಎಲ್ಲ ಉಪ ಆಯುಕ್ತರು ರಾಜಸ್ವ ಸಂಗ್ರಹ ಹೆಚ್ಚಳಕ್ಕೆ ಆದ್ಯತೆ ನೀಡಬೇಕು” ಎಂದು ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ಆತ್ಮಹತ್ಯೆ ತೀವ್ರ ಹೆಚ್ಚಳ; ಅನ್ನದಾತರ ಬದುಕಿಗೆ ಬೇಕಿದೆ ಭರವಸೆ

“ಹಳೆ ಬಾಕಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು. ಅಬಕಾರಿ ಇಲಾಖೆಯಲ್ಲಿ ಸುಧಾರಣಾ ಕ್ರಮಗಳ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು. ಗಡಿ ಭಾಗಗಳ ಚೆಕ್‌ಪೋಸ್ಟಿನಲ್ಲಿ ಹೋಂ ಗಾರ್ಡ್‌ಗಳ ಸೇವೆ ಪಡೆದುಕೊಂಡು, ಇನ್ನಷ್ಟು ಬಲಪಡಿಸಲು ಹಾಗೂ ಇತರ ಸೌಲಭ್ಯಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ಅಬಕಾರಿ ಆಯುಕ್ತ ರವಿಶಂಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರಿಂದ ಪ್ರಕಟಣೆ

ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡ್‌ನ ರೈಲ್ವೆ ಕಿ.ಮಿ ನಂ-115/000ರಲ್ಲಿ ಅಕ್ಟೋಬರ್...

ದಾವಣಗೆರೆ | ಗಾಂಧಿ ಜಯಂತಿ ಆಚರಣೆ

ಭಾರತಕ್ಕೆ ಸ್ವಾತಂತ್ರ್ಯಕ್ಕೆ ತಂದುಕೊಟ್ಟ ಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳು ಇಂದಿಗೂ...

ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಬೀದಿ...

ಬೀದರ್ | ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ; ಮೂಲಸೌಕರ್ಯ ಒದಗಿಸಲು ಅಲೆಮಾರಿಗಳ ಆಗ್ರಹ

ಅಲೆಮಾರಿ ಸಮುದಾಯದ ವಸತಿ ವಂಚಿತ ಕುಟುಂಬಗಳಿಗೆ ನಿವೇಶನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು...