ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಆಯ್ಕೆ

Date:

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್‌ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ಜಟಿಲವಾಗಿತ್ತು. ಕೊನೆಗೂ ಸಿದ್ದರಾಮಯ್ಯ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಸಚಿವ ಸಂಪುಟ ಸೇರಲಿದ್ದಾರೆ.

- Advertisement -

ಹಲವು ಹಗ್ಗ-ಜಗ್ಗಾಟಗಳ ಮಧ್ಯೆ ಸಿಎಂ ಆಯ್ಕೆ ಹೈಕಮಾಂಡ್‌ಗೆ ಕಗ್ಗಂಟಾಗಿತ್ತು. ಈ ಮಧ್ಯೆ ಕೊನೆಗೂ ಮುಖ್ಯಮಂತ್ರಿ ಆಯ್ಕೆಯಾಗಿದ್ದು, ಸಿದ್ದರಾಮಯ್ಯ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆಗೂ ಡಿ.ಕೆ.ಶಿವಕುಮಾರ್‌ ಅವರ ಮನವೊಲಿಸುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬುಧವಾರ ತಡರಾತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಜೊತೆಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಮಾತುಕತೆ ನಡೆಸಿ, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡರು. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ನಿರ್ಧಾರಕ್ಕೆ ಒಪ್ಪಿಗೆ ಪಡೆಯಲಾಯಿತು ಎನ್ನಲಾಗಿದೆ.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಿ ಇಬ್ಬರೂ ನಾಯಕರನ್ನು ಕೂರಿಸಿಕೊಂಡು ಮಾತನಾಡುತ್ತಿದ್ದಾರೆ. ಪೂರ್ಣಾವಧಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲು, ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗುವಂತೆ ಒಪ್ಪಿಸಿದ್ದಾರೆ.

ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಸಲುವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯುತ್ತಿದ್ದು, ನೂತನ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರು ಹಾಜರಿರಬೇಕಾಗಿ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...