ಎಡಪಂಥೀಯ ವಿಚಾರಧಾರೆಯ ಕೈಗೊಂಬೆಯಾಗಿದ್ದಾರೆ ಸಿದ್ದರಾಮಯ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕೆ

Date:

ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರ ನಡೆ ನೋಡಿದರೆ ಅವರು ಎಡಪಂಥೀಯ ವಿಚಾರಧಾರೆಯ ಕೈಗೊಂಬೆಯಾಗಿದ್ದಾರೆ ಎಂಬುದು ತಿಳಿಯುತ್ತೆ ಎಂದು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದರು.

- Advertisement -

ಶಿರಸಿ ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಿರುವ ಪಠ್ಯದಲ್ಲಿ ಯಾವ ತಪ್ಪು ಇಲ್ಲ. ಅದನ್ನು ಬರೆದ ಸಾಹಿತಿಗಳ ಮೇಲೆ ಕಾಂಗ್ರೆಸ್‌ಗೆ ಸಮಾಧಾನ ಇಲ್ಲದ ಕಾರಣ ಪರಿಷ್ಕರಣೆ ಆಗುತ್ತಿದೆ. ಆ ಮೂಲಕ ಮತ್ತೊಮ್ಮೆ ಗುಲಾಮಿತನದ ಮನಸ್ಥಿತಿ ತರಲು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಮುಂದಾಗಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಈ ನೆಲದ ನೈಜ ಪರಿಸ್ಥಿತಿ ತಿಳಿಸುವ ವಿಷಯಗಳು ಪ್ರಸ್ತುತ ಹಂಚಿಕೆಯಾದ ಪುಸ್ತಕದಲ್ಲಿದೆ. ಈಗ ಅದನ್ನು ತೆಗೆಯುವ ದ್ವೇಷದ ರಾಜಕೀಯ ಮುನ್ನೆಲೆಗೆ ತರಲಾಗುತ್ತಿದೆ. ಸಿದ್ದರಾಮಯ್ಯ ಅವರು ಎಡಪಂಥೀಯ ವಿಚಾರಧಾರೆಯ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಅದರ ಭಾಗವಾಗಿಯೇ ಪಠ್ಯಪುಸ್ತಕ ಪರಿಷ್ಕರಣೆ ತರಾತುರಿ ಅವರಲ್ಲಿ ಕಾಣುತ್ತಿದೆ” ಎಂದು ಹರಿಹಾಯ್ದರು.

“ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ ಕಾಂಗ್ರೆಸ್‌ ಸರ್ಕಾರದ ನಡೆ ತಿಂಗಳೊಳಗೆ ಜನರ ಅರಿವಿಗೆ ಬರುತ್ತಿದೆ. ಆಡಳಿತ ಗೊಂದಲದ ಗೂಡಾಗಿದೆ. ಸಚಿವರು ತಮ್ಮ ಖಾತೆಗಳ ಜವಾಬ್ದಾರಿ ಅರಿಯುವ ಮುನ್ನ ಗೊಂದಲ ಸೃಷ್ಟಿಸುತ್ತಿದ್ದಾರೆ. ಶಿಕ್ಷಣ ಇಲಾಖೆ ಸರಳವಾಗಿ ಅರಿವಿಗೆ ಬರುವ ಇಲಾಖೆಯಲ್ಲ. ಅನಗತ್ಯವಾಗಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಡಿ” ಎಂದು ಒತ್ತಾಯಿಸಿದರು.

“ಟಿಪ್ಪುವನ್ನು ಒಪ್ಪಿಕೊಂಡ ಇವರಿಗೆ ಭಾರತದ ಇತಿಹಾಸ ಹೇಗೆ ಶ್ರೇಷ್ಠವಾಗಿ ಕಾಣಲು ಸಾಧ್ಯ? ಪಾರದರ್ಶಕ ಚರ್ಚೆ, ಸಾಧಕ ಬಾಧಕ ಅರಿತ ನಂತರವೇ ಪರಿಷ್ಕರಣೆ ಆಗಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...