ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿ ಕೈವಾಡ: ಸಿದ್ದರಾಮಯ್ಯ

Date:

  • ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧಿಸಿದೆ
  • ಕಾನೂನು ರೀತಿಯ ನಿರ್ಣಯದಂತೆ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಆಗಿದೆ

“ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು. ಈ ಬಗ್ಗೆ ಯಡಿಯೂರಪ್ಪ ಅವರೇ ಬಂಜಾರ ಸಮುದಾಯದ ಜನ ತಪ್ಪು ಗ್ರಹಿಕೆಯಿಂದ ಕಲ್ಲು ತೂರಾಟ ಮಾಡಿದ್ದಾರೆ ಎಂದಿದ್ದಾರೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಾಡಾಳ್ ವಿರೂಪಾಕ್ಷಪ್ಪ ಬಂಧನ ವಿಚಾರವಾಗಿ ಬೆಂಗಳೂರಿನಲ್ಲಿ ಮಂಗಳವಾರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, “ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧ ಮಾಡಿಕೊಂಡು ಬಂದಿದೆ. ಈ ಉದ್ದೇಶಕ್ಕೆ ಈಗ ವಿರೋಧ ಮಾಡಿರಬಹುದು” ಎಂದರು.

“ಮಾಡಾಳ್ ವಿರೂಪಾಕ್ಷಪ್ಪ ಬಂಧನ ಮೊದಲ ದಿನವೇ ಆಗಬೇಕಿತ್ತು, ತಡವಾಗಿ ಆಗಿದೆ. ಕಾನೂನು ರೀತಿಯ ನಿರ್ಣಯದಂತೆ ಆಗಿದೆ. ರೆಡ್ ಹ್ಯಾಂಡ್ ಆಗಿ ಅವರ ಮಗ ಸಿಕ್ಕಿಬಿದ್ದಿರುವುದರಿಂದ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಬಂಧನ ಸರಿಯಾಗಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“2018ರ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತು ಎಂದು ಸಿ ಪಿ ಯೋಗೀಶ್ವರ್ ಸತ್ಯವನ್ನೇ ಹೇಳಿದ್ದಾರೆ. ಅವರಿಗೆ ಧನ್ಯವಾದ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...